Gold Rate: ಲಕ್ಷ ದಾಟಿದ ಬಂಗಾರ! ಇಂದು ಚಿನ್ನದ ಬೆಲೆ 21,200 ದುಬಾರಿ.. ಮಧ್ಯಮ ವರ್ಗದವರಿಗೆ ಸಂಕಷ್ಟ; ದರ ಏಕೆ ಏರುತ್ತಿದೆ?

Bengaluru Gold Rate Today: ಅಬ್ಬಾ.. ಚಿನ್ನದ ಬೆಲೆಗಳು(Gold Rate) ದಿನೇ ದಿನೆ ದುಬಾರಿಯಾಗುತ್ತಲೇ ಇದೆ. ಸತತ ಮೂರು ದಿನಗಳಿಂದ ಚಿನ್ನ ಬೆಲೆಗಳು ಏರಿಕೆಯಾಗಿ ಆಭರಣ ಪ್ರಿಯರಿಗೆ ಬಿಗ್ ಶಾಕ್‌ನ್ನು ಚಿನ್ನದ ಮಾರುಕಟ್ಟೆ ನೀಡಿದೆ.ಹೌದು, ಚಿನ್ನ (Gold)ತನ್ನ ದಾಖಲೆಯ ಓಟವನ್ನು ಮತ್ತೆ ಮುಂದುವರಿಸಿದೆ. ಸತತವಾಗಿ ಇಳಿಕೆಯಾಗಿದ್ದ ಚಿನ್ನ ಏರಿಯತ್ತ ಮುಖ ಮಾಡಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದವರ ಆಸೆಗೆ ತಣೀರು ಎರಚಿದೆ. ಇತ್ತ ಚಿನ್ನದ ದರಗಳು ಲಕ್ಷದ ಗಡಿ ದಾಟಿ ದಾಖಲೆಯ ಮಟ್ಟವನ್ನು ತಲುಪಿದ್ದರೆ ಬೆಳ್ಳಿ ಬೆಲೆಗಳು (Silver Rate) ಕೂಡ ದುಬಾರಿಯಾಗಿ ಲಕ್ಚದ ಗಡಿ ದಾಟಿವೆ. ಹಾಗಿದ್ರೆ ಜೂನ್‌ 13 ರಂದು ಶುಕ್ರವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್(Benagluru Gold Rate) ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ(Silver Rate Today) ಎಷ್ಟು..? ಚಿನ್ನದ ದರ ಏಕೆ ಏರುತ್ತಿದೆ ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆಗಳು ಏರಿಕೆಯಾಗಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್‌ ಚಿನ್ನ 92,950 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,01,400 ರೂ.ಇದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 21,200 ರೂ,ಗಳಷ್ಟು ಇದೆ.

Gold Rate: ಲಕ್ಷ ದಾಟಿದ ಬಂಗಾರ! ಇಂದು ಚಿನ್ನದ ಬೆಲೆ 21,200 ದುಬಾರಿ

ಜೂನ್‌ 13 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 9,295 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ 92,950 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 1,950 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 19,500 ರೂ,ಗಳಷ್ಟು ಏರಿಕೆಯಾಗಿ 9,29,500 ರೂ. ತಲುಪಿದೆ.

24 ಕ್ಯಾರೆಟ್‌ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 10,140 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,01,400 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 2,200 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ 10,14,000 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 21,200 ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಚಿನ್ನ ದುಬಾರಿಯಾಗಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನದ ಏರಿಕೆ ಕಂಡಿದೆ.1ಗ್ರಾಂ 7,605 ರೂ.ಇದೆ.18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ76,050 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 7,60,500 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

Take a Poll

ಜೂನ್‌ 13ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಳ್ಳಿಗಳು ಜಿಗಿತ ಕಂಡಿವೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,10,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಸಾವಿರ ರೂಪಾಯಿಗಳಷ್ಟು ಏರಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 110 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,100 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,000 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಭಾರೀ ಪ್ರಮಾಣದಲ್ಲಿ ಏರಿಕೆಯಾಗು ಲಕ್ಷದ ಗಡಿ ದಾಟಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ ತಿಂಗಳಲ್ಲಿ ಏರಿಳಿತವನ್ನು ಕಂಡಿದೆ. ಜೂನ್‌ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ. 1,2,3,4ರಂದು ಚಿನ್ನದ ಬೆಲೆಗಳು ಏರಿಕೆ ಕಂಡಿವೆ. ತಿಂಗಳ ಮೊದಲ ಶನಿವಾರ ಭಾನುವಾರ ಯಥಾಸ್ಥಿತಿಯಲ್ಲಿ ಚಿನ್ನ ಇತ್ತು. ಜೂನ್‌ ತಿಂಗಳ 2ನೇ ವಾರದ ಮೊದಲು ದಿನ ಇಳಿಯತ್ತ ಚಿನ್ನ ಮುಖ ಮಾಡಿದ್ದು, ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 9,295 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ10,140 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,605 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,295 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,140 ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,605 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,295 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,140 ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,605 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,295 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,140 ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,605 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,295 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,140 ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,605 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,295 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,140 ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ಟ್ರೇಡಿಂಗ್ ಎಕನಾಮಿಕ್ಸ್ ಪ್ರಕಾರ ವರದಿ ನೀಡಿರುವ ಪ್ರಕಾರ ಜಾಕತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ವ್ಯಾಪಾರ ಅನಿಶ್ಚಿತತೆಯಿಂದಾಗಿ ಹೂಡಿಕೆದಾರರು ಜಾಗರೂಕರಾಗಿರುವುದರಿಂದ ಶುಕ್ರವಾರ ಅಂತರರಾಷ್ಟ್ರೀಯ ಚಿನ್ನದ ಬೆಲೆ ಶೇ. 1 ಕ್ಕಿಂತ ಹೆಚ್ಚು ಜಿಗಿದು $3440 ಕ್ಕಿಂತ ಹೆಚ್ಚಾಗಿ ಏರಿಕೆಯನ್ನು ಕಂಡಿವೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

ಚಿನ್ನ ಬೆಲೆ ಏರಿಕೆಗೆ ಕಾರಣ

ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಇಸ್ರೇಲ್ ಇರಾನ್‌ನ ಪರಮಾಣು ಮತ್ತು ಮಿಲಿಟರಿ ನಾಯಕತ್ವದ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ ಚಿನ್ನದ ಜೊತೆಗೆ, ಕಚ್ಚಾ ತೈಲ ಬೆಲೆಗಳು ಶುಕ್ರವಾರ ಏರಿಕೆಯನ್ನು ಕಂಡಿವೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+