ನಾರಿಮಣಿಯರಿಗೆ ಶಾಕಿಂಗ್ ಸುದ್ದಿ.....ಬಂಗಾರದ ಬೆಲೆ ಭಾರೀ ದಿಡೀರನೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಭಾರತೀಯ ಚಿಲ್ಲರೆ ಮಾರುಕಟ್ಟೆ ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದೆ. ಚಿನ್ನ ತನ್ನ ಓಟವನ್ನು ಮತ್ತೆ ಮುಂದುವರೆಸಿದೆ. ಕಳೆದ ಮೂರು ದಿನಗಳಿಂದ ಆಭರಣ ಪ್ರಿಯರಿಗೆ ಸಂತಸವನ್ನು ದುಪ್ಪಟ್ಟು ಮಾಡಿದ್ದು, ಚಿನ್ನ ಇಂದು ದುಬಾರಿಯಾಗಿ ನಿರಾಸೆಯನ್ನು ಮೂಡಿಸಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಕೊಂಚ ಏರಿಕೆ ಕಂಡಿದೆ. ಹಾಗಿದ್ರೆ ಏಪ್ರಿಲ್ 11 ರಂದು ಶುಕ್ರವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ 87,450 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 95,400 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 2,020 ರೂ. ಗಳ ಏರಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 20,200 ಭಾರೀ ಜಿಗಿತವನ್ನು ಕಂಡಿದೆ.

ಏಪ್ರಿಲ್ 11ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,745 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 87,450 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ1,850 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 18,500 ರೂ.ಗಳಷ್ಟ ಏರಿಕೆಯಾಗಿ 8,74,500 ರೂ.ಗಳು ತಲುಪಿದೆ.ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,540 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 95,400 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 2,020ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,54,000 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 20,200 ರೂ.ಗಳ ಭಾರೀ ಪ್ರಮಾಣದ ಜಿಗಿತವನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಏರಿಕೆ ಕಂಡಿದೆ. 1ಗ್ರಾಂ 7,155 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 70,040 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,00,400 ರೂ ಇದೆ.ಇಂದು ಚಿನ್ನದ ಬೆಲೆ ಏರಿಕೆ ಕಂಡಿದೆ.
ಏಪ್ರಿಲ್ 11ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 97,100 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 97 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 971 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,710 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಕೊಂಚ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಏರಿಕೆ ಕಂಡಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು. ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದು ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,745 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,540 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,155 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,745 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,540 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,155 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,745 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,540 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,155 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,745 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,540 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,155 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,745 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,540 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,155 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,745 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,540 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 11) ಸ್ಪಾಟ್ ಚಿನ್ನದ ದರ ಬೆಳಿಗ್ಗೆ 3:50 (GMT) ರ ಸಮಯಕ್ಕೆ ಶೇ. 1.4ಏರಿಕೆ ಆಗಿ ಪ್ರತಿ ಔನ್ಸ್‌ಗೆ $3,217.78 ತಲುಪಿತು. ಇದು ಪ್ರತಿ ಔನ್ಸ್‌ಗೆ $3,200 ಗಡಿ ದಾಟಿದೆ.ಅಮೆರಿಕ ಡಾಲರ್ ಮೌಲ್ಯ ಕುಸಿತ ವ್ಯಾಪಾರ ಯುದ್ಧದ ಕಾರಣದಿಂದ ಹೂಡಿಕೆದಾರ ಮೇಲೆ ಪ್ರಭಾವ ಬೀರಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ.
ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications