ಏಪ್ರಿಲ್ 29, ಭಾರತದಲ್ಲಿ ಚಿನ್ನದ ಬೆಲೆ: ಕಳೆದ ವಾರ ಚಿನ್ನ ಪ್ರಿಯರಿಗೆ ಖುಷಿ ನೀಡಿದ್ದ ಬೆಲೆ ಇಂದು ನಿರಾಸೆಗೆ ಎಡೆ ಮಾಡಿಕೊಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಚಿನ್ನದ ಬೆಲೆ ಇಳಿಕೆ ಅಥವಾ ಸ್ಥಿರತೆ ಇತ್ತು. ಆದರೆ ಇಂದು ಚಿನ್ನದ ಬೆಲೆ ದಿಢೀರ್ ಏರಿಕೆಯಾಗಿದೆ. ಅಕ್ಷಯ ತೃತೀಯದ ಹಿಂದಿನ ದಿನವಾದ ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿರುವುದು, ಚಿನ್ನ ಕೊಳ್ಳು ಆಸಕ್ತಿ ಹೊಂದಿದವರಲ್ಲಿ ಆರಂಕ ಸೃಷ್ಟಿಸಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನ ಖರೀದಿ ಇನ್ನು ಕನಸೇ ಎನ್ನಬಹುದು. ಈ ಪರಿಯ ಬೆಲೆ ಹೆಚ್ಚಳದಿಂದ ಚಿನ್ನದ ಮೇಲೆ ಹೂಡಿಕೆ ಮಾಡಬೇಕು ಎಂದಿರುವವರಿಗೆ, ನಿಜಕ್ಕೂ ಆಘಾತ ಸಂಭವಿಸಿದೆ. ಚಿನ್ನ ಕೊಳ್ಳುವುದಕ್ಕಿಂತ ಬೆಲೆ ಕೇಳಿದರೇನೆ ಬೆವರಿಳಿಯುವ ಸಂದರ್ಭ ಬಂದೊದಗಿದೆ.

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,980 ಇದೆ.ಅಂದರೆ ನಿನ್ನೆ ₹8,940 ಆಗಿದ್ದು ಇಂದು ₹40 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದಬೆಲೆ 10 ಗ್ರಾಂಗೆ 89 ಸಾವಿರದ 800 ರೂ. ಇದೆ. ಅಂದರೆ ನಿನ್ನೆ 89 ಸಾವಿರದ 400 ರೂ. ಆಗಿದ್ದು ಇಂದು ₹400 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 94 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 94 ಸಾವಿರ ರೂ. ಆಗಿದ್ದು ಇಂದು ₹4,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,797 ಇದೆ. ಅಂದರೆ ನಿನ್ನೆ ₹9,753 ಆಗಿದ್ದು ಇಂದು ₹44 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 97 ಸಾವಿರದ 970 ರೂ. ಇದೆ. ಅಂದರೆ ನಿನ್ನೆ 97 ಸಾವಿರದ 530 ರೂ. ಆಗಿದ್ದು ಇಂದು ₹440 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 79 ಸಾವಿರದ 700 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 75 ಸಾವಿರದ 300 ರೂ. ಆಗಿದ್ದು ಇಂದು ₹4,400 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,348 ಇದೆ. ಅಂದರೆ ನಿನ್ನೆಯ ಬೆಲೆ ₹7,31 ಆಗಿದ್ದು ಇಂದು ಪ್ರತಿ ಗ್ರಾಂಗೆ ₹33 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 73 ಸಾವಿರದ 480 ರೂ. ಇದೆ. ಅಂದರೆ ನಿನ್ನೆಯ ಬೆಲೆ 72 ಸಾವಿರದ 150 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹330 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 34 ಸಾವಿರದ 800 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 31 ಸಾವಿರದ 500 ರೂ. ಆಗಿದ್ದು ಇಂದು ₹3,300 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,980 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,797 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,435 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,980 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,797 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,995 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,812 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,360 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,980 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,797 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,980 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,797 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,980 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,797 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,980 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,797 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,980 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,797 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,348 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,985 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,802 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,985 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,802 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,352 ಆಗಿದೆ.
ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ:
ಇಂದು ಚಿನ್ನದ ಬೆಲೆಯಲ್ಲಿ ಮಾತ್ರ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲಿ ಕಂಡುಬಂದಿಲ್ಲ. ನಿನ್ನೆ 1 ಗ್ರಾಂ ಬೆಳ್ಳಿ ಬೆಲೆ, ₹100.50 ಇತ್ತು. 10 ಗ್ರಾಂ ಬೆಳ್ಳಿ ಬೆಲೆ ₹1,005 ಇತ್ತು. 100 ಗ್ರಾಂ ಬೆಳ್ಳಿ ಬೆಲೆ ₹10,050 ಇತ್ತು. ಹಾಗೆಯೇ 1 ಕೆ.ಜಿ ಬೆಳ್ಳಿ ಬೆಲೆ ನಿನ್ನೆ ₹1,00,500 ಇತ್ತು. ಈ ಬೆಲೆ ಇಂದು ಕೂಡ ಕಾಯ್ದಿರಿಸಿಕೊಂಡಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಏಪ್ರಿಲ್ 29ರಂದು ಸ್ಪಾಟ್ ಗೋಲ್ಡ್ ಬೆಲೆಯಲ್ಲಿ, 0425 ವೇಳೆಗೆ 0.8% ಇಳಿಕೆಯನ್ನು ನೋಡಬಹುದಾಗಿದೆ. ಹಾಗೆಯೇ ಇದು ಇಂದು ಪ್ರತಿ ಔನ್ಸ್‌ಗೆ $3,314.99ರಷ್ಟು ವಹಿವಾಟು ನಡೆಸಿದೆ. ಅದರಂತೆಯೇ ಇಂದು ಅಮೆರಿಕದ ಫ್ಯೂಚರ್ ಗೋಲ್ಡ್ ಬೆಲೆ ಕೂಡ 0.7% ಇಳಿಕೆ ಕಂಡು, ಪ್ರತಿ ಔನ್ಸ್‌ಗೆ $3,325.10 ಆಗಿದೆ.
ಚಿನ್ನದ ಬೆಲೆ ಭಾರತದಲ್ಲಿ ದಿನದಿಂದ ದಿನಕ್ಕೆ ಈ ಪರಿಯ ಏರಿಕೆ ನೋಡುತ್ತಿರುವುದು ಆತಂಕ ಎದುರಾಗಿಸುವ ಸಂಗತಿಯಾಗಿದೆ. ಟ್ರಂಪ್ ಅವರ ಈ ತೀರ್ಮಾನದಿಂದ ತಕ್ಷಣವೇ ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರತಿಕ್ರಿಯೆ ಕಂಡುಬಂದಿತು. ಇದರಿಂದ ಹೂಡಿಕೆದಾರರಲ್ಲಿ ಭೀತಿಯಿಂದಾಗಿ ಉಂಟಾಗಿದ್ದ ಒತ್ತಡ ಕಡಿಮೆಯಾಯಿತು.ಈ ನಿರ್ಧಾರವು ಜಾಗತಿಕ ಆರ್ಥಿಕ ಸ್ಥಿತಿಗೆ ತಾತ್ಕಾಲಿಕ ಉಸಿರಾಟ ನೀಡಿದರೂ, ಮುಂದಿನ ದಿನಗಳಲ್ಲಿ ಟ್ರಂಪ್ ಆಡಳಿತದ ವ್ಯಾಪಾರ ನೀತಿ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಬಗ್ಗೆ ಇನ್ನೂ ಅನಿಶ್ಚಿತತೆ ಇದೆ.
ಮದುವೆ ಸೀಸನ್‌ಗೆ ಚಿನ್ನ ಖರೀದಿ ಯೋಜಿಸುತ್ತಿದ್ದ ಕುಟುಂಬಗಳು ಹಿಂದಕ್ಕೆ ಜಾರುವ ಸ್ಥಿತಿ ಎದುರಾಗಿದೆ. ಇದರೊಂದಿಗೆ, ಬಂಗಾರ ಹೂಡಿಕೆಗೆ ಇದು ಸರಿಯಾದ ಸಮಯವೇ ಎಂಬ ಪ್ರಶ್ನೆ ಇನ್ನಷ್ಟು ಗಂಭೀರವಾಗಿ ಎದುರಾಗುತ್ತಿದೆ. ಇಂಧನ ದರ, ಡಾಲರ್-ರೂಪಾಯಿ ವಿನಿಮಯ ಮೌಲ್ಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯ ಚಲನೆಗಳು ಈ ದರ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಹೀಗಾಗಿ, ಚಿನ್ನದ ಖರೀದಿಗೆ ಮೊದಲು ನಿಖರ ಮಾಹಿತಿ ಪಡೆದು, ಸಮಗ್ರ ಹೂಡಿಕೆ ಯೋಚನೆಯೊಂದಿಗೆ ಮುಂದಾಗುವುದು ಸೂಕ್ತ.
ಒಟ್ಟಿನಲ್ಲಿ, ಅಮೆರಿಕಾ-ಚೀನಾ ಸಂಘರ್ಷ, ಯುದ್ಧದ ಭೀತಿ, ರೂಪಾಯಿಯ ಮೌಲ್ಯ ಕುಸಿತ, ಜಾಗತಿಕ ಬ್ಯಾಂಕುಗಳ ಬಂಗಾರದ ಸಂಗ್ರಹ, ಹಾಗೂ ದೇಶೀಯ ಮದುವೆ ಅವಧಿಯ ಬೇಡಿಕೆಸೇರಿ ಎಲ್ಲ ಅಂಶಗಳ ಸಮೂಹ ಪರಿಣಾಮವಾಗಿ ಚಿನ್ನದ ದರ ಜಿಗಿತ ಕಂಡಿದೆ. ಹೀಗಾಗಿ ಹೂಡಿಕೆದಾರರು ಶೇರು ಮಾರುಕಟ್ಟೆ ಅಥವಾ ಕ್ರಿಪ್ಟೋ ಮಾರುಕಟ್ಟೆಯ ಬದಲು ಚಿನ್ನವನ್ನು ಭದ್ರ ಹೂಡಿಕೆ ಮಾಧ್ಯಮವೆಂದು ಆಯ್ಕೆ ಮಾಡುತ್ತಿದ್ದಾರೆ.


Click it and Unblock the Notifications