ಚಿನ್ನದ ಬೆಲೆ ಇಳಿಕೆಯನ್ನೇ ಕಾಯುತ್ತಿದ್ದ ಮಹಿಳೆಯರಿಗೆ ಅಂತೂ ಇಂತೂ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆ ಹಾವು ಏಣಿಯಾಟ ಆಡುತ್ತಿದೆ. ಚಿನ್ನದ ಬೆಲೆ ಒಮ್ಮೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾದರೆ, ದಿಢೀರ್ ಅಂತಾ ಗಗನಕ್ಕೇರುತ್ತದೆ. ಆದರೆ ಇಂದು ಮಹಿಳೆಯರಿಗೆ ಸ್ವಲ್ಪ ಖುಷಿ ಸುದ್ದಿ ಸಿಕ್ಕಿದೆ ಏಕೆಂದರೆ ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇದರಿಂದ ಚಿನ್ನದ ಬೆಲೆ ಯಾವಾಗ ಇಳಿಕೆಯಾಗುತ್ತದೆ ಎಂದು ಕಾಯುತ್ತಿದ್ದ ಮಹಿಳೆಯರಿಗೆ ಸ್ವಲ್ಪ ನಿರಾಳವಾಗಿದೆ.

ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ.
ಭಾರತದಲ್ಲಿ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,285 ಆಗಿದೆ. ನಿನ್ನೆ ಇದರ ಬೆಲೆ ₹8,310 ಆಗಿದ್ದು ನಿನ್ನೆಗಿಂತ ಇಂದು, ₹25 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹82,850 ಆಗಿದೆ. ನಿನ್ನೆಯ ಬೆಲೆ ₹83,100 ಆಗಿದ್ದು ನಿನ್ನೆಗಿಂತ ಇಂದಿಗೆ ₹250 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ 28 ಸಾವಿರದ 500 ರೂ. ಆಗಿದೆ. ನಿನ್ನೆಯ ಬೆಲೆ ₹8,31,000 ರೂ. ಆಗಿದ್ದು ನಿನ್ನೆಗಿಂತ ಇಂದು ₹2,500 ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,038 ಆಗಿದೆ. ನಿನ್ನೆ ಇದರ ಬೆಲೆ ₹9,066 ಆಗಿದ್ದು ನಿನ್ನೆಗಿಂತ ಇಂದು, ₹28 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹90,380 ಆಗಿದೆ. ನಿನ್ನೆಯ ಬೆಲೆ ₹90,660 ಆಗಿದ್ದು ನಿನ್ನೆಗಿಂತ ಇಂದಿಗೆ ₹280 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 9 ಲಕ್ಷ 3 ಸಾವಿರದ 800 ರೂ. ಆಗಿದೆ. ನಿನ್ನೆಯ ಬೆಲೆ 9 ಲಕ್ಷ 6 ಸಾವಿರದ 600 ರೂ. ಆಗಿದ್ದು ನಿನ್ನೆಗಿಂತ ಇಂದು ₹2,800 ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹6,779 ಆಗಿದೆ. ನಿನ್ನೆ ಇದರ ಬೆಲೆ ₹6,799 ಆಗಿದ್ದು ನಿನ್ನೆಗಿಂತ ಇಂದು, 20 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹67,790 ಆಗಿದೆ. ನಿನ್ನೆಯ ಬೆಲೆ ₹67,990 ಆಗಿದ್ದು ನಿನ್ನೆಗಿಂತ ಇಂದಿಗೆ 200 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 6 ಲಕ್ಷ 77 ಸಾವಿರದ 900 ರೂ. ಆಗಿದೆ. ನಿನ್ನೆಯ ಬೆಲೆ 6 ಲಕ್ಷ 79 ಸಾವಿರದ 900 ರೂ. ಆಗಿದ್ದು ನಿನ್ನೆಗಿಂತ ಇಂದು 2,000 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,285 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,038 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,830 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,285 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,038 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,779 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,300 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,053 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,791 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,285 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,038 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,779 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,285 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,038 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,779 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,285 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,038 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,779 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,285 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,038 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,779 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,285 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,038 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,779 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,043 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,783 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,290 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,290 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,783 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹94 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ 940 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹9,400 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹94,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಭಾರತದಲ್ಲಿ ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 7) ಬೆಳಿಗ್ಗೆ 3:31 ವೇಳೆಗೆ ಸ್ಪಾಟ್ ಚಿನ್ನದ ಬೆಲೆ $3,027.90 ಪ್ರತಿ ಔನ್ಸ್ ಆಗಿದ್ದು, ಅದು 0.3% ಇಳಿಕೆಯನ್ನು ದಾಖಲಿಸಿದೆ. ಮೊದಲುದಿನದ ವಹಿವಾಟಿನ ಆರಂಭದಲ್ಲಿ ಚಿನ್ನದ ಬೆಲೆ 1% ಕ್ಕಿಂತ ಹೆಚ್ಚು ಇಳಿದು ಮಾರ್ಚ್ 13 ನಂತರದ ಕನಿಷ್ಠ ಮಟ್ಟ ತಲುಪಿತ್ತು.
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications