Bengaluru gold rate today: ಮಹಿಳಾಮಣಿಯರಿಗೆ ಶಾಕಿಂಗ್ ಸುದ್ದಿ.....ಬಂಗಾರದ ಬೆಲೆ ಭಾರೀ ದಿಡೀರನೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಭಾರೀತಿಯ ಚಿಲ್ಲರೆ ಮಾರುಕಟ್ಟೆ ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದೆ.ಚಿನ್ನ,ಬೆಳ್ಳಿ ಇಂದು ಬಲು ದಿಬಾರಿಯಾಗಿದ್ದು, ಚಿನ್ನ ತನ್ನ ಓಟವನ್ನು ಮುಂದುವರೆಸಿದೆ. ಕಳೆದ ಮೂರು ದಿನಗಳಿಂದ ಆಭರಣ ಪ್ರಿಯರಿಗೆ ಸಂತಸವನ್ನು ದುಪ್ಪಟ್ಟು ಮಾಡಿದ್ದು, ಚಿನ್ನ ಇಂದು ದುಬಾರಿಯಾಗಿ ನಿರಾಸೆಯನ್ನು ಮಾಡಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಏರಿಕೆ ಕಂಡಿದೆ. ಹಾಗಿದ್ರೆ ಏಪ್ರಿಲ್ 10ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ85,600 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 93,380 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 2,940 ರೂ. ಗಳ ಏರಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 29,400 ಭಾರೀ ಜಿಗಿತವನ್ನು ಕಂಡಿದೆ.

ಏಪ್ರಿಲ್ 10ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,560 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 85,600 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 2,700 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 27,000 ರೂ.ಗಳಷ್ಟ ಏರಿಕೆಯಾಗಿ 8,56,000 ರೂ.ಗಳು ತಲುಪಿದೆ.ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,338 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 93,380 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 2,940 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,33,800 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 29,400 ರೂ.ಗಳ ಭಾರೀ ಪ್ರಮಾಣದ ಜಿಗಿತವನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಏರಿಕೆ ಕಂಡಿದೆ. 1ಗ್ರಾಂ 7,004 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 70,040 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,00,400 ರೂ ಇದೆ.ಇಂದು ಚಿನ್ನದ ಬೆಲೆ ಏರಿಕೆ ಕಂಡಿದೆ.
ಏಪ್ರಿಲ್ 10ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 95,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಎರಡು ಸಾವಿರ ರೂಪಾಯಿಗಳ ಏರಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 95 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 950 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,500 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಸ್ಥಿರವಾಗಿ ಇದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಏರಿಕೆ ಕಂಡಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು. ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದು ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,560 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,338 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,004 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,560 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,338 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 10) 0300 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ 1.2% ಏರಿಕೆಯಾಗಿ $3,119.18 ಕ್ಕೆ ತಲುಪಿದೆ. ಹಿಂದಿನ ಅವಧಿಯಲ್ಲಿ, ಅಕ್ಟೋಬರ್ 2023 ರ ನಂತರದ ಅತ್ಯುತ್ತಮ ದಿನವನ್ನು ಬುಲಿಯನ್ ದಾಖಲಿಸಿದೆ. US ಚಿನ್ನದ ಫ್ಯೂಚರ್‌ಗಳು ಶೇ.1.8 ಏರಿಕೆಯಾಗಿ $3,135.50 ಕ್ಕೆ ತಲುಪಿದೆ. ಸ್ಪಾಟ್ ಬೆಳ್ಳಿ 0.2% ಏರಿಕೆಯಾಗಿ ಔನ್ಸ್‌ಗೆ $31.08 ಕ್ಕೆ ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ.
ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಮೆರಿಕವು ಚೀನಾದ ಮೇಲಿನ ಸುಂಕಗಳನ್ನು ಹೆಚ್ಚಿಸಿದ್ದರಿಂದ ಭಾರತದಲ್ಲಿ ಚಿನ್ನದ ದರದಲ್ಲಿ ಈ ತೀವ್ರ ಏರಿಕೆ ಕಂಡುಬಂದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications