India Gold Rate Drops:ಅಬ್ಬಬ್ಬಾ ಏನಿದು? ಚಿನ್ನದ ಬೆಲೆಯಲ್ಲಿ ಇಷ್ಟೊಂದು ಇಳಿಕೆ..! 24K ಗೋಲ್ಡ್‌ನಲ್ಲಿ ₹21,800 ಕುಸಿತ..!

ಮೇ 1, ಭಾರತದಲ್ಲಿ ಚಿನ್ನದ ಬೆಲೆ: ಭಾರತದಲ್ಲಿ ಇಂದು ಚಿನ್ನಪ್ರಿಯರಿಗೆ ಭರ್ಜರಿ ಖುಷಿಸುದ್ದಿ ಸಿಕ್ಕಿದೆ. ಅದೇನೆಂದರೆ ಇಂದು ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಅಕ್ಷಯ ತೃತೀಯ ಮಾರನೇ ದಿನವಾದ ಇಂದು, ನಿನ್ನೆಗಿಂತ ಹೆಚ್ಚಾಗಿ ಇಳಿಕೆಯಾಗಿದೆ. ಚಿನ್ನದ ಬೆಲೆ ಸದಾ ಹತ್ತು, ಇಪ್ಪತ್ತು, ಐವತ್ತು ರೂಗಳಲ್ಲಿ ಕುಸಿತವಾಗುತ್ತಿತ್ತು. ಆದರೆ ಇಂದು ಚಿನ್ನಪ್ರಿಯರು ಹುಬ್ಬೇರಿಸಿ ಆಶ್ಚರ್ಯ ಪಡುವಷ್ಟು, ಚಿನ್ನದ ಬೆಲೆ ಕುಸಿದಿದೆ. ಇತ್ತೀಚೆಗೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನ ಹಿಡಿತವಿಲ್ಲದಷ್ಟು ಏರಿಕೆ ನೋಡುತ್ತಿದೆ. ಏರಿಳಿತಗಳ ಮಧ್ಯೆ ಗ್ರಾಹಕರು ಚಿನ್ನ ಕೊಳ್ಳುವ ಆಸೆಯನ್ನೇ ಬಿಟ್ಟುಬಿಡುವಂತಾಗುತ್ತಿದೆ. ಇತ್ತೀಚೆಗೆ ಆಗುತ್ತಿರುವ ಜಾಗತಿಕ ಬೆಳವಣಿಗೆಗಳಿಂದ, ಚಿನ್ನಪ್ರಿಯರಿಗೆ ಕೊಂಚ ಅಸಮಾಧಾನ ನೀಡುವ ಸುದ್ದಿ ಸಿಗುತ್ತಿದೆ. ಆದರೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಸುಡುವ ಭೂಮಿ ಮೇಲೆ ನೀರೆರಚಿದಂತಾಗಿದೆ.

ಭಾರತದಲ್ಲಿ 24K ಗೋಲ್ಡ್‌ನಲ್ಲಿ ₹21,800 ದಿಢೀರ್ ಕುಸಿತ..!

ಹೌದು, ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವೆಂದರೆ ಭಾರತೀಯರಿಗೆ ಅಚ್ಚು ಮೆಚ್ಚು. ಒಂದು ಹಂತದಲ್ಲಿ ದೊಡ್ಡ ಮಟ್ಟದ ಸಂಪತ್ತು ಎಂತಲೂ ಹೇಳಬಹುದು. ದೊಡ್ಡ ಮಟ್ಟದ ಹೂಡಿಕೆ ಸಾಧನವಾಗಿರುವ ಚಿನ್ನ, ಭಾರತದಲ್ಲಿ ಪ್ರತಿಷ್ಠೆಯ ಸಂಕೇತವೂ ಹೌದು. ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ. ಮೊದಲು ಚಿನ್ನದ ಬೆಲೆಯಲ್ಲಿನ ಬದಲಾವಣೆ ಬಗ್ಗೆ ತಿಳಿದು, ನಂತರ ಈ ಏರಿಳಿತಗಳಿಗೆ ಕಾರಣ ಏನೆಂದು ಓದಿರಿ.

