ಬಂಗಾರ ದಿನೇ ದಿನ ದುಬಾರಿಯಾಗುತ್ತಲೇ ಇದೆ. ಆಭರಣ ಪ್ರಿಯರಿಗೆ ಭಾರತೀಯ ಚಿಲ್ಲರೆ ಮಾರುಕಟ್ಟೆ ಶಾಕ್ ಮೇಲೆ ಶಾಕ್ ಕೊಡುತ್ತಲೇ ಇದೆ. ಚಿನ್ನ ಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇಂದು ಚಿನ್ನ ಗಗನಕ್ಕೇರಿದ್ದರೆ ಬೆಳ್ಳಿ ಎರಡು ಸಾವಿರ ರೂ. ಗಳ ಇಳಿಕೆ ಕಂಡಿದ್ದು, ಇಂದು ಬೆಳ್ಳಿ ಕೊಳ್ಳಲು ಸಕಾಲವೆಂದೇ ಹೇಳಬಹುದು. ಆದರೆ ಚಿನ್ನ ತನ್ನ ಓಟವನ್ನು ಮುಂದುವರಿಸಿದ್ದರಿಂದ ಬಂಗಾರ ಕೊಳ್ಳವವರ ಆಸೆಗೆ ತಣ್ಣೀರೆರಚಿದೆ. ಹಾಗಿದ್ರೆ ಏಪ್ರಿಲ್ 3 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ ದುವಾರಿಯಾದ್ದರೆ ಬೆಳ್ಳಿ ಬೆಲೆಗಳು ಕುಸಿತ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ85,600 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 93,380 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 540ರೂ. ಗಳ ಏರಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 5,400 ರೂ.ಗಳ ಏರಿಕೆಯನ್ನು ಕಂಡಿದೆ.

ಏಪ್ರಿಲ್ 3ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,560 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ85,600 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 500 ರೂಪಾಯಿಗಳ ಏರಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 5,000 ರೂ.ಗಳ ಏರಿಕೆಯಾಗಿ8,56,000 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,338 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 93,380 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 540 ರೂ.ಗಳ ಏರಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,33,800 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 5,400 ರೂ.ಗಳ ಏರಿಕೆ ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಏರಿಕೆ ಕಂಡಿದೆ. 1ಗ್ರಾಂ 7,004ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 70,040 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,00,400 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.
ಏಪ್ರಿಲ್ 3ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,03,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಎರಡು ಸಾವಿರ ರೂಪಾಯಿಗಳ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 103 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,030 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,300 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಜಿಗಿತ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 8 ರಿಂದ 16 ರವರೆಗೆ ಏರಿಕೆ ಕಂಡಿದ್ದು, 15 ರಿಂದ 11ರಂದು ಮಾತ್ರ ಇಳಿಕೆ ಕಂಡಿತ್ತು.ವಾರದ ಮೊದಲ ದಿನದಿಂದ ಏರಿಕೆ ಕಂಡಿತ್ತು. ಯುಗಾದಿ ದಿನ ಯಥಾಸ್ಥಿತಿಯಲ್ಲಿ ಇದ್ದು, ಕೊನೆಯ ದಿನ ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,560 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,338 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 3) ಸ್ಪಾಟ್ ಗೋಲ್ಡ್ ಬೆಲೆಯು 0325 GMT ವೇಳೆಗೆ 0.5% ಏರಿಕೆ ಕಂಡಿದೆ. ಹಾಗೂ ಕಂಡು $3,148.05 ಪ್ರತಿ ಔನ್ಸ್ ದರಕ್ಕೆ ವಹಿವಾಟು ನಡೆಸಿದೆ. ಈ ವಹಿವಾಟಿನ ಮೊದಲ ಭಾಗದಲ್ಲಿ ಬಂಗಾರವು ದಾಖಲೆ ಮಟ್ಟವಾದ $3,167.57 ಗೆ ತಲುಪಿತು.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದ ಚಿನ್ನ ತಿಂಗಳ ಕೊನೆಯ ದಿನದಲ್ಲೂ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications