Gold rate Drops: ಗಗನಕ್ಕೇರಿದ್ದ ಚಿನ್ನದ ಬೆಲೆ ಕುಸಿತ, 24K ಬಂಗಾರದಲ್ಲಿ 1,600 ಇಳಿಕೆ! ಹಾಗಾದ್ರೆ 22K, 18K ಬೆಲೆ ಎಷ್ಟು..?

ಇಂದಿನ ಚಿನ್ನದ ಬೆಲೆ: ಕಳೆದ ವಾರ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯನ್ನೇ ನೋಡಿದ್ದ ಜನರು, ಇಂದು ನಿಟ್ಟುಸಿರು ಬಿಡಬಹುದು. ಏಕೆಂದರೆ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯಾದ ಇಂದು, ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ಕಳೆದ ಕೆಲ ದಿನಗಳಲ್ಲಿ ಹಳದಿ ಲೋಹವು ತನ್ನ ಗರಿಷ್ಠ ಬೆಲೆಗಳನ್ನು ತಲುಪಿದರೂ, ಇಂದು ಅದರ ಬೆಲೆ ಇಳಿಕೆಯಾಗಿದ್ದು, ಇದು ದೇಶಾದ್ಯಾಂತ ಗಮನ ಸೆಳೆದಿದೆ. ಈ ಸಮಯದಲ್ಲಿ ದೇಶಾದ್ಯಾಂತ ಹಲವು ಕಡೆಗಳು ಹೊಸ ವರ್ಷದ ಹಬ್ಬಗಳನ್ನು ಆಚರಿಸುತ್ತಿರುವುದರಿಂದ, ಇದು ಚಿನ್ನ ಖರೀದಿಸುವ ನಿರ್ಧಾರವನ್ನು ಪ್ರಚೋದಿಸಬಹುದಾಗಿದೆ.

Gold rate Drops: ಗಗನಕ್ಕೇರಿದ ಚಿನ್ನದ ಬೆಲೆ ಕುಸಿತ..!

ಭಾರತದ ವಿವಿಧ ಭಾಗಗಳಲ್ಲ..ಅಂದರೆ ವಿಶೇಷವಾಗಿ ಉತ್ತರದಲ್ಲಿ ಪೊಯಿಲಾ ಬೈಸಾಖ್, ಬಿಶುವಾ, ಮತ್ತು ದಕ್ಷಿಣದಲ್ಲಿ ವಿಷು ಮತ್ತು ತಮಿಳು ಹೊಸ ವರ್ಷ ಹಬ್ಬಗಳು ನಡೆಯುತ್ತಿವೆ. ಈ ಹಬ್ಬಗಳ ಸಮಯದಲ್ಲಿ ಚಿನ್ನ ಖರೀದಿಸುವುದು ಉತ್ತಮ ಪ್ರಯುಕ್ತ ಎಂದು ಜನರು ನಂಬುತ್ತಾರೆ. ಹೀಗಾಗಿ, ಈ ಸಮಯದಲ್ಲಿ ಚಿನ್ನದ ಬೆಲೆ ಕುಸಿತವು ಹಬ್ಬದ ಪ್ರಯೋಜನಕ್ಕಾಗಿ ಚಿನ್ನವನ್ನು ಖರೀದಿಸಲು ಇಚ್ಛಿಸುವವರಿಗೆ ಉತ್ತಮ ಅವಕಾಶವಿರಬಹುದು.

ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ.

ಭಾರತದಲ್ಲಿ ಚಿನ್ನದ ಬೆಲೆ:

22 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,755 ಆಗಿದೆ. ನಿನ್ನೆ ಇದರ ಬೆಲೆ ₹8,770 ಆಗಿದ್ದು ನಿನ್ನೆಗಿಂತ ಇಂದು, ₹15 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹87,550 ಆಗಿದೆ. ನಿನ್ನೆಯ ಬೆಲೆ ₹87,700 ಆಗಿದ್ದು ನಿನ್ನೆಗಿಂತ ಇಂದಿಗೆ ₹150 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ75 ಸಾವಿರದ 500 ರೂ. ಆಗಿದೆ. ನಿನ್ನೆಯ ಬೆಲೆ ₹8,77,000 ರೂ. ಆಗಿದ್ದು ನಿನ್ನೆಗಿಂತ ಇಂದು ₹1,500ಇಳಿಕೆಯಾಗಿದೆ.


