ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ದುರ್ಬಲಗೊಂಡಿದ್ದು, ಎಂಸಿಎಕ್ಸ್‌ನಲ್ಲಿ ಜೂನ್ ಚಿನ್ನದ ಭವಿಷ್ಯವು 10 ಗ್ರಾಂಗೆ 44,977 ರೂಪಾಯಿ ಆಗಿದೆ. ಬೆಳ್ಳಿ ದರವು ಶೇಕಡಾ 0.35ರಷ್ಟು ಇಳಿಕೆಯಾಗಿದ್ದು, ಪ್ರತಿ ಕೆಜಿಗೆ 63,595 ಕ್ಕೆ ತಲುಪಿದೆ.
ಕಳೆದ ವಹಿವಾಟಿನಲ್ಲಿ ಚಿನ್ನವು ಶೇಕಡಾ 1ರಷ್ಟು ಮತ್ತು ಬೆಳ್ಳಿ ಶೇಕಡಾ 0.9ರಷ್ಟು ಏರಿಕೆಯಾಗಿದೆ. ಈ ವರ್ಷದ ಮೊದಲ ಮೂರು ತಿಂಗಳಲ್ಲಿ 10 ಗ್ರಾಂಗೆ 5,000 ರೂಪಾಯಿನಷ್ಟು ಕಡಿಮೆಯಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ 56,200 ರೂಪಾಯಿಗೆ ಹೋಲಿಸಿದರೆ, ಸುಮಾರು 11,000 ರೂಪಾಯಿ ಕಡಿಮೆಯಾಗಿದೆ.

ಸ್ಪಾಟ್ ಚಿನ್ನವು ಔನ್ಸ್‌ಗೆ ಶೇಕಡಾ 0.2ರಷ್ಟು ಏರಿಕೆಯಾಗಿ 1,710.28 ಡಾಲರ್‌ಗೆ ತಲುಪಿದೆ. ಇತರ ಅಮೂಲ್ಯ ಲೋಹಗಳ ಪೈಕಿ, ಬೆಳ್ಳಿ ಶೇಕಡಾ 0.1ರಷ್ಟು ಇಳಿದು 24.36 ಡಾಲರ್‌ಗೆ ತಲುಪಿದ್ದರೆ, ಪ್ಲಾಟಿನಂ ಶೇಕಡಾ 0.3ರಷ್ಟು ಇಳಿಕೆಯಾಗಿ 1,184 ಡಾಲರ್‌ಗೆ ತಲುಪಿದೆ.
ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಸಾರಿಗೆ, ಟೆಲಿಕಾಂಗಳು ಮತ್ತು ಇಂಧನ ಮೂಲಸೌಕರ್ಯಗಳಲ್ಲಿ 2 ಟ್ರಿಲಿಯನ್‌ಗಿಂತ ಹೆಚ್ಚಿನ ಹೂಡಿಕೆ ಕುರಿತು ಯೋಜನೆಯನ್ನು ತಿಳಿಸಿದ ಬಳಿಕ ಇಂದು ಚಿನ್ನದ ಬೆಲೆ ಏರಿಳಿತಕಂಡಿವೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications