ಬೆಂಗಳೂರಿನಲ್ಲಿ ಚಿನ್ನದ ಬೆಲೆ, ಜನವರಿ 30: 24 ಕ್ಯಾರಟ್‌ 100 ಗ್ರಾಂ ಚಿನ್ನದ ಬೆಲೆ 1,700 ರೂ. ಏರಿಕೆ!

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಬೆಂಗಳೂರಿಗರಿಗೆ ನಿರಾಸೆಯಾಗಿದೆ. ನಿನ್ನೆಯಂತೆಯೇ ಇಂದು ಕೂಡ ಚಿನ್ನದ ದರ ಏರಿಕೆಯಾಗಿದೆ. ಜೊತೆಗೆ ಇಂದು ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದೆ. ಜಾಗತಿಕ ಉದ್ವಿಗ್ನತೆಗಳ ನಡುವೆ ಚಿನ್ನದ ಬೆಲೆ ಮಾತ್ರ ಗಗನಕ್ಕೇರುತ್ತಿದೆ. ಮದುವೆ, ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಚಿನ್ನದ ಬೇಡಿಕೆ ಕೂಡ ಹೆಚ್ಚಾಗ್ತಿದೆ. ಈ ಹಿನ್ನೆಲೆ ಚಿನ್ನದ ದರಗಳು ಕೂಡ ಏರಿಕೆಯಾಗ್ತಿವೆ. ಜೊತೆಗೆ ಯುಎಸ್‌ ಡಾಲರ್‌ ಬಲವರ್ಧನೆಯಿಂದಾಗಿ ಚಿನ್ನದ ದರಗಳು ಸಾಕಷ್ಟು ಏರಿಳಿತಗಳನ್ನ ಅನುಭವಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಗಳು ಮತ್ತೆ ಏರಿಕೆಯಾಗುವ ನಿರೀಕ್ಷೆ ಇದೆ.

ಜನವರಿ 30 ರಂದು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಇಂದು 150 ಏರಿಕೆಯಾಗಿ 76,100 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 170ರೂ. ಏರಿಕೆಯಾಗಿ 83,020ರೂ. ಆಗಿದೆ. ಬೆಂಗಳೂರಿನಲ್ಲಿ 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 130 ರೂ. ಏರಿಕೆಯಾಗಿ 62,270 ರೂ. ಆಗಿದೆ.

ಬೆಂಗಳೂರಿಗರಿಗೆ ನಿರಾಸೆ! ಮತ್ತೆ ಏರಿಕೆಯಾಯ್ತು ಚಿನ್ನದ ಬೆಲೆ!

ಹಾಗೆ 22 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,500 ರೂ. ಏರಿಕೆಯಾಗಿ 7,61,000 ರೂ. ಆಗಿದೆ. 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,700ರೂ. ಏರಿಕೆಯಾಗಿ 8,30,200 ರೂ. ಆಗಿದೆ. 18 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ 1,300ರೂ. ಏರಿಕೆಯಾಗಿ 6,22,700 ರೂ. ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರಗಳು

ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ಬೆಲೆ 2 ರೂ. ಏರಿಕೆಯಾಗಿ 98.50ರೂ. ಆಗಿದೆ. ಹಾಗೆ 1 ಕಿಲೋ ಗ್ರಾಂ ಬೆಳ್ಳಿ ಬೆಲೆ 2,000 ಏರಿಕೆಯಾಗಿ 98,500ರೂ. ಆಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರವಾಗಿದೆ . 22k ಮತ್ತು 24k ಚಿನ್ನದ ಬೆಲೆಗಳು ಎಷ್ಟಿವೆ ಎಂದು ತಿಳಿಯಿರಿ.

ಭಾರತದ ಕೆಲವು ಮೆಟ್ರೋಪಾಲಿಟನ್ ನಗರಗಳಲ್ಲಿನ ಚಿನ್ನದ ಬೆಲೆಗಳ ವಿವರ:

ಕ್ರಮ
ಸಂಖ್ಯೆ
ನಗರಗಳು24 ಕ್ಯಾರೆಟ್22 ಕ್ಯಾರೆಟ್
1ದೆಹಲಿರೂ.83,170ರೂ.76,250
2ಮುಂಬೈರೂ.83,020ರೂ.76,100
3ಚೆನ್ನೈರೂ.83,020ರೂ.76,100
5ಕೋಲ್ಕತ್ತಾರೂ.83,020ರೂ.76,100

ಬೆಂಗಳೂರಿನಲ್ಲಿ ಚಿನ್ನದ ಬೆಲೆ, ಜನವರಿ 29: 22 ಕ್ಯಾರಟ್‌ 100 ಗ್ರಾಂ ಚಿನ್ನದ ಬೆಲೆ 8,500 ರೂ. ಏರಿಕೆ!

MCX ಗೋಲ್ಡ್ ಔಟ್‌ಲುಕ್ ಮತ್ತು ಸಿಲ್ವರ್‌ ಔಟ್‌ಲುಕ್

MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.27% ನಷ್ಟು ಏರಿಕೆಯಾಗಿ 80,500 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.62% ನಷ್ಟು ