ಜಾಗತಿಕ ಮಾರುಕಟ್ಟೆಯಲ್ಲಿ ಸಾಕಷ್ಟು ಏರಿಳಿತಗಳ ನಡುವೆ ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹವು ಮತ್ತಷ್ಟು ದುರ್ಬಲಗೊಂಡಿದೆ. ಎಂಸಿಎಕ್ಸ್‌ನಲ್ಲಿ ಎರಡು ದಿನಗಳ ಕುಸಿತದ ಬಳಿಕ ಚಿನ್ನದ ಬೆಲೆ 10ಗ್ರಾಂಗೆ ಶೇಕಡಾ 0.1ರಷ್ಟು ಏರಿಕೆಗೊಂಡು 46,464 ರೂಪಾಯಿಗೆ ತಲುಪಿದೆ.
ಬೆಳ್ಳಿ ಬೆಲೆಯು ಪ್ರತಿ ಕೆ.ಜಿ.ಗೆ ಶೇಕಡಾ 0.2ರಷ್ಟು ಹೆಚ್ಚಳಗೊಂಡು 66,300 ರೂಪಾಯಿಗೆ ತಲುಪಿದೆ. ಕಳೆದ ವಹಿವಾಟಿನಲ್ಲಿ ಚಿನ್ನವು ಶೇಕಡಾ 0.41 ನಷ್ಟು ಕುಸಿದಿದ್ದರೆ, ಬೆಳ್ಳಿ ಶೇಕಡಾ 1.3ರಷ್ಟು ಕುಸಿದಿದೆ.

ಸ್ಪಾಟ್ ಚಿನ್ನವು ಔನ್ಸ್‌ಗೆ ಶೇಕಡಾ 0.3ರಷ್ಟು ಕುಸಿದು 1,728.15 ಡಾಲರ್‌ಗೆ ತಲುಪಿದೆ. ಇತರ ಅಮೂಲ್ಯ ಲೋಹಗಳ ಪೈಕಿ ಬೆಳ್ಳಿ ಶೇಕಡಾ 0.6ರಷ್ಟು ಕುಸಿದು 24.69 ಡಾಲರ್‌ಗೆ ತಲುಪಿದ್ದರೆ, ಪ್ಲಾಟಿನಂ ಶೇಕಡಾ 0.6ರಷ್ಟು ಕುಸಿದು 1,163.57 ಡಾಲರ್‌ಗೆ ತಲುಪಿದೆ.
ಸೋಮವಾರ ಎಂಸಿಎಕ್ಸ್‌ನಲ್ಲಿ ಚಿನ್ನದ ಭವಿಷ್ಯವು 10 ಗ್ರಾಂಗೆ ಶೇಕಡಾ 0.03ರಷ್ಟು ಕುಸಿದು, 46,580 ರೂಪಾಯಿಗೆ ತಲುಪಿದ್ರೆ, ಬೆಳ್ಳಿ ಬೆಲೆಯು ಶೇಕಡಾ 0.15ರಷ್ಟು ಕುಸಿದು ಪ್ರತಿ ಕೆಜಿಗೆ 66,884 ರೂಪಾಯಿಗೆ ತಲುಪಿದೆ. ಕಳೆದ ವಹಿವಾಟಿನಲ್ಲಿ ಚಿನ್ನವು ಶೇಕಡಾ 0.5ರಷ್ಟು ಕುಸಿದಿದ್ದು, ಹಿಂದಿನ ವಹಿವಾಟಿನ ಲಾಭವನ್ನು ಕಸಿದುಕೊಂಡಿತು.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications