ಚಿನ್ನದ ಬೆಲೆಯಲ್ಲಿ ವಾರದ ಮೊದಲ ದಿನ ಇಳಿಕೆ ಕಂಡಿದ್ದ ಬಂಗಾರ ಇಂದು ದಿಡೀರನೇ ಏರಿಕೆ ಕಂಡಿದೆ. ಹೌದು, ಚಿನ್ನ ಮಾರುಕಟ್ಟೆ ಮಹಿಳೆಯರಿಗೆ ಶಾಕ್ ಕೊಟ್ಟಿದೆ. ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ.ಬಹು ದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ. ಹಾಗಿದ್ರೆ ಭಾರತದಲ್ಲಿ ಮಂಗಳವಾರದಂದು ( ಫೆ.04) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬಂಗಾರದ ಮಾರುಕಟ್ಟೆಯಲ್ಲಿ ಇಂದು ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 78,100 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 85,200 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,810 ರೂಪಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,520 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ78,100 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 85,200ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,81,000 ರೂ.ಗಳು ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,52,000 ಇದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 11,500 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 63,900 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 98,500 ರೂಪಾಯಿಗಳು ವಾಹಿವಾಟುವಿದ್ದು, ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಸಾವಿರ ರೂಪಾಯಿಗಳ ಇಳಿಕೆ ಕಂಡಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 98.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 985 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,850 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಇಳಿಕೆಯನ್ನು ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ನಲ್ಲಿ ಗೋಲ್ಡ್ ರೇಟ್ ಸತತ ನಾಲ್ಕನೇ ಸೆಷನ್‌ಗೆ ತನ್ನ ಏರುಗತಿಯ ವೇಗವನ್ನು ಕಾಯ್ದುಕೊಂಡಿತು. ಮತ್ತು ದೈನಂದಿನ ಚಾರ್ಟ್‌ನಲ್ಲಿ ಬುಲಿಶ್ ಕ್ಯಾಂಡಲ್ ಅನ್ನು ರೂಪಿಸಿತು. ಇತ್ತೀಚಿನ ಬೆಲೆ ಕ್ರಮವು MCX ಗೋಲ್ಡ್ ಒಂದು ದಿನದಲ್ಲಿ ದೌರ್ಬಲ್ಯವನ್ನು ತೋರಿಸುವ ಮಾದರಿಯನ್ನು ಸೂಚಿಸುತ್ತದೆ ಆದರೆ ಮುಂದಿನ ಸೆಷನ್‌ಗಳಲ್ಲಿ ಅದರ ಗರಿಷ್ಠ ಮಟ್ಟವನ್ನು ಮೀರುತ್ತದೆ.
MCX ಗೋಲ್ಡ್ 83500 ಗಿಂತ ಹೆಚ್ಚಾದರೆ, ಅದು 83800/84000 ಮಟ್ಟಗಳ ಕಡೆಗೆ ಮುನ್ನಡೆಯಬಹುದು. ಇದಕ್ಕೆ ವಿರುದ್ಧವಾಗಿ, ಬೆಂಬಲವು 82250/81800 ಮಟ್ಟಗಳಲ್ಲಿ ಕಂಡುಬರುತ್ತದೆ ಮತ್ತು 81800 ಕ್ಕಿಂತ ಕಡಿಮೆ ಕುಸಿತವು ಮತ್ತಷ್ಟು ಲಾಭವಿದೆ. 83000/82700 ಮಟ್ಟಗಳ ಕಡೆಗೆ ಕುಸಿತಕ್ಕೆ ಕಾರಣವಾಗಬಹುದು. ನಿರ್ಣಾಯಕ ವಲಯದಲ್ಲಿ ವಹಿವಾಟು ನಡೆಸುತ್ತಿರುವುದರಿಂದ ವ್ಯಾಪಾರಿಗಳು ಬಿಗಿಯಾದ ಸ್ಟಾಪ್ ನಷ್ಟಗಳನ್ನು ಕಾಯ್ದುಕೊಳ್ಳಲು ಸೂಚಿಸಲಾಗಿದೆ ಎಂದು ವೇ2ವೆಲ್ತ್ ಬ್ರೋಕರ್ಸ್ ಪ್ರೈ.ಲಿ.ನ ತಾಂತ್ರಿಕ ಸಂಶೋಧನಾ ವಿಶ್ಲೇಷಕರು ಹೇಳಿದ್ದಾರೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಮಂಗಳವಾರ ಅಮೆರಿಕದ ಚಿನ್ನದ ಫ್ಯೂಚರ್‌ಗಳು ಶೇ.0.2 ರಷ್ಟು ಕುಸಿದು $2,852.70 ಕ್ಕೆ ತಲುಪಿದ್ದರೆ. ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ.0.3 ರಷ್ಟು ಏರಿಕೆಯಾಗಿ $2,820.69 ಕ್ಕೆ ತಲುಪಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಇತರ ಲೋಹಗಳಲ್ಲಿ, ಪಲ್ಲಾಡಿಯಮ್ ಶೇ.1 ರಷ್ಟು ಏರಿಕೆಯಾಗಿ $1,019.31 ಕ್ಕೆ ತಲುಪಿದೆ ಪ್ಲಾಟಿನಂ ಶೇ.0.7 ರಷ್ಟು ಏರಿಕೆಯಾಗಿ $970.80 ಕ್ಕೆ ತಲುಪಿದೆ ಮತ್ತು ಸ್ಪಾಟ್ ಬೆಳ್ಳಿ ಶೇ.0.2 ರಷ್ಟು ಏರಿಕೆಯಾಗಿ ಔನ್ಸ್‌ಗೆ $31.61 ಕ್ಕೆ ತಲುಪಿದೆ.
ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ
| ಕ್ರಮ ಸಂಖ್ಯೆ | ನಗರಗಳು | 22 ಕ್ಯಾರೆಟ್ | 24 ಕ್ಯಾರೆಟ್ |
| 1 | ಬೆಂಗಳೂರು | ರೂ.7,810 | ರೂ.8,520 |
| 2 | ಚೆನ್ನೈ | ರೂ.7,810 | ರೂ.8,520 |
| 3 | ಮುಂಬೈ | ರೂ.7,810 | ರೂ.8,520 |
| 4 | ದೆಹಲಿ | ರೂ.7,825 | ರೂ.8,535 |
| 5 | ಕೋಲ್ಕತ್ತಾ | ರೂ.7,810 | ರೂ.8,520 |
| 6 | ಪುಣೆ | ರೂ.7,810 | ರೂ.8,520 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)
ಬೆಂಗಳೂರು: 9,850ರೂ
ಚೆನ್ನೈ: 10,600 ರೂ
ಮುಂಬೈ: 9,850ರೂ
ದೆಹಲಿ: 9,850ರೂ
ಕೋಲ್ಕತಾ: 9,850ರೂ
ಹೈದರಾಬಾದ್: 10,600ರೂ
ಪುಣೆ :9,850ರೂ
ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಅದನ್ನು ಮೂರು ತಿಂಗಳು ಮುಂದೂಡುವುದು ಉತ್ತಮ. ಏಪ್ರಿಲ್‌ವರೆಗೆ ಕಾದರೆ, ಆ ನಂತರ ಚಿನ್ನದ ಬೆಲೆಗಳು ಕಡಿಮೆಯಾಗುತ್ತವೆ. ಏಕೆಂದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರವು ದರವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಇದರಿಂದಾಗಿ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ.
ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.
More From GoodReturns

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

Gold-Silver Today Rates Live Updates: ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ಸಂಪೂರ್ಣ ಮಾಹಿತಿ ಇಲ್ಲಿದೆ

Gold Price Today: ಯುಗಾದಿ ದಿನವೇ ಚಿನ್ನ ಪ್ರಿಯರಿಗೆ ಬಂಪರ್; 2,090 ರೂ. ಇಳಿಕೆ

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

Silver Rates Today: ಭಾರತೀಯ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ; 5000 ರೂ.ನಷ್ಟು ಇಳಿಕೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Eid ul Fitr 2026: ಭಾರತದಲ್ಲಿ ಯಾವಾಗ ಚಂದ್ರನ ದರ್ಶನ? ರಂಜಾನ್ ಹಬ್ಬ ಯಾವಾಗ?

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

PAN Card Rules: ಪ್ಯಾನ್ ಕಾರ್ಡ್ ಇಲ್ಲದವರೇ ಇಲ್ಲಿ ಗಮನಿಸಿ; ನಿಯಮ ಸಂಪೂರ್ಣ ಚೇಂಜ್

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ



Click it and Unblock the Notifications