ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಇಳಿಕೆ! 24 ಸಾವಿರ / 100 ಗ್ರಾಂ ಚಿನ್ನದ ಬೆಲೆ 1,100 ರೂ. ಕುಸಿತ; ಬೆಳ್ಳಿ ಕೊಳ್ಳಲು ಇಂದು ಸಕಾ

ಮಹಿಳೆಯರಿಗೆ ಸಿಹಿ ಸುದ್ದಿ... ಚಿನ್ನದ ಮಾರುಕಟ್ಟೆಯಲ್ಲಿ ಕಳೆದ ವಾರ ಏರಿಳಿತವಾಗುತ್ತಿದ್ದ ಬಂಗಾರ ಈ ವಾರದ ಮೊದಲ ದಿನ ಇಳಿಕೆ ಕಂಡಿದೆ. ಚಿನ್ನ ಜೊತೆಗೆ ಬೆಳ್ಳಿಯ ಬೆಲೆ ಕೂಡ ಕಡಿಮೆಯಾಗಿದೆ. ಚಿನ್ನ ಖರೀದಿ ಮಾಡಬೇಕೆಂದುಕೊಂಡವರೆಗೆ ರಿಲೀಫ್‌ ತಂದಿದೆ. ಬೆಂಗಳೂರಿಗರಿಗೆ(Gold Rate In Bengaluru) ಚಿನ್ನದ ಇಳಿಕೆ ಸಂತಸ ತಂದಿದೆ .ಹಾಗಿದ್ರೆ ಮಾರ್ಚ್ 17 ರಂದು ಸೋಮವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿರುವುದರಿಂದ ಗ್ರಾಹಕರ ಖುಷಿ ದುಪ್ಪಟ್ಟು ಆಗಿದೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್‌ ಚಿನ್ನ82,100 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 89,560 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 110 ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಸಾವಿರದ ನೂರು ರೂಪಾಯಿಗಳ ಇಳಿಕೆ ಕಂಡಿದೆ.

ಮಹಿಳೆಯರಿಗೆ ಗುಡ್‌ ನ್ಯೂಸ್; ಚಿನ್ನ, ಬೆಳ್ಳಿ ಬೆಲೆ ಇಳಿಕೆ

ಮಾರ್ಚ್ 17 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 8,210 ರೂ ಇಳಿಕೆ ಕಂಡಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ 80,200 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳ ಇಳಿಕೆ ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 1,000 ರೂ. ಇಳಿಕೆಯಾಗಿ 8,21,000 ರೂ.ಗಳು ತಲುಪಿದೆ.

24 ಕ್ಯಾರೆಟ್‌ ಚಿನ್ನ

ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 8,956 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 89,560 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ 110 ರೂಪಾಯಿಗಳ ಇಳಿಕೆ ಕಂಡಿದೆ. ಇದಲ್ಲದೆ, 100 ಗ್ರಾಂ 24 ಕ್ಯಾರೆಟ್‌ ಚಿನ್ನ8,95,600 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 1,100 ರೂಗಳ ಇಳಿಕೆ ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನ ಸಹ ಇಂದು ಇಳಿಕೆ ಕಂಡಿದೆ.1ಗ್ರಾಂ 6,718 ರೂ. ಇದೆ. 18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 67,180 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ6,71,800 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಇಳಿಕೆ ಕಂಡಿದೆ

ಮಾರ್ಚ್ 17ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,02,900 ರೂಪಾಯಿಗಳು ವಾಹಿವಾಟುವಿದೆ. ನೂರು ರೂಪಾಯಿಗಳ ಇಳಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 102.90 ರೂ.ಗಳ ವ್ಯಾಪಾರದವಿದೆ.