24 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,551 ಆಗಿದೆ. ನಿನ್ನೆ ಇದರ ಬೆಲೆ ₹9,567 ಆಗಿದ್ದು ನಿನ್ನೆಗಿಂತ ಇಂದು, ₹16 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹95,510ಆಗಿದೆ. ನಿನ್ನೆಯ ಬೆಲೆ ₹95,670 ಆಗಿದ್ದು ನಿನ್ನೆಗಿಂತ ಇಂದಿಗೆ ₹160 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 9ಲಕ್ಷ 55 ಸಾವಿರದ 100 ರೂ. ಆಗಿದೆ. ನಿನ್ನೆಯ ಬೆಲೆ 9 ಲಕ್ಷ 56 ಸಾವಿರದ 700 ರೂ. ಆಗಿದ್ದು ನಿನ್ನೆಗಿಂತ ಇಂದು ₹1,600ಇಳಿಕೆಯಾಗಿದೆ.

18 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,164 ಆಗಿದೆ. ನಿನ್ನೆ ಇದರ ಬೆಲೆ ₹7,176 ಆಗಿದ್ದು ನಿನ್ನೆಗಿಂತ ಇಂದು, 12ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹71,640 ಆಗಿದೆ. ನಿನ್ನೆಯ ಬೆಲೆ ₹71,760 ಆಗಿದ್ದು ನಿನ್ನೆಗಿಂತ ಇಂದಿಗೆ 120 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 7ಲಕ್ಷ 16ಸಾವಿರದ 400ರೂ. ಆಗಿದೆ. ನಿನ್ನೆಯ ಬೆಲೆ 7ಲಕ್ಷ 17ಸಾವಿರದ 600 ರೂ. ಆಗಿದ್ದು ನಿನ್ನೆಗಿಂತ ಇಂದು 1,200 ರೂ. ಇಳಿಕೆಯಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,250 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,566 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,551ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,551ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,551ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,551ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹₹9,551ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,760 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,556 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,168 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,760 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,556 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,168 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ದರ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಬೆಳ್ಳಿ ಬೆಲೆಯೂ ಹೆಚ್ಚಾಗಿ ಇಳಿಕೆಯಾಗಿದೆ. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆ ₹99.90ಇದೆ. ನಿನ್ನೆ ಈ ಬೆಲೆ ₹100 ಆಗಿದ್ದು ಇಂದಿಗೆ ₹0.10 ಕಡಿಮೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹999 ಇದೆ. ನಿನ್ನೆ ಈ ಬೆಲೆ ₹1,000 ಆಗಿದ್ದು ಇಂದಿಗೆ ₹1 ಕಡಿಮೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ₹9,300 ಇದೆ. ನಿನ್ನೆ ಈ ಬೆಲೆ ₹9,400ಆಗಿದ್ದು ಇಂದಿಗೆ ₹100ಕಡಿಮೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆಯು ₹99,900 ಆಗಿದೆ. ನಿನ್ನೆ ಈ ಬೆಲೆ ₹1,00,000 ಆಗಿದ್ದು ಇಂದಿಗೆ ₹100 ಕಡಿಮೆಯಾಗಿದೆ.

ಸ್ಪಾಟ್ ಗೋಲ್ಡ್ ವಿವರ:

ಇಂದು (ಏಪ್ರಿಲ್ 14) ಚಿನ್ನದ ಸ್ಪಾಟ್ ಬೆಲೆ ತನ್ನ ದಾಖಲೆಯ ಗರಿಷ್ಠ ಮಟ್ಟದಿಂದ ಸ್ವಲ್ಪ ಕುಸಿತವನ್ನು ಕಂಡಿದೆ. ಚಿನ್ನವು ಪ್ರತಿ ಔನ್ಸ್‌ಗೆ $3,245.42 ರ ಸೂಚ್ಯಂಕವನ್ನು ತಲುಪಿದೆ, ಅದರ ಬೆಲೆ 0.2% ಇಳಿಕೆಯಾಗಿದೆ ಮತ್ತು ಔನ್ಸ್‌ಗೆ $3,230.79 ಕ್ಕೆ ಸ್ಥಿರವಾಗಿದೆ. ಈ ಸಮಯದಲ್ಲಿ ಚಿನ್ನದ ಬೆಲೆ ಕುಸಿತವು ಕೆಲವು ಮಟ್ಟದಲ್ಲಿ ನೋಡುವುದಿಲ್ಲ.

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+