Gold Rate: ದಿಢೀರನೆ ಬಂಗರದ ಬೆಲೆ ಗಗನಕ್ಕೆ..ಬರೋಬ್ಬರಿ 4,400 ರೂ. ಹೆಚ್ಚಳ..ಬೆಂಗಳೂರಿನಲ್ಲಿ10 ಗ್ರಾಂ ಗೋಲ್ಡ್‌ ಈಗ 99,330 ರೂ.

Bengaluru Gold Rate Today: ಮಹಿಳೆಮಣಿಯರೇ ಶಾಕ್..! ಚಿನ್ನದ ಬೆಲೆ ಸತತವಾಗಿ ಏರಿಕೆ. ಹೌದು,ಇಂದು ಚಿನ್ನದ ಬೆಲೆಗಳು ಏರಿಕೆಯತ್ತ ಮುಖ ಮಾಡಿವೆ. ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಇಂದು ಸಹ ತನ್ನ ಓಟವನ್ನು ಮುಂದುವರಿಸಿರುವುದರಿಂದ ಆಭರಣ ಪ್ರಿಯರಿಗೆ ನಿರಾಸೆಯಾಗಿದೆ. ಬಂಗಾರ ಜಿಗಿತಗೊಂಡರೆ ಬೆಳ್ಳಿ ಕೂಡ ಏರಿಕೆಯನ್ನೇ ಕಂಡಿದೆ. ಹಾಗಿದ್ರೆ ಜುಲೈ 3 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

Gold Rate: ಬಂಗರದ ಬೆಲೆ ಗಗನಕ್ಕೆ..ಬರೋಬ್ಬರಿ 4,400 ರೂ.ಹೆಚ್ಚಳ

ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿಯ ಬೆಲೆ ಏರಿಕೆ ಕಂಡಿದೆ. ಸದ್ಯ 10 ಗ್ರಾಂ 22 ಕ್ಯಾರೆಟ್‌ ಚಿನ್ನ 91,050 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 99,330 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 440 ರೂ. ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 4,400 ರೂ,ಗಳ ಏರಿಕೆಯನ್ನು ಕಂಡಿದೆ.

ಜುಲೈ 3 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ ಒಂದು ಗ್ರಾಂಗೆ 9,105 ರೂ.ಗಳು ಇದೆ.ಇನ್ನೂ 10ಗ್ರಾಂ 22 ಕ್ಯಾರೆಟ್‌ ಚಿನ್ನ 91,050 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 450 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 4,000ರೂ.ಗಳಷ್ಟ ಏರಿಕೆಯಾಗಿ 9,10,500 ರೂ.ಗಳು ತಲುಪಿದೆ.

24 ಕ್ಯಾರೆಟ್‌ ಗೋಲ್ಡ್ ರೇಟ್ ಅಪರಂಜಿ

24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,933ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 99,330 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 440 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ 9,93,300 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 4,400 ರೂ.ಗಳಷ್ಟು ಏರಿಕೆ ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನ ಸಹ ಇಂದು ಜಿಗಿತ ಕಂಡಿದೆ. 1ಗ್ರಾಂ 7,450 ರೂ.ಇದೆ. 18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 74,500 ರೂ. ಇದೆ.100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 7,45,000 ರೂ.ಇದೆ. ಇಂದು ಚಿನ್ನದ ಬೆಲೆ ಏರಿಕೆ ಕಂಡಿದೆ.

ಜುಲೈ 3 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಇಂದು ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,11,000 ರೂಪಾಯಿಗಳು ವಾಹಿವಾಟುವಿದೆ.ಒಂದು ಗ್ರಾಂಗೆ ಬೆಳ್ಳಿಗೆ 111 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,110 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,100 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಜೂನ್‌ ತಿಂಗಳಲ್ಲಿ ಏರಿಳಿತವನ್ನು ಕಂಡಿದೆ.ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ಇಂದು ಕೂಡ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 9,020 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ 9,840 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ಜಾಗತಿಕ ಮಟ್ಟದಲ್ಲಿ ಸ್ಪಾಟ್ ಗೋಲ್ಡ್ ದರವು $3,322.55ಕ್ಕೆ ಏರಿಕೆಯಾಗಿದ್ದು, ಇದು ಮುಂಜಾನೆ ವೇಳೆಗೆ ಸುಮಾರು ಶೇ.0.6ಹೆಚ್ಚಳವಾಗಿದೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ. ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

ಚಿನ್ನ ಬೆಲೆ ಏರಿಕೆ ಕಾರಣವೇನು.?
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಇಸ್ರೇಲ್ ಇರಾನ್‌ನ ಪರಮಾಣು ಮತ್ತು ಮಿಲಿಟರಿ ನಾಯಕತ್ವದ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ ಚಿನ್ನದ ಜೊತೆಗೆ, ಕಚ್ಚಾ ತೈಲ ಬೆಲೆಗಳು ಸೋಮವಾರ ಏರಿಕೆಯನ್ನು ಕಂಡಿವೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+