ಸತತ ಎರಡ್ಮೂರು ದಿನಗಳ ಕಾಲ ಏರಿಕೆ ನೋಡಿದ್ದ ಬಂಗಾರ ಇಂದು ಕೊಂಚ ಇಳಿಕೆಯಾಗಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಹೂಡಿಕೆದಾರರ ಪಾಲಿಗೆ ಈ ದಿನ ಸುದಿನವಾಗಿದೆ. ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಇದೇ ಬೆಸ್ಟ್ ಟೈಮ್ ಎಂದು ಹೇಳಬಹುದು. ಯಾಕೆಂದರೆ ಜೂನ್ ತಿಂಗಳಿನಲ್ಲಿ ಚಿನ್ನದ ಬೆಲೆ ದಾಖಲೆಯ ಏರಿಕೆ ನೋಡಿದ್ದಲ್ಲದೇ, ನಿಜಕ್ಕೂ ಗಗನಕ್ಕೇರಿದ ಬೆಲೆಯಾಗಿತ್ತು. ಈ ತಿಂಗಳಿನಲ್ಲಿ ಇಳಿಕೆ ಎನ್ನುವುದೇ ಕಡಿಮೆಯಾಗಿತ್ತು. ಹೀಗಿರುವಾಗ ಇಂದು ಬೆಲೆ ಇಳಿಕೆಯಾಗಿದೆ. ಹೀಗಾಗಿ ಖರೀದಿದಾರರಿಗೂ, ಹೂಡಿಕೆ ಮಾಡುವವರಿಗೂ ಇದು ಒಳ್ಳೆ ಸಮಯ.

ಅಂದಹಾಗೆ, ಜೂನ್‌ನಲ್ಲೇ ಈ ಪರಿಯ ಏರಿಕೆ ನೋಡಿದ್ದ ಬಂಗಾರ ಮುಂಬರುವ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಬಹುದು. ಇಳಿಕೆಯಾದರೂ ಅದು ಕೊಂಚ ಪ್ರಮಾಣದಲ್ಲಿ ಮಾತ್ರವಾಗಬಹುದು. ಕಳೆದ ತಿಂಗಳುಗಳಲ್ಲಿ 9 ಲಕ್ಷದ ಆಸುಪಾಸಿನಲ್ಲಿದ್ದ ಬಂಗಾರ, ಈ ತಿಂಗಳಿನಲ್ಲಿ ದಿಢೀರ್ 10 ಲಕ್ಷಕ್ಕೂ ಮೇಲೇರಿದೆ. ಹೀಗಾಗಿ ಇದು ಎಚ್ಚರಿಕೆಯಿಂದ ಮುನ್ನುಗ್ಗಲೇಬೇಕಾದ ಸಂಗತಿ. ಹಾಗೆಯೇ ಈ ಬೆಲೆ ಬೇರೆ ಬೇರೆ ನಗರಗಳಲ್ಲಿ ಬೇರೆ ರೀತಿ ಇದೆ.
ಪ್ರಮುಖ ನಗರಗಳಾದ ಕೋಲ್ಕತ್ತಾ, ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ ಸೇರಿ ಹಲವು ಕಡೆ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿರುತ್ತದೆ. ಅಂದರೆ ಒಂದೊಂದು ನಗರದಲ್ಲೂ ಒಂದೊಂದು ಬೆಲೆ ಇರುತ್ತದೆ. ಹಾಗಾದರೆ ಇಂದು 24K, 22K, 18K ಚಿನ್ನದ ಬೆಲೆ ಎಷ್ಟಿದೆ. ಬೇರೆ ನಗರಗಳಲ್ಲಿ ಎಷ್ಟುಕ್ಕೆ ವ್ಯಾಪಾರವಾಗುತ್ತಿದೆ ಎಂದು ಇಲ್ಲಿ ತಿಳಿಯಿರಿ.
ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, 10,048 ರೂ. ಆಗಿದೆ. ನಿನ್ನೆ ಇದರ ಬೆಲೆ 10,108 ರೂ. ಆಗಿದ್ದು ನಿನ್ನೆಗಿಂತ ಇಂದು, 60 ರೂ. ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, 1,00,480 ರೂ. ಆಗಿದೆ. ನಿನ್ನೆ ಇದರ ಬೆಲೆ 1,01,080 ರೂ. ಆಗಿದ್ದು ನಿನ್ನೆಗಿಂತ ಇಂದು, 600 ರೂ. ಇಳಿಕೆಯಾಗಿದೆ.
100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, 10,04,800 ರೂ. ಆಗಿದೆ. ನಿನ್ನೆ ಇದರ ಬೆಲೆ 10,10,800 ರೂ. ಆಗಿದ್ದು ನಿನ್ನೆಗಿಂತ ಇಂದು, 6,000 ರೂ. ಇಳಿಕೆಯಾಗಿದೆ.
ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 9,210 ರೂ. ಆಗಿದೆ. ನಿನ್ನೆ ಇದರ ಬೆಲೆ 9,265 ರೂ. ಆಗಿದ್ದು ನಿನ್ನೆಗಿಂತ ಇಂದು, 55 ರೂ. ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, 92,100 ರೂ. ಆಗಿದೆ. ನಿನ್ನೆ ಇದರ ಬೆಲೆ 92,650 ರೂ. ಆಗಿದ್ದು ನಿನ್ನೆಗಿಂತ ಇಂದು, 550 ರೂ. ಇಳಿಕೆಯಾಗಿದೆ.
100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, 9,21,000 ರೂ. ಆಗಿದೆ. ನಿನ್ನೆ ಇದರ ಬೆಲೆ 9,26,500 ರೂ. ಆಗಿದ್ದು ನಿನ್ನೆಗಿಂತ ಇಂದು, 5,500 ರೂ. ಇಳಿಕೆಯಾಗಿದೆ.
ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,536 ರೂ. ಆಗಿದೆ. ನಿನ್ನೆ ಇದರ ಬೆಲೆ 7,581 ರೂ. ಆಗಿದ್ದು ನಿನ್ನೆಗಿಂತ ಇಂದು, 45 ರೂ. ಇಳಿಕೆಯಾಗಿದೆ.
10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, 75,360 ರೂ. ಆಗಿದೆ. ನಿನ್ನೆ ಇದರ ಬೆಲೆ 75,810 ರೂ. ಆಗಿದ್ದು ನಿನ್ನೆಗಿಂತ ಇಂದು, 450 ರೂ. ಇಳಿಕೆಯಾಗಿದೆ.
100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, 7,53,600 ರೂ. ಆಗಿದೆ. ನಿನ್ನೆ ಇದರ ಬೆಲೆ 7,58,100 ರೂ. ಆಗಿದ್ದು ನಿನ್ನೆಗಿಂತ ಇಂದು, 4,500 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,048 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,210 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,580 ರೂ. ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,048 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,210 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,536 ರೂ. ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,063 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,225 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,548 ರೂ. ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,048 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,210 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,536 ರೂ. ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,048 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,210 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,536 ರೂ. ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,048 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,210 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,536 ರೂ. ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,048 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,210 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,536 ರೂ. ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,048 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,210 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,536 ರೂ. ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,053 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,215 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,540 ರೂ. ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹10,053 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,215 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,540 ರೂ. ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಏರಿಕೆಯನ್ನು ನೋಡಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹110 ಇದೆ. ನಿನ್ನೆ ಈ ಬೆಲೆ ₹112 ಆಗಿದ್ದು, ಇಂದು ₹2 ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,100 ಆಗಿದೆ. ಇದರ ಬೆಲೆ ನಿನ್ನೆ ₹1,120 ಆಗಿದ್ದು, ಇಂದು ₹20 ಇಳಿಕೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ಇಂದು ₹11,000 ಆಗಿದ್ದು, ನಿನ್ನೆ ಈ ಬೆಲೆ ₹11,200 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹200 ಇಳಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,10,000 ಆಗಿದೆ, ನಿನ್ನೆ ಈ ಬೆಲೆ ₹1,12,000 ಆಗಿದ್ದು, ನಿನ್ನೆಗಿಂತ ಇಂದಿಗೆ ₹2,000 ಇಳಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ 0245 GMT ವೇಳೆಗೆ ಸ್ಪಾಟ್ ಗೋಲ್ಡ್ ದರವು 0.5% ಇಳಿಕೆಯಾಗಿದೆ. ಅಂದರೆ ಇದು ಇಂದು ಪ್ರತಿ ಔನ್ಸ್‌ಗೆ $3,355.49ಕ್ಕೆ ವಹಿವಾಟು ನಡೆಸಿದೆ. ಈ ದರ ಕುಸಿತವು ಅಮೆರಿಕದ ಕಠಿಣ ಹಣ ನೀತಿ ಹಾಗೂ ಬಲವಾದ ಡಾಲರ್ ಮೌಲ್ಯದ ಪರಿಣಾಮವಾಗಿದ್ದು, ಬಂಡವಾಳ ಹೂಡಿದಾರರು ಇನ್ನಷ್ಟು ನಿರೀಕ್ಷೆಯಲ್ಲಿ ಕಾಯುತ್ತಿರುವುದು ತಿಳಿದು ಬಂದಿದೆ.
ಹೂಡಿಕೆಯ ಸಾಧನವಾಗಿರುವ ಚಿನ್ನ:
ಹೂಡಿಕೆಯ ಸಾಧನವಾಗಿರುವ ಚಿನ್ನವು ಭಾರತದಲ್ಲಿ ಹಲವು ರೀತಿಯ ಮಹತ್ವದ ಸ್ಥಾನ ಪಡೆದುಕೊಂಡಿದೆ. ಮಹಿಳೆಯರಿಗೆ ಒಡವೆ ರೂಪದಲ್ಲಿ ಇದು ಖುಷಿ ನೀಡುತ್ತದೆ. ಹಾಗೆಯೇ ಪ್ರತಿಷ್ಠೆಯ ಸಂಕೇತವಾಗಿ ಗೌರವ ತಂದುಕೊಡುತ್ತದೆ. ಇನ್ನು ಕಷ್ಟ ಅಂತ ಬಂದಾಗ ಆರ್ಥಿಕ ಸಹಾಯ ಮಾಡುವ ಮಿತ್ರನಾಗಿರುತ್ತದೆ. ಹೂಡಿಕೆಯ ರೂಪದಲ್ಲಿ ನೋಡುವುದಾದರೆ, ಚಿನ್ನವು ಭವಿಷ್ಯದ ದೊಡ್ಡ ಸಂಪತ್ತಾಗಿ ಪಾತ್ರ ನಿರ್ವಹಿಸುತ್ತದೆ. ಒಂದೇ ಲೋಹ ಹಲವು ರೀತಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿಯೇ ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವದ ಸ್ಥಾನವಿದೆ. ಚಿನ್ನವನ್ನು ಪೂಜೆ-ಪುನಸ್ಕಾರ, ಮದುವೆ-ಸಮಾರಂಭಗಳಲ್ಲಿ ಇರಿಸದೇ ಏನೂ ನೆರವೇರುವುದಿಲ್ಲ. ಅದರಲ್ಲೂ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಏನು ಕೊಟ್ಟರೂ ಮನಸೋಲದ ನಾರಿಯರಿಗೆ ಚಿನ್ನವೇ ದೊಡ್ಡ ಮಟ್ಟದ ಉಡುಗೊರೆ. ಅವರಿಗೆ ಚಿನ್ನವೇ ಭೂಷಣ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications