Gold Price: ಸಂಕ್ರಾಂತಿ ದಿನ ಚಿನ್ನ ಬೆಲೆ ಅಲ್ಪ ಮಟ್ಟದಲ್ಲಿ ಇಳಿಕೆ ಕಂಡಿದೆ. ಚಿನ್ನದ ಮಾರುಕಟ್ಟೆ ಬಂಗಾರದ ಪ್ರಿಯರಿಗೆ ಇಂದು ಸಿಹಿಸುದ್ದಿ ಕೊಟ್ಟಿದೆ. ಮಕರ ಸಂಕ್ರಾಂತಿ ದಿನ ಚಿನ್ನದ ಬೆಲೆ ಕಡಿಮೆಯಾಗಿದ್ದರಿಂದ ಬಂಗಾರ ಪ್ರಿಯರಿಗೆ ಖುಷಿ ದುಪ್ಪಟ್ಟಾಗಿದೆ.ಚಿನ್ನದ ಬೆಲೆ ಜೊತೆಗೆ ಬೆಳ್ಳಿಯ ಬೆಲೆ ಕೂಡ ಇಂದು ಕೊಂಚ ಕಡಿಮೆಯಾಗಿದೆ. ಹಾಗಿದ್ರೆ ಚಿನ್ನದ ಮಾರುಕಟ್ಟೆಯಲ್ಲಿ ಮಂಗಳವಾರದಂದು( ಜ.14) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ವಿವರ ಇಲ್ಲಿದೆ ನೋಡಿ
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ ಕ್ಕೆ 73,300 ರೂಪಾಯಿ ಇದೆ. ಅಪರಂಜಿ 24 ಕ್ಯಾರಟ್ನ ಚಿನ್ನದ ಬೆಲೆ 79,960 ರೂಪಾಯಿ ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಬಂಗಾರದ ಬೆಲೆ ಇಂದು ಏರಿಕೆ ಕಂಡಿದೆ.

ಬೆಳ್ಳಿ ಬೆಲೆಯಲ್ಲಿ ದಿಢೀರ್ ಕುಸಿತ
ಚಿನ್ನದ ಬೆಲೆಗೆ ಇಳಿಕೆ ಜೊತೆಗೆ ಬೆಳ್ಳಿ ಬೆಲೆಯಲ್ಲೂ ದಿಡೀರ್ ಕುಸಿತ ಕಂಡಿದೆ. ಪ್ರಸ್ತುತ, ಬೆಂಗಳೂರಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆಯಲ್ಲಿ 2000 ಇಳಿಕೆಯಾಗಿದ್ದು, 92500ಕ್ಕೆ ತಲುಪಿದೆ.
ಇಂದು ಭಾರತದಲ್ಲಿ ಚಿನ್ನದ ದರ ಇಂದು ಕಡಿಮೆಯಾಗಿದೆ. ಪ್ರಸ್ತುತ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,330 ರೂಪಾಯಿ ಇದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 7,996 ರೂ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 73,300ಇಂದು ರೂಪಾಯಿ ವಾಹಿವಾಟುವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 79,960ರೂ ಇದೆ.
ಇಂದು 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,33,000 ರೂ ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 7,99,600 ರೂ.ಗಳ ವಹಿವಾಟುವಿದೆ.ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ರೆ ಅಪರಂಜಿ ಚಿನ್ನದಲ್ಲಿ 1,100 ಇಳಿಕೆ ಕಂಡಿದೆ. 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 59,970 ರೂ ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಮಟ್ಟದಲ್ಲಿ ಇಳಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟಿದೆ?
ಬೆಳ್ಳಿಯ ಬೆಲೆಯಲ್ಲಿ ಇಂದು ಭಾರತದಲ್ಲಿ ಯಾವುದೇ ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಈಗ ಪ್ರತಿ ಕಿಲೋಗ್ರಾಂಗೆ 92,500ರೂಪಾಯಿಗಳ ವಹಿವಾಟುವಿದೆ.ಒಂದು ಗ್ರಾಂ ಗೆ ಬೆಳ್ಳಿಗೆ 92.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 925 ರೂಪಾಯಿಯಾಗಿದೆ. 100 ಗ್ರಾಂ ಬೆಳ್ಳಿ 9,250 ರೂ ಗಳು ಇದೆ. ಇಂದು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.21%ನಷ್ಟು ಇಳಿಕೆಯಾಗಿ 77,155ರೂ. ಆಗಿದೆ. ಅದೇ ರೀತಿ, ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.04%ನಷ್ಟು ಇಳಿಕೆಯಾಗಿ 89,188 ರೂಪಾಯಿ ವಹಿವಾಟು ನಡೆಸುತ್ತಿದೆ. ಜಾಗತಿಕ ಬೇಡಿಕೆ, ಬಡ್ಡಿ ದರಗಳು, ಕರೆನ್ಸಿ ವಿನಿಮಯ ದರಗಳು, ಸರ್ಕಾರಿ ನೀತಿಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಹೆಚ್ಚು ಪರಿಣಾಮ ಬೀರಬಹುದು.
ಸ್ಪಾಟ್ ಗೋಲ್ಡ್ ರೇಟ್ ?
ಟ್ರೇಡಿಂಗ್ ಎಕನಾಮಿಕ್ಸ್ ಪ್ರಕಾರ, ಸೋಮವಾರದಂದು ಚಿನ್ನದ ಬೆಲೆಗಳು ಪ್ರತಿ ಔನ್ಸ್‌ಗೆ $2,660 ವ್ಯಾಪಾರ ಮಾಡಲು ನಿರಾಕರಿಸಿದವು ಯುಎಸ್ ವರದಿಯು ಡಾಲರ್ ಅನ್ನು ಎರಡು ವರ್ಷಗಳ ಗರಿಷ್ಠ ಮಟ್ಟಕ್ಕೆ ಹೆಚ್ಚಿಸಿತು ಮತ್ತು ಫೆಡರಲ್ ರಿಸರ್ವ್ ಈ ವರ್ಷ ಬಡ್ಡಿದರ ಕಡಿತದೊಂದಿಗೆ ಎಚ್ಚರಿಕೆಯಿಂದ ಮುಂದುವರಿಯುತ್ತದೆ ಎಂಬ ನಿರೀಕ್ಷೆಗಳು ಇವೆ.ನವೆಂಬರ್ 2022 ರಿಂದ ಅದರ ಅತ್ಯುನ್ನತ ಮಟ್ಟಕ್ಕೆ ಏರಿದ ಬಲವಾದ ಡಾಲರ್, ಸಾಗರೋತ್ತರ ಖರೀದಿದಾರರಿಗೆ ಚಿನ್ನವನ್ನು ಹೆಚ್ಚು ದುಬಾರಿಯನ್ನಾಗಿ ಮಾಡಿತು, ಇದು ಕುಸಿತಕ್ಕೆ ಕಾರಣವಾಗಿದೆ. ಚಿನ್ನದ ಒಂದು ಬಲವಾದ ವಾರದ ನಂತರ ಕೆಲವು ಲಾಭ-ತೆಗೆದುಕೊಳ್ಳುವಿಕೆಯಲ್ಲಿ ಕುಸಿತವು ಕುಸಿತಕ್ಕೆ ಕಾರಣವಾಗಿದೆ.
ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ
| ನಗರ | 22ಕ್ಯಾರೆಟ್ | 24K ಕ್ಯಾರೆಟ್ |
| ಬೆಂಗಳೂರು | 7,330 | 7,996 |
| ಚೆನ್ನೈ | 7,330 | 7,996 |
| ಮುಂಬೈ | 7,330 | 7,996 |
| ದೆಹಲಿ | 7,345 | 8,011 |
| ಕೋಲ್ಕತಾ | 7,330 | 7,996 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
| ಬೆಂಗಳೂರು | 9,250 ರೂ |
| ಚೆನ್ನೈ | 10,000 ರೂ |
| ಮುಂಬೈ | 9,250 ರೂ |
| ದೆಹಲಿ | 9,250 ರೂ |
| ಕೋಲ್ಕತಾ | 9,250 ರೂ |


Click it and Unblock the Notifications