ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹಾವು ಏಣಿಯಾಟ ಆಡುತ್ತಿದೆ. ಕಳೆದ ಕೆಲ ದಿನಗಳಿಂದ ಏರಿಕೆಯನ್ನೇ ನೋಡುತ್ತಿರುವ ಚಿನ್ನ ಇಂದು ಕೊಂಚ ಕುಸಿತವಾಗಿದೆ. ಚಿನ್ನದ ಬೆಲೆ ಒಮ್ಮೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾದರೆ, ದಿಢೀರ್ ಅಂತಾ ಗಗನಕ್ಕೇರುತ್ತದೆ. ಆದರೆ ಇಂದು ಮಹಿಳೆಯರಿಗೆ ಸ್ವಲ್ಪ ಖುಷಿ ಸುದ್ದಿ ಸಿಕ್ಕಿದೆ ಏಕೆಂದರೆ ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇದರಿಂದ ಚಿನ್ನದ ಬೆಲೆ ಯಾವಾಗ ಇಳಿಕೆಯಾಗುತ್ತದೆ ಎಂದು ಕಾಯುತ್ತಿದ್ದ ಮಹಿಳೆಯರಿಗೆ ಸ್ವಲ್ಪ ನಿರಾಳವಾಗಿದೆ.

ಚಿನ್ನ ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಹಾಗೂ ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಾದ ಸ್ಥಾನವಿದೆ. ಇತ್ತೀಚಿನ ಚಿನ್ನದ ಬೆಲೆಯನ್ನು ಪರಿಗಣಿಸಿದರೆ, ಚಿನ್ನ ಕೊಳ್ಳುವುದಕ್ಕಿಂತ ಸೈಟ್ ಅಥವಾ ಮನೆ ಮೇಲೆ ಹೂಡಿಕೆ ಮಾಡುವುದೇ ಎಷ್ಟೋ ಉತ್ತಮ ಎಂಬಂತಾಗಿದೆ. ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ.
ಇನ್ನು ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಯು ಒಂದೇ ಕಾರಣದಿಂದ ಆಗುವುದಿಲ್ಲ. ಹಲವಾರು ಕಾರಣಗಳಿಂದ ಚಿನ್ನದ ಬೆಲೆ ಇಳಿಕೆಯಾಗುತ್ತದೆ. ಅಂದರೆ ಜಾಗತಿಕ ಚಿನ್ನದ ಬೆಲೆಗಳು ಪ್ರಮುಖವಾಗಿ ಡಾಲರ್‌ನ ಬಲ, ತೈಲದ ಬೆಲೆಗಳು, ಮತ್ತು ಜಿಯೋಪಾಲಿಟಿಕಲ್ ಘಟನೆಗಳ ಮೇಲೆ ಅವಲಂಬಿತವಾಗಿರುತ್ತವೆ. ಅವುಗಳ ಆಧಾರದ ಮೇಲೆ ಚಿನ್ನದ ಬೆಲೆ ಇಳಿಕೆ ಅಥವಾ ಏರಿಕೆಯಾಗುತ್ತದೆ. ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿದಿದ್ದರೆ, ಅದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲಿಯೂ ಕಾಣಬಹುದು.ಅಮೆರಿಕಾದ ಕೇಂದ್ರ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದರೆ, ಹೂಡಿಕೆದಾರರು ಚಿನ್ನದ ಬದಲು ಬಡ್ಡಿದರ ಹೊಂದಿರುವ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸುತ್ತಾರೆ, ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬೆಲೆ ಇಳಿಕೆಗೆ ಕಾರಣವಾಗುತ್ತದೆ. ಹಾಗೆಯೇ ರೂಪಾಯಿ ಮೌಲ್ಯವು ಡಾಲರ್ ಎದುರು ಬಲವಾಗಿದ್ದರೆ, ಚಿನ್ನದ ಆಮದು ವೆಚ್ಚ ಕಡಿಮೆಯಾಗುತ್ತದೆ, ಇದು ಸ್ಥಳೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಗೆ ಕಾರಣವಾಗಬಹುದು. ವಿವಿಧ ಹಬ್ಬಗಳು, ವಿವಾಹ ಸೀಸನ್ ಮುಂತಾದ ಸಂದರ್ಭಗಳಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುತ್ತದೆ. ಆದರೆ, ಇಂತಹ ಸಂದರ್ಭಗಳಿಲ್ಲದಿದ್ದಾಗ ಅಥವಾ ಆರ್ಥಿಕ ಸ್ಥಿತಿಯಿಂದ ಬೇಡಿಕೆ ಕಡಿಮೆಯಾದಾಗ, ಬೆಲೆ ಇಳಿಯಬಹುದು. ಹೀಗೆ ನಾನಾ ಕಾರಣಗಳಿಂದ ಚಿನ್ನದ ಬೆಲೆ ಇಳಿಕೆ ಅಥವಾ ಏರಿಕೆಯಾಗಬಹುದು. ಹಾಗಾದರೆ ಇಂದು ಭಾರತದಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,270 ಆಗಿದೆ. ನಿನ್ನೆ ಇದರ ಬೆಲೆ ₹8,310 ಆಗಿದ್ದು ನಿನ್ನೆಗಿಂತ ಇಂದು, ₹40 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹82,700 ಆಗಿದೆ. ನಿನ್ನೆಯ ಬೆಲೆ ₹83,100 ಆಗಿದ್ದು ನಿನ್ನೆಗಿಂತ ಇಂದಿಗೆ ₹400 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ 27 ಸಾವಿರ ರೂ. ಆಗಿದೆ. ನಿನ್ನೆಯ ಬೆಲೆ ₹8,31,000 ರೂ. ಆಗಿದ್ದು ನಿನ್ನೆಗಿಂತ ಇಂದು ₹4,000 ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,022 ಆಗಿದೆ. ನಿನ್ನೆ ಇದರ ಬೆಲೆ ₹9,066 ಆಗಿದ್ದು ನಿನ್ನೆಗಿಂತ ಇಂದು, ₹44 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹90,220 ಆಗಿದೆ. ನಿನ್ನೆಯ ಬೆಲೆ ₹90,660 ಆಗಿದ್ದು ನಿನ್ನೆಗಿಂತ ಇಂದಿಗೆ ₹440 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 9 ಲಕ್ಷ 2 ಸಾವಿರದ 200 ರೂ. ಆಗಿದೆ. ನಿನ್ನೆಯ ಬೆಲೆ 9 ಲಕ್ಷ 6 ಸಾವಿರದ 600 ರೂ. ಆಗಿದ್ದು ನಿನ್ನೆಗಿಂತ ಇಂದು ₹4,400 ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹6,767 ಆಗಿದೆ. ನಿನ್ನೆ ಇದರ ಬೆಲೆ ₹6,799.10 ಆಗಿದ್ದು ನಿನ್ನೆಗಿಂತ ಇಂದು, 32.10 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹67,670 ಆಗಿದೆ. ನಿನ್ನೆಯ ಬೆಲೆ ₹67,991 ಆಗಿದ್ದು ನಿನ್ನೆಗಿಂತ ಇಂದಿಗೆ 321 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 6 ಲಕ್ಷ 76 ಸಾವಿರದ 700 ರೂ. ಆಗಿದೆ. ನಿನ್ನೆಯ ಬೆಲೆ 6 ಲಕ್ಷ 79 ಸಾವಿರದ 910 ರೂ. ಆಗಿದ್ದು ನಿನ್ನೆಗಿಂತ ಇಂದು 3,210 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,270 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,022 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,825 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,270 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,022 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,767 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,285 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,037 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,779 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,270 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,022 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,767 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,270 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,022 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,767 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,270 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,022 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,767 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,270 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,022 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,767 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,270 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,022 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,767 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,275 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,027 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,771 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,275 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,027 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,771 ಆಗಿದೆ.
ಭಾರತದಲ್ಲಿ ಬೆಳ್ಳಿ ಬೆಲೆ:
ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದೆ. ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ..ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹2.10 ಇಳಿಕೆ ಕಂಡುಬಂದಿದೆ. ನಿನ್ನೆ ಒಂದು ಗ್ರಾಂ ಬೆಳ್ಳಿ ಬೆಲೆ ₹105.10 ಇತ್ತು. ಇಂದು ಇದರ ಬೆಲೆ ₹103 ಆಗಿದೆ. ಹಾಗೆಯೇ 10 ಗ್ರಾಂ ಬೆಳ್ಳಿ ಬೆಲೆ ನಿನ್ನೆ ₹1,051 ಆಗಿತ್ತು, ಇಂದು ಇದರ ಬೆಲೆ ₹1,030 ಆಗಿದ್ದು ನಿನ್ನೆಗಿಂತ 21 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ನಿನ್ನೆ ₹10,510 ಆಗಿತ್ತು, ಇಂದು ಇದರ ಬೆಲೆ ₹10,300 ಆಗಿದ್ದು ನಿನ್ನೆಗಿಂತ 210 ರೂ. ಇಳಿಕೆಯಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ನಿನ್ನೆ ₹1,05,100 ಆಗಿತ್ತು ಇಂದು ಇದರ ಬೆಲೆ ₹1,03,000 ಆಗಿದೆ. ಅಂದರೆ ನಿನ್ನೆಗಿಂತ ಇದರ ಬೆಲೆಯಲ್ಲಿ ₹2,100 ಇಳಿಕೆ ಕಂಡುಬಂದಿದೆ.
ಸ್ಪಾಟ್ ಗೋಲ್ಡ್ ವಿವರ:
ಸ್ಪಾಟ್ ಗೋಲ್ಡ್ ಬೆಲೆಯು ಇಂದು (ಮಾರ್ಚ್ 21, 2025) ಪ್ರತಿ ಔನ್ಸ್‌ಗೆ $3,034.09 ವಹಿವಾಟು ನಡೆಸಿದೆ. ಹಿಂದಿನ ದಿನದೊಂದಿಗೆ ಹೋಲಿಸಿದರೆ 0.3% ಇಳಿಕೆಯನ್ನು ಸೂಚಿಸುತ್ತದೆ. ಇದು ಚಿನ್ನದ ದರವು ಹಿಂದಿನ ದಿನದ ದಾಖಲೆಯ ಗರಿಷ್ಠ ದರವಾದ $3,057.21 ರಿಂದ ಸ್ವಲ್ಪ ಇಳಿಕೆಯಾಗಿರುವುದನ್ನು ತೋರಿಸುತ್ತದೆ.
ಇನ್ನು ಅಮೇರಿಕಾದ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಸ್ಥಿರವಾಗಿರಿಸಿದ್ದು, ಮುಂದಿನ ದಿನಗಳಲ್ಲಿ ಬಡ್ಡಿದರ ಕಡಿತದ ನಿರೀಕ್ಷೆಗಳನ್ನು ಹುಟ್ಟಿಸಿದೆ, ಇದು ಚಿನ್ನದ ದರ ಏರಿಕೆಗೆ ಮತ್ತೊಂದು ಕಾರಣವಾಗಿದೆ.
More From GoodReturns

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications