ಜೂನ್ 13, ಭಾರತದಲ್ಲಿ ಚಿನ್ನದ ಬೆಲೆ: ಇಂದಿನ ಚಿನ್ನದ ಬೆಲೆ ತಿಳಿದವರು ನಿಜಕ್ಕೂ ಶಾಕ್ ಆಗುವುದರಲ್ಲಿ ಅನುಮಾನವಿಲ್ಲ. ಏನಪ್ಪ ಚಿನ್ನದ ಬೆಲೆ ಇಷ್ಟಾಗಿದೆ ಎಂದು ಕಂಗಾಲಾದ್ರೂ ಆಗಬಹುದು. ಏಕೆಂದರೆ ಇಂದು ಚಿನ್ನದ ಬೆಲೆ ಪಿತ್ತ ನೆತ್ತಿಗೇರಿಸಲಿದೆ. ಇಂದಿನ ದಿನಗಳಲ್ಲಿ ಕೆಲವೊಮ್ಮೆ ₹200 ರಿಂದ ₹2,000ರ ವರೆಗೆ ಬದಲಾವಣೆ ಕಂಡುಬರುತ್ತಿದೆದೆ. ಇದರಿಂದ 8 ಗ್ರಾಂ, 10 ಗ್ರಾಂ ಅಥವಾ 100 ಗ್ರಾಂ ಚಿನ್ನ ಖರೀದಿಯ ಮೇಲೆ ಸ್ಪಷ್ಟವಾದ ಪರಿಣಾಮ ಬೀರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಖರೀದಿಗೆ ಮೊದಲು ದರ ಪರಿಶೀಲನೆಯು ಅತ್ಯಂತ ಅವಶ್ಯಕವಾಗಿದೆ.

ಒಂದೆಡೆ ಚಿನ್ನವು ಭದ್ರತಾ ಹೂಡಿಕೆ ಎಂದು ಪರಿಗಣಿಸಲ್ಪಡುತ್ತಿರುವಾಗ, ಬೆಲೆಯಲ್ಲಿನ ನಿರಂತರ ಏರಿಳಿತವು ಗ್ರಾಹಕರ ವಿಶ್ವಾಸವನ್ನು ಕಾಡುತ್ತಿದೆ. ನಿರೀಕ್ಷಿತ ಮೌಲ್ಯವೃದ್ಧಿಯ ಆಶೆಯಿಂದ ಹಲವರು ಚಿನ್ನ ಖರೀದಿಗೆ ಮುಂದಾಗುತ್ತಿದ್ದಾರೆ, ಆದರೆ ಕೆಲವು ಸಂದರ್ಭಗಳಲ್ಲಿ ದರ ಕುಸಿತದಿಂದಾಗಿ ಸಮಯ ನಿರ್ಧಾರದಲ್ಲೇ ಗೊಂದಲ ಉಂಟಾಗುತ್ತಿದೆ. ಹೀಗಾಗಿ, ತ್ವರಿತ ನಿರ್ಧಾರಕ್ಕೆ ಬರುವ ಬದಲು, ದೈನಂದಿನ ದರ ಪ್ರವೃತ್ತಿಗಳನ್ನು ವಿಶ್ಲೇಷಿಸಿ, ಚಿನ್ನ ಖರೀದಿಗೆ ಸೂಕ್ತ ಸಮಯವನ್ನು ಗುರುತಿಸುವುದು ಬುದ್ಧಿವಂತಿಕೆಯೆನಿಸುತ್ತದೆ. ಹಾಗಾದರೆ ಇಂದು ಚಿನ್ನದ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು ಎಂದು ಇಲ್ಲಿ ತಿಳಿಯಿರಿ.
ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹10,140 ಆಗಿದೆ. ನಿನ್ನೆ ಇದರ ಬೆಲೆ ₹9,928 ಆಗಿದ್ದು ನಿನ್ನೆಗಿಂತ ಇಂದು, ₹212 ಏರಿಕೆಯಾಗಿದೆ.
10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹1,01,400 ಆಗಿದೆ. ನಿನ್ನೆ ಇದರ ಬೆಲೆ ₹99,280 ಆಗಿದ್ದು ನಿನ್ನೆಗಿಂತ ಇಂದು, ₹2,120 ಏರಿಕೆಯಾಗಿದೆ.
100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹10,14,000 ಆಗಿದೆ. ನಿನ್ನೆ ಇದರ ಬೆಲೆ ₹9,92,800 ಆಗಿದ್ದು ನಿನ್ನೆಗಿಂತ ಇಂದು, ₹21,200 ಏರಿಕೆಯಾಗಿದೆ.
ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,295 ಆಗಿದೆ. ನಿನ್ನೆ ಇದರ ಬೆಲೆ ₹9,100 ಆಗಿದ್ದು ನಿನ್ನೆಗಿಂತ ಇಂದು, ₹195 ಏರಿಕೆಯಾಗಿದೆ.
10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹92,950 ಆಗಿದೆ. ನಿನ್ನೆ ಇದರ ಬೆಲೆ ₹91,000 ಆಗಿದ್ದು ನಿನ್ನೆಗಿಂತ ಇಂದು, ₹1,950 ಏರಿಕೆಯಾಗಿದೆ.
100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,29,500 ಆಗಿದೆ. ನಿನ್ನೆ ಇದರ ಬೆಲೆ ₹9,10,000 ಆಗಿದ್ದು ನಿನ್ನೆಗಿಂತ ಇಂದು ₹19,500 ಏರಿಕೆಯಾಗಿದೆ.
ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹7,605 ಆಗಿದೆ. ನಿನ್ನೆ ಇದರ ಬೆಲೆ ₹7,446 ಆಗಿದ್ದು ನಿನ್ನೆಗಿಂತ ಇಂದು, ₹159 ಏರಿಕೆಯಾಗಿದೆ.
10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹76,050 ಆಗಿದೆ. ನಿನ್ನೆ ಇದರ ಬೆಲೆ ₹74,460 ಆಗಿದ್ದು ನಿನ್ನೆಗಿಂತ ಇಂದು, ₹1,590 ಏರಿಕೆಯಾಗಿದೆ.
100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹7,60,500 ಆಗಿದೆ. ನಿನ್ನೆ ಇದರ ಬೆಲೆ ₹7,44,600 ಆಗಿದ್ದು ನಿನ್ನೆಗಿಂತ ಇಂದು, ₹15,900 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,140 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,295 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,650 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,140 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,295 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,605 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,155 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,310 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,618 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,140 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,295 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,605 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,140 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,295 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,605 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,140 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,295 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,605 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,140 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,295 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,605 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,145 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,300 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,609 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,145 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,300 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,609 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಏರಿಕೆಯನ್ನು ನೋಡಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹110 ಇದೆ. ನಿನ್ನೆ ಈ ಬೆಲೆ ₹108.90 ಆಗಿದ್ದು, ಇಂದು ₹1.10 ಏರಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,100 ಆಗಿದೆ. ಇದರ ಬೆಲೆ ನಿನ್ನೆ ₹1,089 ಆಗಿದ್ದು, ಇಂದು ₹11 ಏರಿಕೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ಇಂದು ₹11,000 ಆಗಿದ್ದು, ನಿನ್ನೆ ಈ ಬೆಲೆ ₹10,890 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹110 ಏರಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,10,000 ಆಗಿದೆ, ನಿನ್ನೆ ಈ ಬೆಲೆ ₹1,08,900 ಆಗಿದ್ದು, ನಿನ್ನೆಗಿಂತ ಇಂದಿಗೆ ₹1,100 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ, ಜೂನ್ 13, ಗುರುವಾರ ಚಿನ್ನದ ಬೆಲೆಗಳು ಒಂದು ವಾರದ ಗರಿಷ್ಠ ಮಟ್ಟವನ್ನು ತಲುಪಿದ್ದು, ಇದಕ್ಕೆ ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಹಾಗೂ ಅಮೆರಿಕದ ಶೀತಗೊಳಿಸಿದ ಆರ್ಥಿಕ ದತ್ತಾಂಶ ಕಾರಣವಾಗಿದೆ. ಸ್ಪಾಟ್ ಗೋಲ್ಡ್ ದರವು 0.9% ಏರಿಕೆಯಾಗಿದ್ದು, ಪ್ರತಿ ಔನ್ಸ್‌ಗೆ $3,383.22 ರಷ್ಟು ದಾಖಲಾಗಿದೆ. ಇದು ಜೂನ್ 5ರಿಂದ ನಂತರದ ಗರಿಷ್ಠ ಮಟ್ಟವಾಗಿದೆ.
ಹೂಡಿಕೆಯ ಸಾಧನವಾಗಿರುವ ಚಿನ್ನ:
ಹೂಡಿಕೆಯ ಸಾಧನವಾಗಿರುವ ಚಿನ್ನವು ಭಾರತದಲ್ಲಿ ಹಲವು ರೀತಿಯ ಮಹತ್ವದ ಸ್ಥಾನ ಪಡೆದುಕೊಂಡಿದೆ. ಮಹಿಳೆಯರಿಗೆ ಒಡವೆ ರೂಪದಲ್ಲಿ ಇದು ಖುಷಿ ನೀಡುತ್ತದೆ. ಹಾಗೆಯೇ ಪ್ರತಿಷ್ಠೆಯ ಸಂಕೇತವಾಗಿ ಗೌರವ ತಂದುಕೊಡುತ್ತದೆ. ಇನ್ನು ಕಷ್ಟ ಅಂತ ಬಂದಾಗ ಆರ್ಥಿಕ ಸಹಾಯ ಮಾಡುವ ಮಿತ್ರನಾಗಿರುತ್ತದೆ. ಹೂಡಿಕೆಯ ರೂಪದಲ್ಲಿ ನೋಡುವುದಾದರೆ, ಚಿನ್ನವು ಭವಿಷ್ಯದ ದೊಡ್ಡ ಸಂಪತ್ತಾಗಿ ಪಾತ್ರ ನಿರ್ವಹಿಸುತ್ತದೆ. ಒಂದೇ ಲೋಹ ಹಲವು ರೀತಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿಯೇ ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವದ ಸ್ಥಾನವಿದೆ. ಚಿನ್ನವನ್ನು ಪೂಜೆ-ಪುನಸ್ಕಾರ, ಮದುವೆ-ಸಮಾರಂಭಗಳಲ್ಲಿ ಇರಿಸದೇ ಏನೂ ನೆರವೇರುವುದಿಲ್ಲ. ಅದರಲ್ಲೂ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಏನು ಕೊಟ್ಟರೂ ಮನಸೋಲದ ನಾರಿಯರಿಗೆ ಚಿನ್ನವೇ ದೊಡ್ಡ ಮಟ್ಟದ ಉಡುಗೊರೆ. ಅವರಿಗೆ ಚಿನ್ನವೇ ಭೂಷಣ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ



Click it and Unblock the Notifications