ಚಿನ್ನ ಕೊಳ್ಳುವ ಆಸೆ ಹೊತ್ತಿರುವ ಮಹಿಳೆಯರಿಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಅದೇನೆಂದರೆ ಅಕ್ಷಯ ತೃತೀಯ ಮುಗಿದ ಬಳಿಕ ಚಿನ್ನದ ಬೆಲೆ ಇಳಿಕೆ ಮುಂದುವರೆದಿದೆ. ನಿನ್ನೆ ಭರ್ಜರಿ ಕುಸಿದಿದ್ದ ಚಿನ್ನದ ಬೆಲೆ ಇಂದು ಕೂಡ ಇಳಿಕೆಯಾಗಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಸಿಕ್ಕಿದೆ. ಭಾರಿ ಪ್ರಮಾಣದಲ್ಲಿ ಇಳಿಕೆಯಾಗದಿದ್ದರೂ ಏರಿಕೆಯಾಗಿಲ್ಲ ಎಂಬ ಸಮಾಧಾನವಂತೂ ಪಡಬಹುದು. ಏಕೆಂದರೆ ಚಿನ್ನದ ಬೆಲೆ ಏರಿಕೆಯಾದರೆ ಗಗನ ನೋಡುತ್ತದೆ. ಇಳಿಕೆಯಾದರೆ ಕೊಂಚವೇ ಪ್ರಮಾಣದಲ್ಲಿ ಇಳಿಕೆಯಾಗುತ್ತದೆ. ಆದರೆ ನಿನ್ನೆ ಮಾತ್ರ ದಾಖಲೆಯ ಇಳಿಕೆ ನೋಡಿರುವ ಚಿನ್ನ, ಇಂದು ಕೊಂಚ ಬೆಲೆಯಲ್ಲಿ ಇಳಿಕೆಯಾದರೂ ನಿಭಾಯಿಸಬಹುದಂತಾಗಿದೆ. ಏಕೆಂದರೆ ಭಾರತೀಯರು ಅತಿ ಹೆಚ್ಚು ನಂಬಿಕೆಯಿಂದ ಮಾಡುವ ಹೂಡಿಕೆ ಚಿನ್ನವೇ ಆಗಿರುತ್ತದೆ. ಹೀಗಾಗಿ ಭಾರತದಲ್ಲಿ ಚಿನ್ನಕ್ಕೆ ಹೆಚ್ಚು ಡಿಮ್ಯಾಂಡ್ ಇದೆ.

ಹೌದು, ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವೆಂದರೆ ಭಾರತೀಯರಿಗೆ ಅಚ್ಚು ಮೆಚ್ಚು. ಒಂದು ಹಂತದಲ್ಲಿ ದೊಡ್ಡ ಮಟ್ಟದ ಸಂಪತ್ತು ಎಂತಲೂ ಹೇಳಬಹುದು. ದೊಡ್ಡ ಮಟ್ಟದ ಹೂಡಿಕೆ ಸಾಧನವಾಗಿರುವ ಚಿನ್ನ, ಭಾರತದಲ್ಲಿ ಪ್ರತಿಷ್ಠೆಯ ಸಂಕೇತವೂ ಹೌದು. ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ. ಮೊದಲು ಚಿನ್ನದ ಬೆಲೆಯಲ್ಲಿನ ಬದಲಾವಣೆ ಬಗ್ಗೆ ತಿಳಿದು, ನಂತರ ಈ ಏರಿಳಿತಗಳಿಗೆ ಕಾರಣ ಏನೆಂದು ಓದಿರಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,755 ಆಗಿದೆ. ನಿನ್ನೆ ಇದರ ಬೆಲೆ ₹8,775 ಆಗಿದ್ದು ನಿನ್ನೆಗಿಂತ ಇಂದು, ₹5 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹87,550 ಆಗಿದೆ. ನಿನ್ನೆಯ ಬೆಲೆ ₹87,750 ಆಗಿದ್ದು ನಿನ್ನೆಗಿಂತ ಇಂದಿಗೆ ₹200 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹8,75,500 ರೂ. ಆಗಿದೆ. ನಿನ್ನೆಯ ಬೆಲೆ ₹8,77,500 ಆಗಿದ್ದು ನಿನ್ನೆಗಿಂತ ಇಂದು ₹2,000 ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,551 ಆಗಿದೆ. ನಿನ್ನೆ ಇದರ ಬೆಲೆ ₹9,573 ಆಗಿದ್ದು ನಿನ್ನೆಗಿಂತ ಇಂದು, ₹22 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹95,510 ಆಗಿದೆ. ನಿನ್ನೆಯ ಬೆಲೆ ₹95,730 ಆಗಿದ್ದು ನಿನ್ನೆಗಿಂತ ಇಂದಿಗೆ ₹220 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,55,100 ಆಗಿದೆ. ನಿನ್ನೆಯ ಬೆಲೆ ₹9,57,300 ಆಗಿದ್ದು ನಿನ್ನೆಗಿಂತ ಇಂದು ₹2,200 ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,164 ಆಗಿದೆ. ನಿನ್ನೆ ಇದರ ಬೆಲೆ ₹7,180 ಆಗಿದ್ದು ನಿನ್ನೆಗಿಂತ ಇಂದು, 16 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹71,640 ಆಗಿದೆ. ನಿನ್ನೆಯ ಬೆಲೆ ₹71,800 ಆಗಿದ್ದು ನಿನ್ನೆಗಿಂತ ಇಂದಿಗೆ 160 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹7,16,400 ರೂ. ಆಗಿದೆ. ನಿನ್ನೆಯ ಬೆಲೆ ₹7,18,000 ಆಗಿದ್ದು ನಿನ್ನೆಗಿಂತ ಇಂದು 1,600 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ 7,240 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,566 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,566 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,164 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,760 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,556 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,168 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,760 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,556 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,168 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇಂದು ಬೆಳ್ಳಿ ಬೆಲೆಯಲ್ಲಿ ಮಾತ್ರ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆಯಲ್ಲಿ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ನಿನ್ನೆ ಒಂದು ಗ್ರಾಂ ಬೆಳ್ಳಿ ಬೆಲೆ ₹98 ಇತ್ತು. ಹತ್ತು ಗ್ರಾಂ ಬೆಳ್ಳಿ ಬೆಲೆ ₹980 ಆಗಿತ್ತು ನೂರು ಗ್ರಾಂ ಬೆಳ್ಳಿ ಬೆಲೆ ನಿನ್ನೆ ₹9,800 ಆಗಿತ್ತು. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹98,000 ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಮೇ 2ರಂದು ಸ್ಪಾಟ್ ಗೋಲ್ಡ್ ಬೆಲೆಯಲ್ಲಿ, 0.5% ರಷ್ಟು ಏರಿಕೆಯಾಗಿದೆ.. ಹಾಗೆಯೇ ಇದು ಇಂದು ಪ್ರತಿ ಔನ್ಸ್‌ಗೆ $3,256.51ರಷ್ಟು ವಹಿವಾಟು ನಡೆಸಿದೆ. ಅದರಂತೆಯೇ ಇಂದು ಅಮೆರಿಕದ ಫ್ಯೂಚರ್ ಗೋಲ್ಡ್ ಬೆಲೆ ಕೂಡ 1.3% ಏರಿಕೆ ಕಂಡು, ಪ್ರತಿ ಔನ್ಸ್‌ಗೆ $3,265.10 ಆಗಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications