ಬೆಂಗಳೂರಿಗರಿಗೆ ಸಿಹಿ ಸುದ್ದಿ! 22k ಮತ್ತು 24k ಚಿನ್ನದ ಬೆಲೆ ಇಳಿಕೆ! ಎಷ್ಟಿದೆ? ತಿಳಿಯಿರಿ

ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಬಹುದಿನಗಳಿಂದ ಏರಿಕೆಯಾಗ್ತಿದ್ದ ಚಿನ್ನದ ಬೆಲೆ ಇಮದು ಇಳಿಕೆಯಾಗಿದೆ. ಆಭರಣಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರಿನಲ್ಲಿ ಸತತವಾಗಿ ಒಂದು ವಾರದಿಂದ ಏರಿಕೆಯಾಗ್ತಾನೆ ಇದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. ತಿಮಗಳ ಆರಂಭದಿಂದಲೂ ಕೂಡ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಸಾಕಷ್ಟು ಏಳಿತಗಳು ಕಂಡುಬದ್ದಿದ್ದವು. ಅದರಲ್ಲೂ ನಿನ್ನೆ ದೊಡ್ಡ ಪ್ರಮಾಣದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ಅದೇ ರೀತಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು ಬೆಂಗಳೂರಿಗರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಈ ಏರಿಳಿತಗಳಿಂದಾಗಿ ಹೂಡಿಕೆದಾರರು ಆತಂಕ ಪಡುವಂತಾಗಿದೆ.

ಜನವರಿ 18 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 150 ರೂ. ಇಳಿಕೆಯಾಗಿ 74,350ರೂ. ಆಗಿದೆ. ಮತ್ತು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 160ರೂ. ಇಳಿಕೆಯಾಗಿ 81,110 ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 130 ರೂ. ಇಳಿಕೆಯಾಗಿ 60,830 ಆಗಿದೆ.

ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ!

ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,500ರೂ. ಇಳಿಕೆಯಾಗಿ 7,43,500 ಆಗಿದೆ. ಮತ್ತು 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,600 ರೂ. ಇಳಿಕೆಯಾಗಿ 8,11,100 ರೂ. ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,300 ರೂ. ಇಳಿಕೆಯಾಗಿ 6,08,300 ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರಗಳು

ಇಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದೆ . ಪ್ರಸ್ತುತ, ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ಬೆಲೆ 96.50 ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 96,500ರೂ. ಆಗಿದೆ. ಇಂದು ಬೆಳ್ಳಿ ಬೆಲೆ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.

ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:

ನಗರಗಳು24 ಕ್ಯಾರೆಟ್22 ಕ್ಯಾರೆಟ್
ದೆಹಲಿ81,26074,500
ಮುಂಬೈ81,11074,350
ಚೆನ್ನೈ81,11074,350
ಕೋಲ್ಕತ್ತಾ81,11074,350

ಸ್ಪಾಟ್‌ ಚಿನ್ನದ ಭವಿಷ್ಯ

ಸ್ಪಾಟ್‌ ಚಿನ್ನದ ದರಗಳು ಇಂದು ಸ್ಥಿರವಾಗಿದೆ. ಯುಎಸ್‌ ಡಾಲರ್‌ ಏರಿಳಿತದಿಂದಾಗಿ ಇದು ಸ್ಪಾಟ್‌ ಚಿನ್ನದ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಇನ್ನು ವರದಿ ಪ್ರಕಾರ ಸ್ಪಾಟ್‌ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 2,701.93 ಡಾಲರ್‌ನಲ್ಲಿ ಸ್ಥಿರವಾಗಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 1.56% ಇಳಿಕೆಯಾಗಿ 30.35 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್‌ ಬೆಲೆಯು ಪ್ರತಿ ಔನ್ಸ್‌ಗೆ 0.05% ರಷ್ಟು ಏರಿಕೆಯಾಗಿ 940.75 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 0.11% ರಷ್ಟು ಇಳಿಕೆಯಾಗಿ 950.00 ಡಾಲರ್‌ ತಲುಪಿದೆ.

MCX ಗೋಲ್ಡ್ ಔಟ್‌ಲುಕ್ ಮತ್ತು ಸಿಲ್ವರ್‌ ಔಟ್‌ಲುಕ್

ಇಂದು MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆ ಎರಡೂ ಕೂಡ ಇಳಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.01%% ನಷ್ಟು ಇಳಿಕೆಯಾಗಿ 79,019. ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.11% ನಷ್ಟು ಇಳಿಕೆಯಾಗಿ 91,504 ರೂಪಾಯಿ ವಹಿವಾಟು ನಡೆಸುತ್ತಿದೆ. ಈ ತಿಂಗಳು ಚಿನ್ನದ ಬೆಲೆಗಳು ಸಾಕ್ಟು ಏರಿಳೀತಗಳನ್ನ ಕಂಡಿವೆ. ಇದು ಹೂಡಿಕೆದಾರರಿಗೆ ಆತಂಕವನ್ನ ಸೃಷ್ಟಿ ಮಾಡಿದೆ. ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಬಡ್ಡಿ ದರಗಳು, ಸರ್ಕಾರಿ ನೀತಿಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ವರ್ಷದ ಮೊದಲ ತಿಂಗಳಿನಲ್ಲಿ ಸಾಕಷ್ಟು ಏರಿಳಿತಗಳನ್ನ ಗಮನಿಸುವಂತಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+