10 ಗ್ರಾಂ ಬೆಳ್ಳಿಯ ಬೆಲೆ 1,029 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ10,290 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 8ರಿಂದ 16 ರವರೆಗೆ ಏರಿಕೆ ಕಂಡಿದ್ದು, 15 ರಿಂದ 11ರಂದು ಮಾತ್ರ ಇಳಿಕೆ ಕಂಡಿತ್ತು.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 8,210 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ 8,956 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,718 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,956 ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,562 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,020 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,749 ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,718 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,956 ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,718 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,956 ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,718 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,210 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,956 ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ರಾಯಿಟರ್ಸ್ ಪ್ರಕಾರ, 0307 GMT ವೇಳೆಗೆ ಸ್ಪಾಟ್ ಚಿನ್ನದ ಬೆಲೆ ಔನ್ಸ್‌ಗೆ ಶೇ. 0.1 ಏರಿಕೆಯಾಗಿ $2,986.53 ಕ್ಕೆ ತಲುಪಿದೆ. ಶುಕ್ರವಾರ, ಚಿನ್ನ $3,000/ಔನ್ಸ್ ಮೈಲಿಗಲ್ಲನ್ನು ಮೀರಿ, ದಾಖಲೆಯ ಗರಿಷ್ಠ $3,004.86 ತಲುಪಿದೆ. ಯುಎಸ್‌ ಚಿನ್ನದ ಭವಿಷ್ಯವು ಶೇ. 0.2 ಇಳಿಕೆಯಾಗಿ $2,994.60 ಕ್ಕೆ ತಲುಪಿದೆ.

ಸ್ಪಾಟ್ ಬೆಳ್ಳಿ ಶೇ. 0.1 ಇಳಿಕೆಯಾಗಿ ಔನ್ಸ್‌ಗೆ $33.76 ಕ್ಕೆ ತಲುಪಿದೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಹೆಚ್ಚುತ್ತಿರುವ ಸುಂಕಗಳು ಮತ್ತು ವ್ಯಾಪಾರ ಘರ್ಷಣೆಗಳ ಬಗ್ಗೆ ಕಳವಳಗಳು ಮತ್ತು US ಫೆಡರಲ್ ರಿಸರ್ವ್‌ನಿಂದ ಬಡ್ಡಿದರ ಕಡಿತದ ನಿರೀಕ್ಷೆಗಳು ಹೆಚ್ಚುತ್ತಿರುವುದರಿಂದ ಸೋಮವಾರ ಚಿನ್ನದ ಬೆಲೆಗಳು ದೃಢವಾಗಿ ಉಳಿದುಕೊಂಡಿವೆ.

ಮಹಿಳೆಯರಿಗೆ ಚಿನ್ನದ ಮೇಲಿನ ಪ್ರೀತಿ ಎಂದಿಗೂ ಕಡಿಮೆಯಾಗುವುದೂ ಇಲ್ಲ. ಏಕೆಂದರೆ ಚಿನ್ನ ಒಂದು ಅಮೂಲ್ಯವಾದ ಸಂಪತ್ತಿಗೆ ಸಮಾನ. ಮಹಿಳೆಯರಿಗೆ ಅತೀ ಇಷ್ಟವಾದ ಚಿನ್ನದ ಬೆಲೆ ಕಡಿಮೆಯಾದರೆ, ಅವರಿಗಾಗೋ ಸಂತಸ ಅಷ್ಟಿಷ್ಟಲ್ಲ. ಅದರಲ್ಲೂ ಸಿಲಿಕಾನ್‌ ಸಿಟಿಯಲ್ಲಿ ಚಿನ್ನವನ್ನು ಹೆಚ್ಚಾಗಿ ಖರೀದಿ ಮಾಡುತ್ತಾರೆ.

ಚಿನ್ನದ ಬೆಲೆಯಲ್ಲಿನ ಬದಲಾವಣೆಗಳಿಗೆ ಸಾಕಷ್ಟು ಕಾರಣಗಳಿವೆ..ಅಂದರೆ ಜಾಗತಿಕ ಚಿನ್ನದ ಬೆಲೆಗಳು ಪ್ರಮುಖವಾಗಿ ಡಾಲರ್‌ನ ಬಲ, ತೈಲದ ಬೆಲೆಗಳು, ಮತ್ತು ಜಿಯೋಪಾಲಿಟಿಕಲ್ ಘಟನೆಗಳ ಮೇಲೆ ಅವಲಂಬಿತವಾಗಿರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿದಿದ್ದರೆ, ಅದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲಿಯೂ ಕಾಣಬಹುದು.ಅಮೆರಿಕಾದ ಕೇಂದ್ರ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದರೆ, ಹೂಡಿಕೆದಾರರು ಚಿನ್ನದ ಬದಲು ಬಡ್ಡಿದರ ಹೊಂದಿರುವ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸುತ್ತಾರೆ, ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬೆಲೆ ಇಳಿಕೆಗೆ ಕಾರಣವಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+