ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಬಾರಿ ದುಬಾರಿಯಾಗಿದೆ. ನಿನ್ನೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಕೂಡ ಗಗನಕ್ಕೇರಿದೆ. ಇಷ್ಟು ದಿನಗಳಲ್ಲಿ ಇಂದು ಹೆಚ್ಚು ಪ್ರಮಾಣದಲ್ಲಿ ಚಿನ್ನದ ದರ ಏರಿಕೆಯಾಗಿದೆ. ಬೆಂಗಳೂರಿಗರಿಗೆ ಮತ್ತೆ ನಿರಾಸೆಯಾಗಿದೆ. ಬಂಗಾರ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಸಿಕ್ಕಿದೆ. ಅಂತರಾಷ್ಟ್ರೀಯ ಮಾರಿಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗ್ತಿದೆ. ಈ ಮಧ್ಯೆ ಭಾರತದಲ್ಲಿ ಚಿನ್ನದ ದರ ಗರಿಷ್ಠ ಮಟ್ಟವನ್ನ ತಲುಪಿದೆ. ಯುಎಸ್ ಡಾಲರ್ ಬಲವರ್ಧನೆಯಿಂದಾಗಿ ಚಿನ್ನದ ಬೆಲೆಗಳು ಕೂಡ ಏರಿಕೆಯಾಗ್ತಿವೆ. ಜಾಗತಿಕ ಅನಿಶ್ಚಿತತೆಗಳು ಚಿನ್ನದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿವೆ.ಜನವರಿ 31 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಇಂದು 1,200 ಏರಿಕೆಯಾಗಿ 77,300 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,310ರೂ. ಏರಿಕೆಯಾಗಿ 84,330ರೂ. ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 980 ರೂ. ಏರಿಕೆಯಾಗಿ 63,250 ರೂ. ಆಗಿದೆ.
ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲ 12,000 ರೂ. ಏರಿಕೆಯಾಗಿ 7,73,000 ರೂ. ಆಗಿದೆ. 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 13,100ರೂ. ಏರಿಕೆಯಾಗಿ 8,43,300 ರೂ. ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 9,800ರೂ. ಏರಿಕೆಯಾಗಿ 6,32,500 ರೂ. ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರಗಳು
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ಬೆಲೆ 1 ರೂ. ಏರಿಕೆಯಾಗಿ 99.50ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 1,000 ರೂ. ಏರಿಕೆಯಾಗಿ 99,500ರೂ. ಆಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರವಾಗಿದೆ . 22k ಮತ್ತು 24k ಚಿನ್ನದ ಬೆಲೆಗಳು ಎಷ್ಟಿವೆ ಎಂದು ತಿಳಿಯಿರಿ.
ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:
| ನಗರಗಳು | 24ಕ್ಯಾರೆಟ್ | 22ಕ್ಯಾರೆಟ್ |
| ದೆಹಲಿ | 84,480 | 77,450 |
| ಮುಂಬೈ | 84,330 | 77,300 |
| ಚೆನ್ನೈ | 84,330 | 77,300 |
| ಕೋಲ್ಕತ್ತಾ | 84,330 | 77,300 |
MCX ಗೋಲ್ಡ್ ಔಟ್‌ಲುಕ್ ಮತ್ತು ಸಿಲ್ವರ್ ಔಟ್‌ಲುಕ್
MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.17% ನಷ್ಟು ಏರಿಕೆಯಾಗಿ 81,858 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.11% ನಷ್ಟು ಏರಿಕೆಯಾಗಿ 93,550 ರೂಪಾಯಿ ವಹಿವಾಟು ನಡೆಸುತ್ತಿದೆ.
ಸ್ಪಾಟ್ ಚಿನ್ನದ ಭವಿಷ್ಯ
ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಏರಿಕೆಯಾಗಿದೆ. ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 2,795.45 ಡಾಲರ್‌ನಲ್ಲಿ ಸ್ಥಿರವಾಗಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.70% ಇಳಿಕೆಯಾಗಿ 31.43 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.05% ಏರಿಕೆಯಾಗಿ 969.75 ಡಾಲರ್ ತಲುಪಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 1.28% ಏರಿಕೆಯಾಗಿ 990.00 ಡಾಲರ್ ತಲುಪಿದೆ. ನಿರಂತರವಾಗಿ ಬದಲಾಗುತ್ತಿರುವ ಮಾರುಕಟ್ಟೆ ಪರಿಸ್ಥಿತಿಗಳಿಂದಾಗಿ ವ್ಯಪಾರಿಗಳು, ಹೂಡಿಕೆದಾರರರು ಚಿನ್ನದ ಏರಿಳಿತದ ಕುರಿತು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಇನ್ನು ಭಾರತದಲ್ಲಿ ಚಿನ್ನದ ದರಗಳು ತೆರಿಗೆ, ಆಮದು ಸುಂಕಗಳಲ್ಲಿನ ಏರಿಳಿತದಿಂದಾಗಿ ಭಾರತದಲ್ಲಿ ಚಿನ್ನದ ದರಗಳು ಹೆಚ್ಚಿನ ಏರಿಳಿತಗಳನ್ನ ಅನುಭವಿಸುತ್ತಿವೆ.


Click it and Unblock the Notifications