ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆ ಕೇಳಿದರೆ ತಲೆ ತಿರುಗುತ್ತದೆ. ಏಕೆಂದರೆ ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ ಕಂಡುಬರುತ್ತಿದ್ದು, ಚಿನ್ನ ದುಬಾರಿಯಾಗುತ್ತಿದೆ. ಪ್ರತಿ ಗ್ರಾಂ ಚಿನ್ನಕ್ಕೆ ಹತ್ತು ಸಾವಿರ ಬೆಲೆ ನಿಗದಿಯಾಗುವ ದಿನ ದೂರವಿಲ್ಲ ಎಂಬಂತೆ ಕಾಣುತ್ತಿದೆ. ಈ ಪರಿಯ ಬೆಲೆ ಹೆಚ್ಚಳದಿಂದ ಚಿನ್ನದ ಮೇಲೆ ಹೂಡಿಕೆ ಮಾಡಬೇಕು ಎಂದಿರುವವರಿಗೆ, ನಿಜಕ್ಕೂ ಆಘಾತ ಸಂಭವಿಸಿದೆ. ಚಿನ್ನ ಕೊಳ್ಳುವುದಕ್ಕಿಂತ ಬೆಲೆ ಕೇಳಿದರೇನೆ ಬೆವರಿಳಿಯುವ ಸಂದರ್ಭ ಬಂದೊದಗಿದೆ. ಈಗಾಗಲೇ ಗಡಿಗೆ ಬಂದು ನಿಂತಿರುವ ಚಿನ್ನ, ಹೂಡಿಕೆದಾರರ ಎದೆ ಮೇಲೆ ತಾಂಡವವಾಡುತ್ತಿದೆ.

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,015ಇದೆ.ಅಂದರೆ ನಿನ್ನೆ ₹8,945 ಆಗಿದ್ದು ಇಂದು ₹70 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದಬೆಲೆ 10 ಗ್ರಾಂಗೆ 90ಸಾವಿರದ150 ರೂ. ಇದೆ. ಅಂದರೆ ನಿನ್ನೆ 89ಸಾವಿರದ 450 ರೂ. ಆಗಿದ್ದು ಇಂದು ₹700 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 1 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 94 ಸಾವಿರದ 500 ರೂ. ಆಗಿದ್ದು ಇಂದು ₹7,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,835ಇದೆ. ಅಂದರೆ ನಿನ್ನೆ ₹9,758ಆಗಿದ್ದು ಇಂದು ₹77 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 98 ಸಾವಿರದ350 ರೂ. ಇದೆ. ಅಂದರೆ ನಿನ್ನೆ 97ಸಾವಿರದ580 ರೂ. ಆಗಿದ್ದು ಇಂದು ₹770 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ83 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 75ಸಾವಿರದ 800 ರೂ. ಆಗಿದ್ದು ಇಂದು ₹7,700 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,376 ಇದೆ. ಅಂದರೆ ನಿನ್ನೆಯ ಬೆಲೆ ₹7,319 ಆಗಿದ್ದು ಇಂದು ಪ್ರತಿ ಗ್ರಾಂಗೆ ₹57 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 73ಸಾವಿರದ 760 ರೂ. ಇದೆ. ಅಂದರೆ ನಿನ್ನೆಯ ಬೆಲೆ 73 ಸಾವಿರದ 190 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹570 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 37 ಸಾವಿರದ 600 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 31 ಸಾವಿರದ 900ರೂ. ಆಗಿದ್ದು ಇಂದು ₹5,700 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,835ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,460 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,835 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,030 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,850 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,389 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,835ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,835ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,835ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,835ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,835ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,020 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,840 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,020 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,840 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲೂ ಕೊಂಚ ಏರಿಕೆಯಾಗಿದೆ. ಇಂದು ಒಂದು ಗ್ರಾಂ ಬೆಳ್ಳಿಗೆ ಇದ್ದು ₹101 ನಿನ್ನೆ ಈ ಬೆಲೆ ₹100 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹1ರಷ್ಟು ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ 1,010 ಇದ್ದು ನಿನ್ನೆ ಈ ಬೆಲೆ ₹1,000 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹10 ರಷ್ಟು ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿಗೆ ₹10,100 ಇದ್ದು ನಿನ್ನೆ ಈ ಬೆಲೆ ₹10,000 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹100 ರಷ್ಟು ಏರಿಕೆಯಾಗಿದೆ. ಒಂದು ಕೆ.ಜಿ ಬೆಳ್ಳಿಗೆ ₹1,01,000 ಇದ್ದು ನಿನ್ನೆ ಈ ಬೆಲೆ ₹1,00,000 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹1,000 ರಷ್ಟು ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಅನುಸಾರ ನೋಡುವುದಾದರೆ, ಏಪ್ರಿಲ್ 21ರ ಸ್ಪಾಟ್ ಚಿನ್ನದ ಬೆಲೆಯು ಏರಿಕೆ ಕಂಡಿದೆ. ಅಂದರೆ 4:32 GMT ವೇಳೆಗೆ ಸ್ಪಾಟ್ ಗೋಲ್ಡ್ 1.4%ರಷ್ಟು ಏರಿಕೆಗೊಂಡು ಪ್ರತಿ ಔನ್ಸ್‌ಗೆ $3,373.70ಕ್ಕೆ ತಲುಪಿದೆ. ಅದೇ ರೀತಿಯಾಗಿ ಯು.ಎಸ್ ಫ್ಯೂಚರ್ ಗೋಲ್ಡ್ ಕೂಡ ಧನಾತ್ಮಕ ಏರಿಕೆ ಕಂಡಿದೆ. ಅಂಕಿ ಅಂಶಗಳ ಪ್ರಕಾರ ಯು.ಎಸ್ ಫ್ಯೂಚರ್ ಗೋಲ್ಡ್ ಬೆಲೆ $3,386.50 ಕ್ಕೆ ತಲುಪಿದ್ದು, ಶೇ.1.8 ಏರಿಕೆಯಾಗಿದೆ ಎನ್ನಬಹುದು.
ಚಿನ್ನದ ಬೆಲೆ ಭಾರತದಲ್ಲಿ ದಿನದಿಂದ ದಿನಕ್ಕೆ ಈ ಪರಿಯ ಏರಿಕೆ ನೋಡುತ್ತಿರುವುದು ಆತಂಕ ಎದುರಾಗಿಸುವ ಸಂಗತಿಯಾಗಿದೆ. ಟ್ರಂಪ್ ಅವರ ಈ ತೀರ್ಮಾನದಿಂದ ತಕ್ಷಣವೇ ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರತಿಕ್ರಿಯೆ ಕಂಡುಬಂದಿತು. ಇದರಿಂದ ಹೂಡಿಕೆದಾರರಲ್ಲಿ ಭೀತಿಯಿಂದಾಗಿ ಉಂಟಾಗಿದ್ದ ಒತ್ತಡ ಕಡಿಮೆಯಾಯಿತು.ಈ ನಿರ್ಧಾರವು ಜಾಗತಿಕ ಆರ್ಥಿಕ ಸ್ಥಿತಿಗೆ ತಾತ್ಕಾಲಿಕ ಉಸಿರಾಟ ನೀಡಿದರೂ, ಮುಂದಿನ ದಿನಗಳಲ್ಲಿ ಟ್ರಂಪ್ ಆಡಳಿತದ ವ್ಯಾಪಾರ ನೀತಿ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಬಗ್ಗೆ ಇನ್ನೂ ಅನಿಶ್ಚಿತತೆ ಇದೆ.
ಮದುವೆ ಸೀಸನ್‌ಗೆ ಚಿನ್ನ ಖರೀದಿ ಯೋಜಿಸುತ್ತಿದ್ದ ಕುಟುಂಬಗಳು ಹಿಂದಕ್ಕೆ ಜಾರುವ ಸ್ಥಿತಿ ಎದುರಾಗಿದೆ. ಇದರೊಂದಿಗೆ, ಬಂಗಾರ ಹೂಡಿಕೆಗೆ ಇದು ಸರಿಯಾದ ಸಮಯವೇ ಎಂಬ ಪ್ರಶ್ನೆ ಇನ್ನಷ್ಟು ಗಂಭೀರವಾಗಿ ಎದುರಾಗುತ್ತಿದೆ. ಇಂಧನ ದರ, ಡಾಲರ್-ರೂಪಾಯಿ ವಿನಿಮಯ ಮೌಲ್ಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯ ಚಲನೆಗಳು ಈ ದರ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಹೀಗಾಗಿ, ಚಿನ್ನದ ಖರೀದಿಗೆ ಮೊದಲು ನಿಖರ ಮಾಹಿತಿ ಪಡೆದು, ಸಮಗ್ರ ಹೂಡಿಕೆ ಯೋಚನೆಯೊಂದಿಗೆ ಮುಂದಾಗುವುದು ಸೂಕ್ತ.
ಒಟ್ಟಿನಲ್ಲಿ, ಅಮೆರಿಕಾ-ಚೀನಾ ಸಂಘರ್ಷ, ಯುದ್ಧದ ಭೀತಿ, ರೂಪಾಯಿಯ ಮೌಲ್ಯ ಕುಸಿತ, ಜಾಗತಿಕ ಬ್ಯಾಂಕುಗಳ ಬಂಗಾರದ ಸಂಗ್ರಹ, ಹಾಗೂ ದೇಶೀಯ ಮದುವೆ ಅವಧಿಯ ಬೇಡಿಕೆಸೇರಿ ಎಲ್ಲ ಅಂಶಗಳ ಸಮೂಹ ಪರಿಣಾಮವಾಗಿ ಚಿನ್ನದ ದರ ಜಿಗಿತ ಕಂಡಿದೆ. ಹೀಗಾಗಿ ಹೂಡಿಕೆದಾರರು ಶೇರು ಮಾರುಕಟ್ಟೆ ಅಥವಾ ಕ್ರಿಪ್ಟೋ ಮಾರುಕಟ್ಟೆಯ ಬದಲು ಚಿನ್ನವನ್ನು ಭದ್ರ ಹೂಡಿಕೆ ಮಾಧ್ಯಮವೆಂದು ಆಯ್ಕೆ ಮಾಡುತ್ತಿದ್ದಾರೆ.


Click it and Unblock the Notifications