Gold Rate Today: ದಿಢೀರ್ 6000​ ಇಳಿದ 100 ಗ್ರಾಂ ಅಪರಂಜಿ ಚಿನ್ನದ ಬೆಲೆ! ಬೆಳ್ಳಿಯೂ ಅಗ್ಗ..ಖರೀದಿಗೆ ಇದೇ ಬೆಸ್ಟ್ ಟೈಮ್‌

ಬಂಗಾರ ಪ್ರಿಯರ ಮೊಗದಲ್ಲಿ ಮಂದಹಾಸ ತರಿಸಿದ ಬಂಗಾರದ ಬೆಲೆ. ಹೌದು, ಅಂಬರದತ್ತ ಏರಿಕೆಯಾಗಿದ ಚಿನ್ನದ ಬೆಲೆಗಳು ಇಂದು ದಿಢೀರ್ ಇಳಿಯಾಗಿವೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಬಂಗಾರ ಬೆಲೆಗಳು ಸತತವಾಗಿ ಏರಿಕೆಯಾಗಿದ್ದವು ಆದರೆ ಇಂದು ಇಳಿಮುಖಗೊಂಡಿದೆ.ಆಭರಣ ಪ್ರಿಯರಿಗೆ ಸಮಾಧಾನ ತಂದು ಕೊಟ್ಟಿದೆ. ಬೆಲೆ ಇಳಿಕೆ ಮಹಿಳೆಯರ ಸಂತಸವನ್ನು ದುಪ್ಪಟ್ಟು ಮಾಡಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಇಳಿಕೆಯಾಗಿದೆ. ಹಾಗಿದ್ರೆ ಜೂನ್‌ 20 ರಂದು ಶುಭ ಶುಕ್ರವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಕುಸಿತಗೊಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್‌ ಚಿನ್ನ 92,100 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,00,480 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 600 ರೂ. ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 6,000 ರೂ,ಗಳ ಕುಸಿತವನ್ನು ಕಂಡಿದೆ.

Gold Rate: ದಿಢೀರ್ 6000​ ಇಳಿದ 100 ಗ್ರಾಂ ಅಪರಂಜಿ ಚಿನ್ನದ ಬೆಲೆ!

ಜೂನ್‌ 20 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ ಒಂದು ಗ್ರಾಂಗೆ 9,210 ರೂ.ಗಳು ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ92,100 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 550 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 5,500 ರೂ.ಗಳಷ್ಟ ಇಳಿಕೆಯಾಗಿ 9,21,000 ರೂ.ಗಳು ತಲುಪಿದೆ.

24 ಕ್ಯಾರೆಟ್‌ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 10,048 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,00,480 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 600 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ 10,04,800 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 6000 ರೂ.ಗಳ ಇಳಿಕೆ ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನ ಸಹ ಇಂದು ಇಳಿಕೆ ಕಂಡಿದೆ. 1ಗ್ರಾಂ 7,536 ರೂ.ಇದೆ. 18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 75,360
ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 7,53,600 ರೂ ಇದೆ. ಇಂದು ಚಿನ್ನದ ಬೆಲೆ ಇಳಿಕೆ ಕಂಡಿದೆ.

ಜೂನ್‌ 20 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,10,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಎರಡು ಸಾವಿರ ರೂಪಾಯಿಗಳ ಕುಸಿತ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 110 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,100 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,000 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಗಳು ಕುಸಿತಗೊಂಡಿವೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ ತಿಂಗಳಲ್ಲಿ ಏರಿಳಿತವನ್ನು ಕಂಡಿದೆ. ಜೂನ್‌ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ. 1,2,3,4ರಂದು ಚಿನ್ನದ ಬೆಲೆಗಳು ಏರಿಕೆ ಕಂಡಿವೆ. ತಿಂಗಳ ಮೊದಲ ಶನಿವಾರ ಭಾನುವಾರ ಯಥಾಸ್ಥಿತಿಯಲ್ಲಿ ಚಿನ್ನ ಇತ್ತು. ಜೂನ್‌ ತಿಂಗಳ 2ನೇ ವಾರದ ಮೊದಲು ದಿನ ಇರಿಳಿತ ಕಂಡ ಚಿನ್ನ ಇಂದು ಇಳಿಕೆಯತ್ತ ಸಾಗಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 9,210 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ10,048 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,536 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,210ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,048 ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ಇಸ್ರೇಲ್‌-ಇರಾನ್‌ ಪರಮಾಣು ದಾಳಿ ಇದ್ದರೂ ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆಗಳು ಇನ್ನೂ ಏರಿಕೆಯಾಗುತ್ತಲೇ ಇದ್ದ ಚಿನ್ನ ಇಮದು ಇಳಿಕೆಯಾಗಿದೆ. ರಾಯಿಟರ್ಸ್ ವರದಿಯ ಪ್ರಕಾರ ಸ್ಪಾಟ್ ಚಿನ್ನವು ಇಂದು ಶೇ. 0.5 ಇಳಿಕೆಯಾಗಿದೆ. ಅಂದರೆ ಇದು ಇಂದು ಪ್ರತಿ ಔನ್ಸ್‌ಗೆ $3,355.49ಕ್ಕೆ ವಹಿವಾಟುವನ್ನು ತಲುಪಿದೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

ಚಿನ್ನ ಬೆಲೆ ಏರಿಕೆಗೆ ಕಾರಣ..?

ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಇಸ್ರೇಲ್ ಇರಾನ್‌ನ ಪರಮಾಣು ಮತ್ತು ಮಿಲಿಟರಿ ನಾಯಕತ್ವದ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ ಚಿನ್ನದ ಜೊತೆಗೆ, ಕಚ್ಚಾ ತೈಲ ಬೆಲೆಗಳು ಸೋಮವಾರ ಏರಿಕೆಯನ್ನು ಕಂಡಿವೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+