Bengaluru Gold Rate Today: ಸತತವಾಗಿ ಇಳಿಕೆಯಾಗಿದ್ದ ಚಿನ್ನ(Gold),ಬೆಳ್ಳಿ(Silver) ದರಗಳು ಇಂದು ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಕೊಂಡಿವೆ. ಇದರಿಂದಾಗಿ ಆಭರಣ ಪ್ರಿಯರು ನಿರಾಳರಾಗಿದ್ದಾರೆ.ಇರಾನ್- ಇಸ್ರೇಲ್ ದಾಳಿಯಿಂದಾಗಿಚಿನ್ನದ ದರಗಳು ಏರಿಳಿತವನ್ನು ಕಂಡಿದ್ದವು. ಆದರೆ ಯುದ್ದದ ಶಾಂತಿ ಒಪ್ಪಂದ ನಂತರ ಚಿನ್ನದ ಬೆಲೆಗಳು ಇಳಿಯಾಗಿ ಇಂದು ಯಥಾಸ್ಥಿತಿಯನ್ನು ಪಡೆದುಕೊಂಡಿದ್ದೇವೆ. ಚಿನ್ನದ ಬೆಲೆ ಜೊತೆಗೆ ಬೆಳ್ಳಿ ಬೆಲೆಗಳು ಸಹ ಸ್ಥಿರವಾಗಿವೆ. ಹಾಗಿದ್ರೆ ಜೂನ್ 26 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ (Gold Rate In Bengaluru) ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ( Silver Rate) ಎಷ್ಟು? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಇಂದು ಯಥಾಸ್ಥಿತಿಯಲ್ಲಿ ಇವೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ 90,700 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 98,950 ರೂ.ಗಳು ಇದೆ.

ಜೂನ್ 26 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 9,070 ರೂ.ಗಳು ಇದೆ. ಇನ್ನೂ 10ಗ್ರಾಂ 22 ಕ್ಯಾರೆಟ್ ಚಿನ್ನ90,700 ರೂ.ಗಳು ಇದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2,500 ರೂ.ಗಳಷ್ಟ ಇಳಿಕೆಯಾಗಿ 9,07,000 ರೂ.ಗಳು ತಲುಪಿತ್ತು ಆದರೆ ಇಂದು ಯಾವುದೇ ಬದಲಾವಣೆಗಳು ಆಗಿಲ್ಲ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,895 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 98,950 ರೂ. ಇದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,89,500 ರೂ.ಗಳ ವಾಹಿವಾಟುವಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಸ್ಥಿರವಾಗಿ ಇದೆ. 1ಗ್ರಾಂ 7,421 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ74,210 ರೂ. ಇದೆ.100 ಗ್ರಾಂ 18 ಕ್ಯಾರೆಟ್ ಚಿನ್ನಕ್ಕೆ 7,42,100 ರೂ ಇದೆ. 18 ಕ್ಯಾರೆಟ್ ಇಂದು ಚಿನ್ನದ ಬೆಲೆಯಲ್ಲೂ ಕೂಡ ಯಾವುದೇ ಬದಲಾಗವಣೆಗಳು ಇಲ್ಲ.
ಜೂನ್ 26 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಇಂದು ಯಥಾಸ್ಥಿತಿಯಲ್ಲಿ ಇವೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,08,000 ರೂಪಾಯಿಗಳು ವಾಹಿವಾಟುವಿದೆ.ಒಂದು ಗ್ರಾಂಗೆ ಬೆಳ್ಳಿಗೆ 108 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,080 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,800 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಇಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ ತಿಂಗಳಲ್ಲಿ ಏರಿಳಿತವನ್ನು ಕಂಡಿದೆ. ಜೂನ್ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ. 1,2,3,4ರಂದು ಚಿನ್ನದ ಬೆಲೆಗಳು ಏರಿಕೆ ಕಂಡಿವೆ. ತಿಂಗಳ ಮೊದಲ ಶನಿವಾರ ಭಾನುವಾರ ಯಥಾಸ್ಥಿತಿಯಲ್ಲಿ ಚಿನ್ನ ಇತ್ತು. ಜೂನ್ ತಿಂಗಳ 2ನೇ ವಾರದ ಮೊದಲು ದಿನ ಇರಿಳಿತ ಕಂಡತು ಮೂರನೇ ವಾರದಲ್ಲೂ ಕೂಡ ಚಿನ್ನ ಇಳಿಯತ್ತ ಸಾಗುತ್ತಿದೆ.ಈ ದಿನ ಮಾತ್ರ ಯಥಾಸ್ಥಿಯಲ್ಲಿ ಇದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,070 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,895 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,421 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,070 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,895 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,421 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,070 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,895 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,421 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,070 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,895 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,421 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,070 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,895 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,421 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,070 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,895 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.ಇಂದು ಸ್ಪಾಟ್ ಚಿನ್ನವು (ಜೂನ್ 24, 2025) ರಂದು ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,368 ವಾಹಿವಾಟು ತಲುಪಿದೆ ರಾಯಿಟರ್ಸ್ ವರದಿ ಹೇಳಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ. ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ..?
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಇಸ್ರೇಲ್ ಇರಾನ್‌ನ ಪರಮಾಣು ಮತ್ತು ಮಿಲಿಟರಿ ನಾಯಕತ್ವದ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ ಚಿನ್ನದ ಜೊತೆಗೆ, ಕಚ್ಚಾ ತೈಲ ಬೆಲೆಗಳು ಸೋಮವಾರ ಏರಿಕೆಯನ್ನು ಕಂಡಿವೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications