ಮಹಿಳೆಯರಿಗೆ ಭರ್ಜರಿ ಗುಡ್‌ನ್ಯೂಸ್: ಭಾರತದಲ್ಲಿ 24K ಚಿನ್ನದ ಬೆಲೆಯಲ್ಲಿ ₹1,600 ಇಳಿಕೆ..ಹಾಗಾದ್ರೆ 22K ಗೋಲ್ಡ್ ಬೆಲೆ ಎಷ್ಟು..?

ಮಹಿಳೆಯರಿಗೆ ಅಂತೂ ಗುಡ್‌ನ್ಯೂಸ್‌ ಸಿಕ್ಕಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆ ಹಾವು ಏಣಿಯಾಟ ಆಡುತ್ತಿದೆ. ಚಿನ್ನದ ಬೆಲೆ ಒಮ್ಮೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾದರೆ, ದಿಢೀರ್ ಅಂತಾ ಗಗನಕ್ಕೇರುತ್ತದೆ. ಆದರೆ ಇಂದು ಮಹಿಳೆಯರಿಗೆ ಸ್ವಲ್ಪ ಖುಷಿ ಸುದ್ದಿ ಸಿಕ್ಕಿದೆ ಏಕೆಂದರೆ ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇದರಿಂದ ಚಿನ್ನದ ಬೆಲೆ ಯಾವಾಗ ಇಳಿಕೆಯಾಗುತ್ತದೆ ಎಂದು ಕಾಯುತ್ತಿದ್ದ ಮಹಿಳೆಯರಿಗೆ ಸ್ವಲ್ಪ ನಿರಾಳವಾಗಿದೆ.

ಭಾರತದಲ್ಲಿ 24K ಚಿನ್ನದ ಬೆಲೆಯಲ್ಲಿ ₹1,600 ಇಳಿಕೆ..!

ಆದರೆ ಇಂದಿನ ಚಿನ್ನದ ಬೆಲೆ ಅಷ್ಟೊಂದು ದೊಡ್ಡ ಮಟ್ಟದ ಇಳಿಕೆ ಕಂಡುಬಂದಿಲ್ಲ. ಆದರೆ ಚಿನ್ನದ ಬೆಲೆ ಏರಿಕೆಯಾಗಿಲ್ಲ ಎಂಬುದೊಂದು ಸಮಾಧಾನಕರ ಸಂಗತಿ ಎನ್ನಬಹುದು. ಭಾರತದಲ್ಲಿ ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಾದ ಸ್ಥಾನವಿದೆ. ಭಾರತದಲ್ಲಿ ಚಿನ್ನ ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಇತ್ತೀಚಿನ ಚಿನ್ನದ ಬೆಲೆಯನ್ನು ಪರಿಗಣಿಸಿದರೆ, ಚಿನ್ನ ಕೊಳ್ಳುವುದಕ್ಕಿಂತ ಸೈಟ್ ಅಥವಾ ಮನೆ ಮೇಲೆ ಹೂಡಿಕೆ ಮಾಡುವುದೇ ಎಷ್ಟೋ ಉತ್ತಮ ಎಂಬಂತಾಗಿದೆ.

ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ.

ಇನ್ನು ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಯು ಒಂದೇ ಕಾರಣದಿಂದ ಆಗುವುದಿಲ್ಲ. ಹಲವಾರು ಕಾರಣಗಳಿಂದ ಚಿನ್ನದ ಬೆಲೆ ಇಳಿಕೆಯಾಗುತ್ತದೆ. ಅಂದರೆ ಜಾಗತಿಕ ಚಿನ್ನದ ಬೆಲೆಗಳು ಪ್ರಮುಖವಾಗಿ ಡಾಲರ್‌ನ ಬಲ, ತೈಲದ ಬೆಲೆಗಳು, ಮತ್ತು ಜಿಯೋಪಾಲಿಟಿಕಲ್ ಘಟನೆಗಳ ಮೇಲೆ ಅವಲಂಬಿತವಾಗಿರುತ್ತವೆ. ಅವುಗಳ ಆಧಾರದ ಮೇಲೆ ಚಿನ್ನದ ಬೆಲೆ ಇಳಿಕೆ ಅಥವಾ ಏರಿಕೆಯಾಗುತ್ತದೆ. ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿದಿದ್ದರೆ, ಅದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲಿಯೂ ಕಾಣಬಹುದು.ಅಮೆರಿಕಾದ ಕೇಂದ್ರ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದರೆ, ಹೂಡಿಕೆದಾರರು ಚಿನ್ನದ ಬದಲು ಬಡ್ಡಿದರ ಹೊಂದಿರುವ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸುತ್ತಾರೆ, ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬೆಲೆ ಇಳಿಕೆಗೆ ಕಾರಣವಾಗುತ್ತದೆ. ಹಾಗೆಯೇ ರೂಪಾಯಿ ಮೌಲ್ಯವು ಡಾಲರ್ ಎದುರು ಬಲವಾಗಿದ್ದರೆ, ಚಿನ್ನದ ಆಮದು ವೆಚ್ಚ ಕಡಿಮೆಯಾಗುತ್ತದೆ, ಇದು ಸ್ಥಳೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಗೆ ಕಾರಣವಾಗಬಹುದು. ವಿವಿಧ ಹಬ್ಬಗಳು, ವಿವಾಹ ಸೀಸನ್ ಮುಂತಾದ ಸಂದರ್ಭಗಳಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುತ್ತದೆ. ಆದರೆ, ಇಂತಹ ಸಂದರ್ಭಗಳಿಲ್ಲದಿದ್ದಾಗ ಅಥವಾ ಆರ್ಥಿಕ ಸ್ಥಿತಿಯಿಂದ ಬೇಡಿಕೆ ಕಡಿಮೆಯಾದಾಗ, ಬೆಲೆ ಇಳಿಯಬಹುದು. ಹೀಗೆ ನಾನಾ ಕಾರಣಗಳಿಂದ ಚಿನ್ನದ ಬೆಲೆ ಇಳಿಕೆ ಅಥವಾ ಏರಿಕೆಯಾಗಬಹುದು. ಹಾಗಾದರೆ ಇಂದು ಭಾರತದಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯುವುದಾದರೆ.

ಭಾರತದಲ್ಲಿ ಚಿನ್ನದ ಬೆಲೆ:

22 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,215 ಆಗಿದೆ. ನಿನ್ನೆ ಇದರ ಬೆಲೆ ₹8,230 ಆಗಿದ್ದು ನಿನ್ನೆಗಿಂತ ಇಂದು, ₹15 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹82,150 ಆಗಿದೆ. ನಿನ್ನೆಯ ಬೆಲೆ ₹82,300 ಆಗಿದ್ದು ನಿನ್ನೆಗಿಂತ ಇಂದಿಗೆ ₹150 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ 21 ಸಾವಿರದ 500 ರೂ. ಆಗಿದೆ. ನಿನ್ನೆಯ ಬೆಲೆ ₹8,23,000 ರೂ. ಆಗಿದ್ದು ನಿನ್ನೆಗಿಂತ ಇಂದು ₹1,500 ಇಳಿಕೆಯಾಗಿದೆ.

24 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,962 ಆಗಿದೆ. ನಿನ್ನೆ ಇದರ ಬೆಲೆ ₹8,978 ಆಗಿದ್ದು ನಿನ್ನೆಗಿಂತ ಇಂದು, ₹16 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹89,620 ಆಗಿದೆ. ನಿನ್ನೆಯ ಬೆಲೆ ₹89,780 ಆಗಿದ್ದು ನಿನ್ನೆಗಿಂತ ಇಂದಿಗೆ ₹160 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷ 96 ಸಾವಿರದ 200 ರೂ. ಆಗಿದೆ. ನಿನ್ನೆಯ ಬೆಲೆ 8 ಲಕ್ಷ 97 ಸಾವಿರದ 800 ರೂ. ಆಗಿದ್ದು ನಿನ್ನೆಗಿಂತ ಇಂದು ₹1,600 ಇಳಿಕೆಯಾಗಿದೆ.

18 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹6,722 ಆಗಿದೆ. ನಿನ್ನೆ ಇದರ ಬೆಲೆ ₹6,734 ಆಗಿದ್ದು ನಿನ್ನೆಗಿಂತ ಇಂದು, 12 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹67,220 ಆಗಿದೆ. ನಿನ್ನೆಯ ಬೆಲೆ ₹67,340 ಆಗಿದ್ದು ನಿನ್ನೆಗಿಂತ ಇಂದಿಗೆ 120 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 6 ಲಕ್ಷ 72 ಸಾವಿರದ 200 ರೂ. ಆಗಿದೆ. ನಿನ್ನೆಯ ಬೆಲೆ 6 ಲಕ್ಷ 73 ಸಾವಿರದ 400 ರೂ. ಆಗಿದ್ದು ನಿನ್ನೆಗಿಂತ ಇಂದು 1,200 ರೂ. ಇಳಿಕೆಯಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,215 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,962 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,785 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,215 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,962 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,722 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,977 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,215 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,962 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,722 ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,215 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,962 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,722 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,215 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,962 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,722 ಆಗಿದೆ..

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,215 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,962 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,722 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,215 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,962 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,722 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,220 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,967 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,726 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,220 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,967 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,726 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹101ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹1,010 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹10,100 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹1,01,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.

ಸ್ಪಾಟ್ ಗೋಲ್ಡ್ ವಿವರ:

ಇಂದು (ಮಾರ್ಚ್ 24) ರಾಯಿಟರ್ಸ್ ವರದಿ ಪ್ರಕಾರ, 0302 GMT ವೇಳೆಗೆ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ಗೆ $3,016.43 ಗೆ ಇಳಿದಿದೆ, ಇದು 0.2% ಕುಸಿತವಾಗಿದೆ. ಹಾಗೆಯೇ, ಯು.ಎಸ್. ಗೋಲ್ಡ್ ಫ್ಯೂಚರ್ಸ್ ದರ $3,020.80 ನಷ್ಟವಿಲ್ಲದ ಮಟ್ಟದಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಈ ಕುಸಿತದ ಪ್ರಮುಖ ಕಾರಣವೆಂದರೆ, ಹೂಡಿಕೆದಾರರು ಮುಂದಿನ ಆರ್ಥಿಕ ಬೆಳವಣಿಗೆಗಳ ನಿರೀಕ್ಷೆಯಲ್ಲಿ ತಯಾರಿ ನಡೆಸುತ್ತಿದ್ದಾರೆ ಮತ್ತು ಬಡ್ಡಿದರ ಬದಲಾವಣೆಯ ಕುರಿತು ಸ್ಪಷ್ಟತೆ ನಿರೀಕ್ಷಿಸುತ್ತಿದ್ದಾರೆ.

ಇಂದು ಚಿನ್ನದ ಬೆಲೆ ಸ್ವಲ್ಪ ಕಡಿಮೆಯಾಗಿದೆ. ಇದರ ಮುಖ್ಯ ಕಾರಣ ಅಮೆರಿಕನ್ ಡಾಲರ್‌ನ ಮೌಲ್ಯ ಸ್ವಲ್ಪ ಹೆಚ್ಚಾಗಿರುವುದು. ಕಳೆದ ವಾರ ಚಿನ್ನದ ಬೆಲೆ ಮೂರು ದಿನಗಳ ಕಾಲ ದಾಖಲಾತಿ ಮಟ್ಟಕ್ಕೆ ಏರಿತ್ತು, ಇದಕ್ಕೆ ಜಾಗತಿಕ ಆರ್ಥಿಕ ಮತ್ತು ರಾಜಕೀಯ ಅನಿಶ್ಚಿತತೆ, ಹಾಗೆಯೇ ಅಮೆರಿಕದಲ್ಲಿ ಬಡ್ಡಿದರ ಕಡಿತವಾಗಬಹುದು ಎಂಬ ನಿರೀಕ್ಷೆ ಕಾರಣವಾಗಿತ್ತು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+