ಕಣ್ಣೀರು ತರಿಸಿದ ಬಂಗಾರ! ಚಿನ್ನದ ಬೆಲೆ ದಿನೆ ದಿನೇ ಏರಿಕೆಯಾಗಿ ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಕೊಡುತ್ತಲೇ ಇದೆ. ಚಿನ್ನ ತನ್ನ ದಾಖಲೆಯ ಓಟವನ್ನು ಮತ್ತೆ ಮುಂದುವರಿಸಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಜೇಬಿಗೆ ಕತ್ತರಿ ಬಿದ್ದಿದೆ. ಇತ್ತ ಚಿನ್ನದ ದರ ಏರಿಕೆಯಾಗಿದ್ದರೆ ಬೆಳ್ಳಿ ಯಾವುದೇ ಬದಲಾವಣೆ ಕಾಣದೇ ಸ್ಥಿರವಾಗಿ ಉಳಿದುಕೊಂಡಿದೆ. ಬೆಲೆ ಏರಿಕೆಯಿಂದ ಗ್ರಾಹಕರು ಚಿನ್ನ ಕೊಳ್ಳಲು ಹಿದೇಟು ಆಗುತ್ತಿದ್ಧಾರೆ. ಹಾಗಿದ್ರೆ ಮೇ.08 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ91,300 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 99,600 ರೂ.ಇದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 6,000 ರೂ,ಗಳಷ್ಟು ಇದೆ.

ಮೇ.8 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 9,130 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ91,300 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 550 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 5,500ರೂ.ಗಳಷ್ಟು ಏರಿಕೆಯಾಗಿ 9,13,000 ತಲುಪಿದೆ
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,960 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 99,600 ರೂ.ಇದೆ.ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 600 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,96,000 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ ಆರು ಸಾವಿರ ರೂ.ಗಳಷ್ಟು ಏರಿಕೆ ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನದ ಏರಿಕೆ ಕಂಡಿದೆ.1ಗ್ರಾಂ 7,470 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ74,700 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ7,47,000 ರೂ.ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಮೇ 08 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಸ್ಥಿರವಾಗಿ ಇದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,000 ರೂಪಾಯಿಗಳು ವಾಹಿವಾಟುವಿದೆ.ಒಂದು ಗ್ರಾಂಗೆ ಬೆಳ್ಳಿಗೆ 99 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 990 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,900 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾಔಣೆಯನ್ನು ಕಂಡಿಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಏಪಿಲ್ 21 ಹಾಗೂ 22 ಏರಿಕೆ. 23, 24,26, 28 ರಂದು ಭಾರೀ ಪ್ರಮಾಣದಲ್ಲಿ ಏರಿಕೆ. 25,27 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು.ಮೇ 1ರಿಂದ ಚಿನ್ನದ ಬೆಲೆ ಇಳಿಕೆಯಾಗಿ ನಂತರ ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,130 ರೂ. ಮತ್ತು1 ಗ್ರಾಂ 24 ಕ್ಯಾರೆಟ್ ಚಿನ್ನ 9,960 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಟ್ರೇಡಿಂಗ್ ಎಕನಾಮಿಕ್ಸ್ ಪ್ರಕಾರ, ಸ್ಪಾಟ್ ಚಿನ್ನವು ಹೂಡಿಕೆದಾರರು ಹೆಚ್ಚುತ್ತಿರುವ ಅನಿಶ್ಚಿತತೆಯ ನಡುವೆ ಸುರಕ್ಷತೆಯನ್ನು ಬಯಸಿದ್ದರಿಂದ ಚಿನ್ನವು ಪ್ರತಿ ಔನ್ಸ್‌ಗೆ ಶೇ.2.5 ಕ್ಕಿಂತ ಹೆಚ್ಚು ಜಿಗಿದು $3,420 ಕ್ಕಿಂತ ಹೆಚ್ಚಾಗಿ ದಾಖಲೆಯ ಮಟ್ಟವನ್ನು ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications