Gold Rate: ಬಂಗಾರ ಪ್ರಿಯರಿಗೆ ಖುಷಿ! ಭಾರೀ ಇಳಿಕೆಯಾಯ್ತು ಚಿನ್ನದ ದರ.ವಾರದ ಬಳಿಕ ದಿಢೀರನೆ 30,000 ಕುಸಿತ..ಹೂಡಿಕೆದಾರರಿಗೆ ಬೇಸರ

ಬಂಗಾರ ಪ್ರಿಯರಿಗೆ ಖುಷಿ ಸುದ್ದಿ ಇದು! ಭಾರೀ ಇಳಿಕೆಯಾಯ್ತು ಚಿನ್ನದ ದರ. ಹೌದು, ಸತತ ಒಂದು ವಾರದದಿಂದ ಗಗನಕ್ಕೇರಿದ ಚಿನ್ನದ ಬೆಲೆ ಇಂದು ದಿಢೀರ್ ಕುಸಿತ ಕಂಡಿದೆ. ದರ ಇಳಿಕೆಯಿಂದ ಆಭರಣ ಪ್ರಿಯರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಬಸವ ಜಯಂತಿ ಹಾಗೂ ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಮಾಡುವವರಿಗೆ ಇಂದು ಸಕಾಲವೆಂದೇ ಹೇಳಬಹುದು. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರು ಇಂದು ಚಿನ್ನ ಖರೀದಿ ಮಾಡುವುದು ಉತ್ತಮ.ಇನ್ನು ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಇಳಿಕೆಯಾಗಿದೆ. ಇತ್ತ, ಹೂಡಿಕೆ ಮಾಡುವವರಿಗೆ ನಿರಾಶೆಯಾಗಿದೆ. ಹಾಗಿದ್ರೆ ಏಪ್ರಿಲ್ 23 ರಂದು ಬುಧವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್‌ ಚಿನ್ನ 90,150 ರೂ.ಗಳು ಇದೆ.ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 98,350 ರೂ.ಇದೆ.ಅದರಲ್ಲೂ100 ಗ್ರಾಂ ಅಪರಂಜಿ ಚಿನ್ನ ಇಂದು 30,000 ರೂ,ಗಳಷ್ಟು ಇಳಿಕೆ ಕಂಡಿದೆ.

Gold Rate: ಬಂಗಾರ ಪ್ರಿಯರಿಗೆ ಖುಷಿ! ಭಾರೀ ಇಳಿಕೆಯಾಯ್ತು ಚಿನ್ನದ ದರ

ಏಪ್ರಿಲ್ 23ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 9,015 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ 90,150 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 2,750 ರೂ.ಗಳ ಇಳಿಕೆ ಕಂಡಿದೆ.100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 27,500ರೂ.ಗಳಷ್ಟು ಇಳಿಕೆಯಾಗಿ 9,01,500 ತಲುಪಿದೆ

24 ಕ್ಯಾರೆಟ್‌ ಗೋಲ್ಡ್ ರೇಟ್

ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,835 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 98,350 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 3,000 ರೂ.ಗಳಷ್ಟು ಇಳಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ9,83,500 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 30,000 ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನದ ಇಳಿಕೆ ಕಂಡಿದೆ.1ಗ್ರಾಂ7,376 ರೂ.ಇದೆ.18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 73,760 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ7,37,600 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

ಏಪ್ರಿಲ್ 23 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,01,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳ ಇಳಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 101 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,010 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,100 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ iಇಳಿಕೆ ಕಂಡಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಏರಿಕೆ ಕಂಡಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು. ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.ನಿನ್ನೆ ಚಿನ್ನದ ಬೆಲೆ ಇಂದು ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡಿದೆ. ಇಂದು ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 9,290 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ10,135 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,376 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,015 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,835 ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,376 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,015 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,835 ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,376 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,015 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,835 ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,376 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,015 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,835 ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,376 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,015 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,835 ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ಪ್ರಕಾರ, ಇಂದು ( ಏ.23) 0256 GMT ವೇಳೆಗೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ. 0.7 ರಷ್ಟು ಕುಸಿದು $3,357.11 ಕ್ಕೆ ತಲುಪಿದೆ. US ಚಿನ್ನದ ಭವಿಷ್ಯವು ಶೇ.1.5 ರಷ್ಟು ಕುಸಿದು $3,366.80 ಕ್ಕೆ ತಲುಪಿದೆ. ಸ್ಪಾಟ್ ಬೆಳ್ಳಿ ಶೇ.0.5 ರಷ್ಟು ಏರಿಕೆಯಾಗಿ ಔನ್ಸ್‌ಗೆ $32.67 ಕ್ಕೆ ತಲುಪಿದೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

ಚಿನ್ನ ಬೆಲೆ ಇಳಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+