ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಂದು ಸ್ಥಿರವಾಗಿದೆ. ನಿನ್ನೆ ಚಿನ್ನದ ದರ ಏರಿಕೆಯಾದ ನಂತರ ಇಂದು ಮತ್ತೆ ಚಿನ್ನದ ದರ ಸ್ಥಿರವಾಗಿದೆ. ಬಹುದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗ್ತಾನೆ ಇದ್ದು, ಇದರಿಂದಾಗಿ ಚಿಂತೆಗೀಡಾಗಿದ್ದ ಬೆಂಗಳೂರಿನ ಮಂದಿಗೆ ಇಂದು ಸ್ವಲ್ಪ ಸಮಾಧಾನ ತಂದಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಯುಎಸ್ ಡಾಲರ್ ಏರಿಕೆಯಿಂದಾಗಿ ಚಿನ್ನದ ದರಗಳಲ್ಲೂ ಕೂಡ ಸಾಕಷ್ಟು ಏರಿಳಿತಗಳನ್ನ ಕಾಣುವಂತಾಯಿತು. ಇಂದು ಚಿನ್ನದ ಬೆಲೆ ಸ್ಥಿರವಾಗಿದ್ದು, ಚಿನ್ನ ಕೊಳ್ಳಲು ಉತ್ತಮ ಗಳಿಗೆಯಾಗಿದೆ. ಇಷ್ಟಲ್ಲೇ ಜಾಗತಿಕವಾಗಿ ಕೂಡ ಚಿನ್ನದ ಬೇಡಿಕೆ ಹೆಚ್ಚಾಗ್ತಿದೆ. ಹೀಗಾಗಿ ಚಿನ್ನದ ಬೆಲೆ ಏರಿಕೆಯಾಗ್ತಿದೆ.
ಜನವರಿ 25 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಇಂದು 75,550 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 82,420 ರೂ. ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 61,820 ರೂ. ಆಗಿದೆ.

ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 7,55,500 ರೂ. ಆಗಿದೆ. 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 8,24,200 ರೂ. ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 6,18,200 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರಗಳು
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು ಕೂಡ ಇಂದು ಸ್ಥಿರವಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಸ್ಥಿರವಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ಬೆಲೆ 97.50ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 97,500 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಾವಣೆಯಾಗಿಲ್ಲ.
ಭಾರತದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸ್ಥಿರವಾಗಿದೆ. 22k ಮತ್ತು 24k ಚಿನ್ನದ ಬೆಲೆಗಳು ಎಷ್ಟಿವೆ ಎಂದು ಇಲ್ಲಿ ತಿಳಿಯಿರಿ.
ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:
| ನಗರಗಳು | 24 ಕ್ಯಾರೆಟ್ | 22 ಕ್ಯಾರೆಟ್ |
| ದೆಹಲಿ | 82,240 | 75,400 |
| ಮುಂಬೈ | 82,420 | 75,550 |
| ಚೆನ್ನೈ | 82,420 | 75,550 |
| ಕೋಲ್ಕತ್ತಾ | 82,420 | 75,550 |
MCX ಗೋಲ್ಡ್ ಔಟ್‌ಲುಕ್ ಮತ್ತು ಸಿಲ್ವರ್ ಔಟ್‌ಲುಕ್
MCX ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ ಹಾಗು ಬೆಳ್ಳಿ ಬೆಲೆಗಳು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.03% ನಷ್ಟು ಇಳಿಕೆಯಾಗಿ 80,002 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.06% ನಷ್ಟು ಏರಿಕೆಯಾಗಿ 91,658 ರೂಪಾಯಿ ವಹಿವಾಟು ನಡೆಸುತ್ತಿದೆ. ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಈ ತಿಂಗಳಿನಲ್ಲಿ ಏರಿಳಿತಗಳನ್ನ ಗಮನಿಸುವಂತಾಯಿತು. ಹಳದಿ ಲೋಹಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗ್ತಿದೆ.
ಸ್ಪಾಟ್ ಚಿನ್ನದ ಭವಿಷ್ಯ
ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಇಳಿಕೆಯಾಗಿವೆ. ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 2,771.39 ಡಾಲರ್‌ನಲ್ಲಿ ಸ್ಥಿರವಾಗಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.72% ಇಳಿಕೆಯಾಗಿ 30.61 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.37% ಇಳಿಕೆಯಾಗಿ 946.75 ಡಾಲರ್ ತಲುಪಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 1.05% ಇಳಿಕೆಯಾಗಿ 985.00 ಡಾಲರ್ ತಲುಪಿದೆ. ರಾಯಿಟರ್ಸ್ ವರದಿ ಪ್ರಕಾರ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ನೀತಿಗಳು ಮತ್ತು ಯುಎಸ್ ಡಾಲರ್ ಅನಿಶ್ಚಿತತೆಗಳ ನಡುವೆ ಚಿನ್ನದ ದರಗಳು ನಿನ್ನೆ ಸಾಕಷ್ಟು ಎರಿಕೆಯನ್ನ ಕಂಡಿವೆ.


Click it and Unblock the Notifications