Gold Price Today: ಭಾರತದ ಚಿನ್ನಪ್ರಿಯರಿಗೆ ಇಂದು ಶುಭ ಶುಕ್ರವಾರ..24K ಚಿನ್ನದಲ್ಲಿ ದಿಢೀರ್ 9,300 ರೂ. ಇಳಿಕೆ!

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಇತ್ತೀಚೆಗೆ ಭಾರಿ ಕುಸಿತವಾಗುತ್ತಿವೆ. ಜೂನ್ 23ರಿಂದ ಚಿನ್ನದ ಬೆಲೆ ಏರಿಕೆಯನ್ನೇ ನೋಡಿಲ್ಲ. ಜೂನ್ 22ರಂದು 100 ಗ್ರಾಂ 24 ಕ್ಯಾರೆಟ್ ಚಿನ್ನದ ದರ 10,07,500 ರೂ. ಇತ್ತು. ಈ ಬೆಲೆ ಜೂನ್ 23ರಂದು 10,06,900ಕ್ಕೆ ಇಳಿಯಿತು. ಅಂದಿನಿಂದ ಇಂದಿನವರೆಗೂ ಚಿನ್ನದ ಬೆಲೆ ಇಳಿಕೆಯನ್ನೇ ಕಂಡಿದೆ. ಕಳೆದ ಐದು ದಿನಗಳಲ್ಲಿ 27,300 ರೂ. ಇಳಿಕೆಯಾಗಿ, 9,80,200ಕ್ಕೆ ಬಂದು ತಲುಪಿದೆ.

24K ಚಿನ್ನದಲ್ಲಿ ದಿಢೀರ್ 9,300 ರೂ. ಇಳಿಕೆ!

ಈ ತೀವ್ರ ಇಳಿಕೆ ಜಾಗತಿಕ ಆರ್ಥಿಕತೆ, ಅಮೆರಿಕದ ಬಡ್ಡಿದರ ನಿರೀಕ್ಷೆಗಳು ಹಾಗೂ ಡಾಲರ್ ಬಲದ ಪರಿಣಾಮವಾಗಿರುವ ಸಾಧ್ಯತೆ ಹೆಚ್ಚು. ಇದೇ ಸಮಯದಲ್ಲಿ ಭಾರತದ ಆಭರಣ ಮಾರುಕಟ್ಟೆಯಲ್ಲೂ ವ್ಯವಹಾರ ಮಂದಗೊಂಡಿದೆ. ಕೆಲ ಹೂಡಿಕೆದಾರರು ದರ ಮತ್ತಷ್ಟು ಇಳಿಯುವ ನಿರೀಕ್ಷೆಯಲ್ಲಿ ಕಾಯುವ ಸ್ಥಿತಿಯಲ್ಲಿ ಇದ್ದರೆ, ಕೆಲವರು ಈ ಸ್ಥಿತಿಯನ್ನು ಹೂಡಿಕೆಗೆ ಒಳ್ಳೆಯ ಅವಕಾಶವೆಂದು ಪರಿಗಣಿಸುತ್ತಿದ್ದಾರೆ.

ಇನ್ನು ಈ ಬೆಲೆ ಒಂದೊಂದು ನಗರದಲ್ಲೂ ಒಂದೊಂದು ರೀತಿಯಂತೆ ಇದೆ. ಚೆನ್ನೈ, ಮುಂಬೈ, ಬೆಂಗಳೂರು, ಕೋಲ್ಕತ್ತಾ, ಅಹಮದಾಬಾದ್, ಹೈದರಾಬಾದ್, ಪುಣೆ ಸೇರಿ ಬೇರೆ ಬೇರೆ ಕಡೆ ಬೇರೆ ಬೇರೆ ರೀತಿ ಇದೆ. ಹಾಗಾದರೆ ಇಂದು ಚಿನ್ನದ ಬೆಲೆ ಯಾವ್ಯಾವ ನಗರದಲ್ಲಿ ಎಷ್ಟೆಷ್ಟು ಇದೆ ಎಂದು ಇಲ್ಲಿ ತಿಳಿದುಕೊಳ್ಳಿ.

ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,802 ರೂ. ಆಗಿದೆ. ನಿನ್ನೆ ಇದರ ಬೆಲೆ ₹9,895 ರೂ. ಆಗಿದ್ದು ನಿನ್ನೆಗಿಂತ ಇಂದು, ₹93 ರೂ. ಇಳಿಕೆಯಾಗಿದೆ.

10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹98,020 ರೂ. ಆಗಿದೆ. ನಿನ್ನೆ ಇದರ ಬೆಲೆ ₹98,950 ರೂ. ಆಗಿದ್ದು ನಿನ್ನೆಗಿಂತ ಇಂದು, ₹930 ರೂ. ಇಳಿಕೆಯಾಗಿದೆ.

100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,80,200 ರೂ. ಆಗಿದೆ. ನಿನ್ನೆ ಇದರ ಬೆಲೆ ₹9,89,500 ರೂ. ಆಗಿದ್ದು ನಿನ್ನೆಗಿಂತ ಇಂದು, ₹9,300 ರೂ. ಇಳಿಕೆಯಾಗಿದೆ.

ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹8,985 ರೂ. ಆಗಿದೆ. ನಿನ್ನೆ ಇದರ ಬೆಲೆ ₹9,070 ರೂ. ಆಗಿದ್ದು ನಿನ್ನೆಗಿಂತ ಇಂದು, ₹85 ರೂ. ಇಳಿಕೆಯಾಗಿದೆ.

10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹89,850 ರೂ. ಆಗಿದೆ. ನಿನ್ನೆ ಇದರ ಬೆಲೆ ₹90,700 ರೂ. ಆಗಿದ್ದು ನಿನ್ನೆಗಿಂತ ಇಂದು, ₹850 ರೂ. ಇಳಿಕೆಯಾಗಿದೆ.

100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹8,98,500 ರೂ. ಆಗಿದೆ. ನಿನ್ನೆ ಇದರ ಬೆಲೆ ₹9,07,000 ರೂ. ಆಗಿದ್ದು ನಿನ್ನೆಗಿಂತ ಇಂದು, ₹8,500 ರೂ. ಇಳಿಕೆಯಾಗಿದೆ.

ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹7,352 ರೂ. ಆಗಿದೆ. ನಿನ್ನೆ ಇದರ ಬೆಲೆ ₹7,421 ರೂ. ಆಗಿದ್ದು ನಿನ್ನೆಗಿಂತ ಇಂದು, 69 ರೂ. ಇಳಿಕೆಯಾಗಿದೆ.

10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹73,520 ರೂ. ಆಗಿದೆ. ನಿನ್ನೆ ಇದರ ಬೆಲೆ ₹74,210 ರೂ. ಆಗಿದ್ದು ನಿನ್ನೆಗಿಂತ ಇಂದು, 690 ರೂ. ಇಳಿಕೆಯಾಗಿದೆ.

100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹7,35,200 ರೂ. ಆಗಿದೆ. ನಿನ್ನೆ ಇದರ ಬೆಲೆ ₹7,42,100 ರೂ. ಆಗಿದ್ದು ನಿನ್ನೆಗಿಂತ ಇಂದು, 6,900 ರೂ. ಇಳಿಕೆಯಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,405 ರೂ. ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ರೂ. ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,817 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,000 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,364 ರೂ. ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ರೂ. ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ರೂ. ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ರೂ. ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ರೂ. ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,802 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,985 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ರೂ. ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,807 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,356 ರೂ. ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,807 ರೂ. ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ರೂ. ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,356 ರೂ. ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಮಾತ್ರ ಯಾವುದೇ ಇಳಿಕೆ-ಕಂಡುಬಂದಿದೆ. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆ ₹107.90 ಇದೆ. ಈ ಬೆಲೆ ನಿನ್ನೆ ₹108 ಇತ್ತು. ನಿನ್ನೆಗಿಂತ ಇಂದಿಗೆ ₹0.10 ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,079 ಆಗಿದೆ. ಈ ಬೆಲೆ ನಿನ್ನೆ ₹1,080 ಇತ್ತು. ನಿನ್ನೆಗಿಂತ ಇಂದಿಗೆ 1 ರೂ. ಇಳಿಕೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ಇಂದು ₹10,790 ಆಗಿದೆ. ಈ ಬೆಲೆ ನಿನ್ನೆ ₹10,800 ಇತ್ತು. ನಿನ್ನೆಗಿಂತ ಇಂದಿಗೆ ₹10 ಇಳಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,07,900ಆಗಿದೆ. ಈ ಬೆಲೆ ನಿನ್ನೆ ₹1,08,000 ಇದ್ದು, ಇಂದಿಗೆ ₹100 ಇಳಿಕೆಯಾಗಿದೆ.

ಸ್ಪಾಟ್ ಗೋಲ್ಡ್ ವಿವರ:

ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಜೂನ್ 27ರಂದು, 2025 ಜೂನ್ 27 ರಂದು ಬೆಳಿಗ್ಗೆ 5:21 GMT ವೇಳೆಗೆ, ಸ್ಪಾಟ್ ಚಿನ್ನದ ದರ ಪ್ರತಿ ಔನ್ಸಿಗೆ $3,296.79ಕ್ಕೆ ಇಳಿದಿದೆ. ಇದು ಸತತ ಎರಡನೇ ವಾರದ ನಷ್ಟದತ್ತ ಸಾಗುತ್ತಿದೆ. ಈ ವಾರದ ಮಟ್ಟಿಗೆ ಇದುವರೆಗೆ ಸುಮಾರು 2.2% ಇಳಿಕೆಯನ್ನು ಚಿನ್ನ ಕಂಡಿದೆ.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+