ಬೆಂಗಳೂರಿನಲ್ಲಿ ಚಿನ್ನದ ದರ, ಜನವರಿ 23: 22k ಮತ್ತು 24k ಚಿನ್ನದ ಬೆಲೆ ಎಷ್ಟಿದೆ? ಗಮನಿಸಿ.

ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಸ್ಥಿರವಾಗಿದೆ. ಈ ತಿಂಗಳು ಚಿನ್ನದ ಓಟ ಉತ್ತಮವಾಗಿದ್ದು, ಚಿನ್ನದ ಬೆಲೆಯಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ. ಇನ್ನು ಆಭರಣಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ. ಚಿನ್ನದ ದರ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಗ್ರಾಹಕರಿಗೆ ನಿರಾಸೆ ಉಂಟಾಗಿದೆ. ಯುಎಸ್‌ ಡಾಲರ್‌ ಬಲವರ್ಧನೆಯಿಂದಾಗಿ ರೂಪಾಯಿ ಬೆಲೆ ಇಳಿಕೆಯಾಗಿದೆ. ಈ ಹಿನ್ನೆಲೆ ಇದು ಚಿನ್ನದ ದರಗಳ ಮೇಲು ಕೂಡ ಪರಿಣಾಮ ಬೀರುತ್ತಿದೆ.

ಜನವರಿ 23 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಇಂದು 75,250 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 82,090ರೂ. ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 61,570 ರೂ. ಆಗಿದೆ.

ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಗಮನಿಸಿ.

ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 7,52,500 ರೂ. ಆಗಿದೆ. 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 8,20,900 ರೂ. ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 6,15,700 ರೂ. ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರಗಳು

ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು ಕೂಡ ಸ್ಥಿರವಾಗಿದೆ. ನಿನ್ನೆಯಂತೆಯೆ ಇಂದು ಕೂಡ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ಬೆಲೆ 96.50 ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 96,500 ರೂ. ಆಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರವಾಗಿವೆ. 22k ಮತ್ತು 24k ಚಿನ್ನದ ಬೆಲೆಗಳು ಎಷ್ಟಿವೆ ಎಂದು ತಿಳಿಯಿರಿ.

ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:

ನಗರಗಳು24 ಕ್ಯಾರೆಟ್22 ಕ್ಯಾರೆಟ್
ದೆಹಲಿ82,24075,400
ಮುಂಬೈ82,09075,250
ಚೆನ್ನೈ82,09075,250
ಕೋಲ್ಕತ್ತಾ82,09075,250

MCX ಗೋಲ್ಡ್ ಔಟ್‌ಲುಕ್ ಮತ್ತು ಸಿಲ್ವರ್‌ ಔಟ್‌ಲುಕ್

MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಇಳಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.17%ನಷ್ಟು ಇಳಿಕೆಯಾಗಿ 79,431 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.46% ನಷ್ಟು ಏರಿಕೆಯಾಗಿ 91,519 ರೂಪಾಯಿ ವಹಿವಾಟು ನಡೆಸುತ್ತಿದೆ.

ಹಳದಿ ಲೋಹಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗ್ತಿದೆ. ರಾಯಿಟರ್ಸ್‌ ವರದಿ ಪ್ರಕಾರ ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ವ್ಯಾಪಾರ ನೀತಿಗಳು ಮತ್ತು ಯುಎಸ್‌ ಡಾಲರ್‌ ಅನಿಶ್ಚಿತತೆಗಳ ನಡುವೆ ಚಿನ್ನದ ದರಗಳು ನಿನ್ನೆ ಸಾಕಷ್ಟು ಎರಿಕೆಯನ್ನ ಕಂಡಿವೆ. ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಈ ತಿಂಗಳಿನಲ್ಲಿ ಏರಿಳಿತಗಳನ್ನ ಗಮನಿಸುವಂತಾಯಿತು.

ಸ್ಪಾಟ್‌ ಚಿನ್ನದ ಭವಿಷ್ಯ

ಸ್ಪಾಟ್‌ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಇಳಿಕೆಯಾಗಿವೆ. ವರದಿ ಪ್ರಕಾರ ಸ್ಪಾಟ್‌ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.05% ಇಳಿಕೆಯಾಗಿ 2,754.14 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.03% ಇಳಿಕೆಯಾಗಿ 30.80 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್‌ ಬೆಲೆಯು ಪ್ರತಿ ಔನ್ಸ್‌ಗೆ 0.11% ಇಳಿಕೆಯಾಗಿ 950.25 ಡಾಲರ್‌ ತಲುಪಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 0.40% ಇಳಿಕೆಯಾಗಿ 986.00 ಡಾಲರ್‌ ತಲುಪಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+