ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಅನುಮಾನಾಸ್ಪದ ಸ್ಥಿತಿಗಳು ಹಾಗೂ ಭೀತಿದಾಯಕ ಬೆಳವಣಿಗೆಗಳು ಚಿನ್ನದ ದರದ ಮೇಲೆ ಪರಿಣಾಮ ಬೀರಿವೆ. ಕೆಲ ಪ್ರಾಂತ್ಯಗಳಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿ, ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿದ ಭದ್ರತಾ ಆತಂಕಗಳು ಹಾಗೂ ಅಮೆರಿಕದ ಆರ್ಥಿಕ ನಿರ್ಧಾರಗಳ ತಕ್ಷಣದ ಪರಿಣಾಮವಾಗಿ ಚಿನ್ನದ ದರ ಇಳಿಕೆಯ ಚಕ್ರಕ್ಕೆ ಒಳಪಟ್ಟಿದೆ. ಬಂಡವಾಳ ಹೂಡಿಕೆದಾರರು ರಿಸ್ಕ್ ಆಸ್ತಿಗಳ ಕಡೆಗೆ ತಿರುಗುತ್ತಿದ್ದಂತೆಯೇ, ಚಿನ್ನದ ಮೇಲಿನ ಹೂಡಿಕೆ ಕುಂದಲು ಆರಂಭವಾಗಿದೆ. ಈ ಎಲ್ಲಾ ಅಂಶಗಳ ಪರಿಣಾಮವಾಗಿ ಭಾರತೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಹಿಮ್ಮೆಟ್ಟುತ್ತಿದೆ. ಹಳೆಯದಕ್ಕೆ ಹೋಲಿಸಿದರೆ, ಕಳೆದ ವಾರದಿಂದ ಚಿನ್ನದ ದರದಲ್ಲಿ ಕ್ರಮವಾಗಿ ಇಳಿಕೆ ಕಂಡುಬಂದಿದ್ದು, ಗ್ರಾಹಕರಲ್ಲಿ ನಿರೀಕ್ಷೆಯ ಹೊಸ ಬೆಳಕು ಮೂಡಿಸಿದೆ.

ಚಿನ್ನದ ಬೆಲೆಯು ಸ್ಥಿರವಾಗಿದ್ದರೂ ಬೇರೆ ಬೇರೆ ನಗರದಲ್ಲಿ ಬೇರೆ ರೀತಿಯಲ್ಲಿದೆ. ಚೆನ್ನೈ, ಮುಂಬೈ, ದೆಹಲಿ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಪುಣೆ ಸೇರಿ ಹಲವು ನಗರಗಳಲ್ಲಿ ಬೇರೆ ಬೇರೆ ರೀತಿಯಲ್ಲಿದೆ. ಹಾಗಾದರೆ ಇಂದಿನ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿದುಕೊಳ್ಳಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 24 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 9,742 ರೂ. ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 97,420 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9,74,200 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 22 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 8,930 ಇತ್ತು. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 89,300 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8,93,000 ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಅಷ್ಟೇ ಇದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 18 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 18 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,307 ರೂ. ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 73,070 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7,30,700 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,742 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,930 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,360 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,742 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,930 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,360 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,742 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,930 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,742ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,930 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,742ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,930 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,742ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,930 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,742ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,930 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,742ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,930 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,747 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,935 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,311 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,747 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,935 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,311 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹107.80 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹1,078 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹10,780 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹1,07,800 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಜೂನ್ 27ರಂದು, 2025 ಜೂನ್ 27 ರಂದು ಬೆಳಿಗ್ಗೆ 5:21 GMT ವೇಳೆಗೆ, ಸ್ಪಾಟ್ ಚಿನ್ನದ ದರ ಪ್ರತಿ ಔನ್ಸಿಗೆ $3,296.79ಕ್ಕೆ ಇಳಿದಿದೆ. ಇದು ಸತತ ಎರಡನೇ ವಾರದ ನಷ್ಟದತ್ತ ಸಾಗುತ್ತಿದೆ. ಈ ವಾರದ ಮಟ್ಟಿಗೆ ಇದುವರೆಗೆ ಸುಮಾರು 2.2% ಇಳಿಕೆಯನ್ನು ಚಿನ್ನ ಕಂಡಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications