ಚಿನ್ನ ಕೊಳ್ಳುವವರಿಗೆ ಶಾಕ್ ; ಗೋಲ್ಡ್ ರೇಟ್ ಮತ್ತೆ ಏರಿಕೆ ಬೆಲೆ ನೀವೆ ನೋಡಿ

ಚಿನ್ನ ಕೊಳ್ಳುವರಿಗೆ ಶಾಕ್ ಬಂಗಾರದ ಬೆಲೆ ಇಂದು ಏರಿಕೆಯಾಗಿದೆ. ಹೌದು,ಚಿನ್ನ ಮಾರುಕಟ್ಟೆಯಲ್ಲಿ ಎರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನ ಇಂದು ದಿಡೀರನೆ ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಯಥಾಸ್ಥಿತಿಯಲ್ಲಿ ಇದೆ. ಮತ್ತೆ ಚಿನ್ನ ತನ್ನ ಓಟವನ್ನ ಮುಂದುವರೆಸಿದೆ. ಬಹುದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ಮತ್ತೆ ನಿರಾಸೆಯಾಗಿದೆ. ಜಾಗತಿಕವಾಗಿ ಚಿನ್ನದ ಬೇಡಿಕೆ ಹೆಚ್ಛಾಗುತ್ತಿದ್ದು, ಈ ಹಿನ್ನೆಲೆ ಚಿನ್ನದ ದರ ಏರಿಕೆಯಾಗಿದೆ. ಯುಎಸ್‌ ಡಾಲರ್‌ ಏರಿಕೆ ಮತ್ತು ರೂಪಾಯಿ ಇಳಿಕೆಯಿಂದಾಗಿ ಚಿನ್ನದ ದರ ಏರಿಕೆಯಾಗ್ತಿದೆ. ಹಾಗಿದ್ರೆ ಭಾರತದಲ್ಲಿ ಬುಧವಾರದಂದು ( ಜ.29) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು, ಬಂಗಾರದ ಮಾರುಕಟ್ಟೆಯಲ್ಲಿ ಇಂದು ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,950 ರೂಪಾಯಿ ಇದೆ. ಅಪರಂಜಿ 24 ಕ್ಯಾರಟ್​ನ ಚಿನ್ನದ ಬೆಲೆ ರೂಪಾಯಿ 82,850 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಗೋಲ್ಡ್ ರೇಟ್ ಮತ್ತೆ ಏರಿಕೆ ಎಷ್ಟು?

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?

ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,595 ರೂಪಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,193 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 75,100 ರೂ.ಗಳ ಇದ್ದದ್ದು 75,950 ರೂ.ಗಳು ಆಗಿದ್ದು,850 ರೂ.ಗಳ ಏರಿಕೆಯನ್ನು ಕಂಡಿದೆ.10 ಗ್ರಾಂ ನ 24 ಕ್ಯಾರಟ್‌ ಅಪರಂಜಿ ಚಿನ್ನದ ಬೆಲೆ ನಿನ್ನೆ 81,930 ರೂ.ಗಳ ಇದ್ದದ್ದು 82,850 ಆಗಿದ್ದು,920 ರೂ.ಗಳ ಏರಿಕೆಯಾಗಿದೆ.

ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ ನಿನ್ನೆ 7,51,000 ಇದ್ದದ್ದು 7,59,500 ರೂ.ಗಳು ಆಗಿದ್ದು, 8,500 ರೂ.ಗಳ ಏರಿಕೆ ಕಂಡಿದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ ನಿನ್ನೆ 8,19,300 ರೂ. ಇದ್ದದ್ದು 8,28,500 ರೂ.ಗಳು ಆಗಿದ್ದು, 9,200 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 62,140 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ.

ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?

ಬೆಳ್ಳಿಯ ಬೆಲೆಯಲ್ಲಿ ಇಂದು ಸ್ಥಿರವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 96,500 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 96.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 965 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,650 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾಣೆ ಕಂಡಿಲ್ಲ.

MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?

MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.14% ನಷ್ಟು ಇಳಿಕೆಯಾಗಿ 80,403 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.07% ನಷ್ಟು ಏರಿಕೆಯಾಗಿ 91,115 ರೂಪಾಯಿ ವಹಿವಾಟು ನಡೆಸುತ್ತಿದೆ. ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಈ ತಿಂಗಳಿನಲ್ಲಿ ಏರಿಳಿತಗಳನ್ನ ಗಮನಿಸುವಂತಾಯಿತು. ಹಳದಿ ಲೋಹಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗ್ತಿದೆ. ರಾಯಿಟರ್ಸ್‌ ವರದಿ ಪ್ರಕಾರ ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ವ್ಯಾಪಾರ ನೀತಿಗಳು ಮತ್ತು ಯುಎಸ್‌ ಡಾಲರ್‌ ಅನಿಶ್ಚಿತತೆಗಳ ನಡುವೆ ಚಿನ್ನದ ದರಗಳು ನಿನ್ನೆ ಸಾಕಷ್ಟು ಎರಿಕೆಯನ್ನ ಕಂಡಿವೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ?

ಸ್ಪಾಟ್‌ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಇಳಿಕೆಯಾಗಿವೆ. ವರದಿ ಪ್ರಕಾರ ಸ್ಪಾಟ್‌ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.01% ಇಳಿಕೆಯಾಗಿ 2,763.56 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.10% ಏರಿಕೆಯಾಗಿ 30.45 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್‌ ಬೆಲೆಯು ಪ್ರತಿ ಔನ್ಸ್‌ಗೆ 0.21% ಇಳಿಕೆಯಾಗಿ 944.25 ಡಾಲರ್‌ ತಲುಪಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 0.10% ಇಳಿಕೆಯಾಗಿ 952.50 ಡಾಲರ್‌ ತಲುಪಿದೆ.

ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ

ಕ್ರಮ
ಸಂಖ್ಯೆ
ನಗರಗಳು22 ಕ್ಯಾರೆಟ್24 ಕ್ಯಾರೆಟ್
1ಬೆಂಗಳೂರುರೂ.7,595ರೂ.8,285
2ಚೆನ್ನೈರೂ.7,595ರೂ.8,285
3ಮುಂಬೈರೂ.7,595ರೂ.8,285
4ದೆಹಲಿರೂ.7,610ರೂ.8,300
5ಕೋಲ್ಕತ್ತಾರೂ.7,595ರೂ.8,285
6ಪುಣೆರೂ.7,595ರೂ.8,285

Gold Price: ಚಿನ್ನ ಮತ್ತೆ ದುಬಾರಿ! ಬೆಳ್ಳಿ ಬೆಲೆ ಏರಿಕೆ,ಇಂದಿನ ಬೆಲೆ ತಿಳಿಯಿರಿ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

ಬೆಂಗಳೂರು: 9,650ರೂ

ಚೆನ್ನೈ: 10,400ರೂ

ಮುಂಬೈ: 9,650ರೂ

ದೆಹಲಿ: 9,650 ರೂ

ಕೋಲ್ಕತಾ: 9,650ರೂ

ಹೈದರಾಬಾದ್: 10,400 ರೂ

ಪುಣೆ : 9,650 ರೂ

ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+