Bengaluru Gold Rate Today: ಅಯ್ಯೋ ಶಿವನೇ! ಮತ್ತೆ ಅದೇ ಏರಿಕೆ ಹೌದು,ಸತತವಾಗಿ ಇಳಿಕೆ ಕಂಡಿದ ಚಿನ್ನದ ಬೆಲೆಗಳು(Gold Rate) ದಿಢೀರ್ ಏರಿಕೆಯಾಗಿವೆ. ಇಂದು ಚಿನ್ನದ ಬೆಲೆ ಭಾರೀ ಏರಿಕೆಯಾಗಿ ಆಭರಣ ಪ್ರಿಯರಿಗೆ ಬಿಗ್ ಶಾಕ್‌ನ್ನು ಚಿನ್ನದ ಮಾರುಕಟ್ಟೆ ನೀಡಿದೆ. ಚಿನ್ನ ತನ್ನ ದಾಖಲೆಯ ಓಟವನ್ನು ಮತ್ತೆ ಮುಂದುವರಿಸಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಜೇಬಿಗೆ ಕತ್ತರಿ ಬಿದ್ದಿದೆ. ಇತ್ತ ಬೆಳ್ಳಿ(silver Rate Today) ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಕೊಂಡಿದೆ. ಬೆಳ್ಳಿ ಕೊಳ್ಳಲು ಸಕಾಲವೆಂದೇ ಹೇಳಬಹುದು. ಹಾಗಿದ್ರೆ ಮೇ.16 ರಂದು ಶುಕ್ರವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್(Bengaluru Gold Rate Today)ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನ ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ87,200 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 95,130 ರೂ.ಇದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 12 ಸಾವಿರ ರೂ ಗಳಷ್ಟು ಏರಿಕೆಯಾಗಿದೆ.

ಮೇ.16 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,720 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ87,200 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 1,100 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 11,000 ರೂ.ಗಳಷ್ಟು ಏರಿಕೆಯಾಗಿ 8,72,000 ರೂ.ಗಳು ತಲುಪಿದೆ
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,513 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 95,130 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 1,200 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,51,300 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 12,000 ರೂ.ಗಳಷ್ಟು ಏರಿಕೆ ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನದ ಏರಿಕೆ ಕಂಡಿದೆ.1ಗ್ರಾಂ 7,135 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ71,350 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ7,13,500 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಮೇ.16 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಸ್ಥಿರವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 97,000 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 97 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 970 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,700ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಗಳು ಯಾವುದೇ ಬದಲಾವಣೆಯನ್ನು ಕಂಡಿಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ.5,6,7,8 ರಂದು ಚಿನ್ನದ ಬೆಲೆ ಏರಿಕೆಯಾಗಿದೆ. ಇನ್ನೂ ಮೇ. 9,12,14ರಂದು ಇಳಿಕೆಯಾಗಿದೆ. ಮೇ.11ರಂದು ಸ್ಥಿರವಾಗಿದೆ.ಇಂದು ಚಿನ್ನದ ಬೆಲೆ ಕುಸಿತ ಕಂಡಿದೆ.ನಿನ್ನೆ ಇಳಿಕೆಯಾಗಿದ್ದ ಚಿನ್ನ ಇಂದು ದಿಢೀರ್ ಏರಿಕೆಯಾಗಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,720 ರೂ. ಮತ್ತು1 ಗ್ರಾಂ 24 ಕ್ಯಾರೆಟ್ ಚಿನ್ನ, 9,513 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,135 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,720 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,513 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,135 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,720 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,513 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,135 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,720 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,513 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,135 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,720 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,513 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,135 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,720 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,513 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇತ್ತೀಚಿನ ರಾಯಿಟರ್ಸ್ ವರದಿಯ ಪ್ರಕಾರ, GMT 04:29 ರ ಹೊತ್ತಿಗೆ ಸ್ಪಾಟ್ ಚಿನ್ನದ ಬೆಲೆಗಳು ಔನ್ಸ್‌ಗೆ ಶೇ.0.8 ರಷ್ಟು ಇಳಿದು USD 3,213.56 ಕ್ಕೆ ತಲುಪಿದೆ, ಆದರೆ ಯುಎಸ್ ಚಿನ್ನದ ಭವಿಷ್ಯವು ಶೇ. 0.3 ರಷ್ಟು ಕುಸಿದು USD 3,217.20 ಕ್ಕೆ ತಲುಪಿದೆ. ಅದೇ ರೀತಿ, ಸ್ಪಾಟ್ ಬೆಳ್ಳಿ ಕೂಡ ಸುಮಾರು ಶೇ1 ರಷ್ಟು ಕುಸಿದು ಪ್ರತಿ ಔನ್ಸ್‌ಗೆ $32.37 ಕ್ಕೆ ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications