ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ನಿನ್ನೆ ಸ್ಥಿರವಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಚಿನ್ನದ ಇಳಿಕೆಗಾಗಿ ಕಾಯುತ್ತಿದ್ದ ಸಿಲಿಕಾನ್ ಸಿಟಿ ಮಂದಿಗೆ ಮತ್ತೆ ಶಾಕ್ ಸಿಕ್ಕಿದೆ. ತಿಂಗಳ ಆರಂಭದಿಂದಲೂ ಚಿನ್ನದ ದರ ಉತ್ತಮ ಓಟವನ್ನ ನಡೆಸಿದೆ. ಯುಎಸ್ ಡಾಲರ್ ಬಲವರ್ಧನೆಯಿಂದಾಗಿ ಚಿನ್ನದ ದರಗಳು ಕೂಡ ಏರಿಕೆಯಾಗಿವೆ. ಹಳದಿ ಲೋಹವು ಇತ್ತೀಚೆಗೆ ಲಾಭವನ್ನ ಗಳಿಸುತ್ತಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಜನವರಿ 24 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಇಂದು 300 ಏರಿಕೆಯಾಗಿ 75,550 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 330 ರೂ. ಏರಿಕೆಯಾಗಿ 82,420 ರೂ. ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 250 ರೂ. ಏರಿಕೆಯಾಗಿ 61,820 ರೂ. ಆಗಿದೆ.

ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 3,000 ರೂ. ಏರಿಕೆಯಾಗಿ 7,55,500 ರೂ. ಆಗಿದೆ. 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 3,300 ರೂ. ಏರಿಕೆಯಾಗಿ 8,24,200 ರೂ. ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 2,500 ರೂ. ಏರಿಕೆಯಾಗಿ 6,18,200 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರಗಳು
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು ಕೂಡ ಏರಿಕೆಯಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ಬೆಲೆ ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ಬೆಲೆ 1 ರೂ. ಏರಿಕೆಯಾಗಿ 97.50ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 1,000 ರೂ. ಏರಿಕೆಯಾಗಿ 97,500 ರೂ. ಆಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆಯಾಗಿವೆ. 22k ಮತ್ತು 24k ಚಿನ್ನದ ಬೆಲೆಗಳು ಎಷ್ಟಿವೆ ಎಂದು ತಿಳಿಯಿರಿ.
ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:
| ನಗರಗಳು | 24 ಕ್ಯಾರೆಟ್ | 22 ಕ್ಯಾರೆಟ್ |
| ದೆಹಲಿ | 82,240 | 75,400 |
| ಮುಂಬೈ | 82,420 | 75,550 |
| ಚೆನ್ನೈ | 82,420 | 75,550 |
| ಕೋಲ್ಕತ್ತಾ | 82,420 | 75,550 |
MCX ಗೋಲ್ಡ್ ಔಟ್‌ಲುಕ್ ಮತ್ತು ಸಿಲ್ವರ್ ಔಟ್‌ಲುಕ್
MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.34% ನಷ್ಟು ಇಳಿಕೆಯಾಗಿ 79,900 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.88% ನಷ್ಟು ಏರಿಕೆಯಾಗಿ 91,953 ರೂಪಾಯಿ ವಹಿವಾಟು ನಡೆಸುತ್ತಿದೆ.
ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಈ ತಿಂಗಳಿನಲ್ಲಿ ಏರಿಳಿತಗಳನ್ನ ಗಮನಿಸುವಂತಾಯಿತು. ಹಳದಿ ಲೋಹಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗ್ತಿದೆ. ರಾಯಿಟರ್ಸ್ ವರದಿ ಪ್ರಕಾರ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ನೀತಿಗಳು ಮತ್ತು ಯುಎಸ್ ಡಾಲರ್ ಅನಿಶ್ಚಿತತೆಗಳ ನಡುವೆ ಚಿನ್ನದ ದರಗಳು ನಿನ್ನೆ ಸಾಕಷ್ಟು ಎರಿಕೆಯನ್ನ ಕಂಡಿವೆ.
ಸ್ಪಾಟ್ ಚಿನ್ನದ ಭವಿಷ್ಯ
ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಇಳಿಕೆಯಾಗಿವೆ. ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.03% ಇಳಿಕೆಯಾಗಿ 2,754.55 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 1.43% ಇಳಿಕೆಯಾಗಿ 30.37 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.11% ಇಳಿಕೆಯಾಗಿ 950.25 ಡಾಲರ್ ತಲುಪಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 1.26% ಏರಿಕೆಯಾಗಿ 1,002.50 ಡಾಲರ್ ತಲುಪಿದೆ.


Click it and Unblock the Notifications