ಭಾರತದಲ್ಲಿ ಇಂದಿನ ಚಿನ್ನದ ಬೆಲೆ:

22 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 8,775 ಆಗಿದೆ. ನಿನ್ನೆ ಇದರ ಬೆಲೆ 8,975 ಆಗಿದ್ದು ನಿನ್ನೆಗಿಂತ ಇಂದು, 200 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 87,750 ಆಗಿದೆ. ನಿನ್ನೆಯ ಬೆಲೆ 89,750 ಆಗಿದ್ದು ನಿನ್ನೆಗಿಂತ ಇಂದಿಗೆ 2,000 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8,77,500 ರೂ. ಆಗಿದೆ. ನಿನ್ನೆಯ ಬೆಲೆ 8,97,500 ಆಗಿದ್ದು ನಿನ್ನೆಗಿಂತ ಇಂದು 20,000 ಇಳಿಕೆಯಾಗಿದೆ.

24 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 9,573 ಆಗಿದೆ. ನಿನ್ನೆ ಇದರ ಬೆಲೆ 9,791 ಆಗಿದ್ದು ನಿನ್ನೆಗಿಂತ ಇಂದು, 218 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 95,730 ಆಗಿದೆ. ನಿನ್ನೆಯ ಬೆಲೆ 97,910 ಆಗಿದ್ದು ನಿನ್ನೆಗಿಂತ ಇಂದಿಗೆ 2,180 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 9,57,300 ಆಗಿದೆ. ನಿನ್ನೆಯ ಬೆಲೆ 9,79,100 ಆಗಿದ್ದು ನಿನ್ನೆಗಿಂತ ಇಂದು 21,800 ಇಳಿಕೆಯಾಗಿದೆ.

18 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 7,180 ಆಗಿದೆ. ನಿನ್ನೆ ಇದರ ಬೆಲೆ 7,344 ಆಗಿದ್ದು ನಿನ್ನೆಗಿಂತ ಇಂದು, 164 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 71,800 ಆಗಿದೆ. ನಿನ್ನೆಯ ಬೆಲೆ 73,440 ಆಗಿದ್ದು ನಿನ್ನೆಗಿಂತ ಇಂದಿಗೆ 1,640 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 7,18,000 ರೂ. ಆಗಿದೆ. ನಿನ್ನೆಯ ಬೆಲೆ 7,34,400 ಆಗಿದ್ದು ನಿನ್ನೆಗಿಂತ ಇಂದು 16,400 ರೂ. ಇಳಿಕೆಯಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,573 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,250 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,573 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,180 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,790 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,588 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,192 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,573 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,180 ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,573 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,180 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,573 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,180 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,573 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,180 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,573 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,180 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,780 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,578 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,184 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,780 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,578 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,184 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹98 ಆಗಿದೆ. ನಿನ್ನೆ ಈ ಬೆಲೆ ₹100.40 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹2.40 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹980 ಆಗಿದೆ. ನಿನ್ನೆ ಈ ಬೆಲೆ ₹1,004 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹24 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹9,800 ಆಗಿದೆ. ನಿನ್ನೆ ಈ ಬೆಲೆ ₹10,040 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹10,040 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹98,000 ಆಗಿದೆ. ನಿನ್ನೆ ಈ ಬೆಲೆ ₹98,000 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹2,400 ರೂ. ಇಳಿಕೆಯಾಗಿದೆ.

ಸ್ಪಾಟ್ ಗೋಲ್ಡ್ ವಿವರ:

ಮೇ 1, 2025 ರಂದು ಪ್ರಕಟವಾದ ರಾಯಿಟರ್ಸ್ ವರದಿ ಏನು ಹೇಳುತ್ತಿದೆ ಎಂದರೆ, ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್‌ಗೆ $3,228.70 ಗೆ ಇಳಿಕೆಯಾಗಿದೆ. ಅಂದರೆ ಇದು ಹಿಂದಿನ ದಿನದಿಗಿಂತ ಸುಮಾರು 1.8%ರಷ್ಟು ಕಡಿಮೆ ಆಗಿದ್ದು, ಈ ಇಳಿಕೆಗೆ ಪ್ರಮುಖ ಕಾರಣಗಳು ಅಮೆರಿಕನ್ ಡಾಲರ್‌ನ ಮೌಲ್ಯವೃದ್ಧಿ ಹಾಗೂ ಜಾಗತಿಕ ವಾಣಿಜ್ಯಯುದ್ಧದ ಆತಂಕ ತಗ್ಗಿರುವುದು.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+