ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ಇಳಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ತಿಂಗಳ ಆರಂಭದಿಂದ ಏರಿಕೆಯಾಗ್ತಾನೆ ಇದ್ದ ಚಿನ್ನದ ದರ ಸ್ವಲ್ಪ ಇಳಿಕೆಯಾಗಿತ್ತು. ಆದ್ರೆ ಮತ್ತೆ ಚಿನ್ನದ ದರ ಓಟವನ್ನ ಮುಂದುವರೆಸಿದೆ. ಮತ್ತೆ ಈ ಸುದ್ದಿ ಬೆಂಗಳೂರಿಗರನ್ನ ನಿರಾಸೆ ಮಾಡಿದೆ. ಯುಎಸ್ ಡಾಲರ್ ಬಲವರ್ಧನೆಯಿಂದಾಗಿ ಚಿನ್ನದ ಬೆಲೆಗಳು ಕೂಡ ಏರಿಕೆಯಾಗ್ತಿವೆ.
ಜನವರಿ 20 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 150 ಏರಿಕೆಯಾಗಿ 74,500ರೂ. ಆಗಿದೆ. ಮತ್ತು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 120 ರೂ. ಏರಿಕೆಯಾಗಿ 81,230 ರೂ. ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 170 ರೂ. ಏರಿಕೆಯಾಗಿ 61,000 ರೂ. ಆಗಿದೆ.

ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,500 ಏರಿಕೆಯಾಗಿ 7,45,000 ರೂ. ಆಗಿದೆ. ಮತ್ತು 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,200 ರೂ. ಏರಿಕೆಯಾಗಿ 8,12,300ರೂ. ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,700 ರೂ. ಏರಿಕೆಯಾಗಿ 6,10,000 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರಗಳು
ಇಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಕೂಡ ಸ್ಥಿರವಾಗಿದೆ. ಪ್ರಸ್ತುತ, ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ಬೆಲೆ 96.50 ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 96,500ರೂ. ಆಗಿದೆ. ಇಂದು ಬೆಳ್ಳಿ ಬೆಲೆ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.
ಭಾರತದಲ್ಲೂ ಕೂಡ ಚಿನ್ನದ ದರ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಇಂದು ಏರಿಕೆಯಾಗಿದೆ. ಜಾಗತಿಕ ಉದ್ವಿಗ್ನತೆಗಳು, ರಾಜಕೀಯ ಮತ್ತು ಆರ್ಥಿಕ ಬೆಳವಣಿಗೆಗಳು ಚಿನ್ನದ ಮೇಲೆ ಹೆಚ್ಚು ಪರಿಣಾಮವನ್ನ ಬೀರಲಿವೆ.
ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:
| ನಗರಗಳು | 24 ಕ್ಯಾರೆಟ್ | 22 ಕ್ಯಾರೆಟ್ |
| ದೆಹಲಿ | 81,380 | 74,650 |
| ಮುಂಬೈ | 81,230 | 74,500 |
| ಚೆನ್ನೈ | 81,230 | 74,500 |
| ಕೋಲ್ಕತ್ತಾ | 81,230 | 74,500 |
ಸ್ಪಾಟ್ ಚಿನ್ನದ ಭವಿಷ್ಯ
ಸ್ಪಾಟ್ ಚಿನ್ನದ ದರಗಳು ಇಂದು ಕೂಡ ಇಳಿಕೆಯಾಗಿದೆ. ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.10% ಏರಿಕೆಯಾಗಿ 2,704.71 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.03% ಏರಿಕೆಯಾಗಿ 30.36 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 940.75 ಡಾಲರ್‌ನಲ್ಲಿ ಸ್ಥಿರವಾಗಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 950.00 ಡಾಲರ್ ಸ್ಥಿರವಾಗಿದೆ.
MCX ಗೋಲ್ಡ್ ಔಟ್‌ಲುಕ್ ಮತ್ತು ಸಿಲ್ವರ್ ಔಟ್‌ಲುಕ್
ಇಂದು MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆ ಎರಡೂ ಕೂಡ ಇಳಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.14% ನಷ್ಟು ಇಳಿಕೆಯಾಗಿ 78,915. ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.11% ನಷ್ಟು ಏರಿಕೆಯಾಗಿ 91,701 ರೂಪಾಯಿ ವಹಿವಾಟು ನಡೆಸುತ್ತಿದೆ. ಈ ತಿಂಗಳು ಚಿನ್ನದ ಬೆಲೆಗಳು ಸಾಕಷ್ಟು ಏರಿಳೀತಗಳನ್ನ ಕಂಡಿವೆ. ಇದು ಹೂಡಿಕೆದಾರರಿಗೆ ಆತಂಕವನ್ನ ಸೃಷ್ಟಿ ಮಾಡಿದೆ. ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಬಡ್ಡಿ ದರಗಳು, ಸರ್ಕಾರಿ ನೀತಿಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ವರ್ಷದ ಮೊದಲ ತಿಂಗಳಿನಲ್ಲಿ ಸಾಕಷ್ಟು ಏರಿಳಿತಗಳನ್ನ ಗಮನಿಸುವಂತಾಯಿತು.


Click it and Unblock the Notifications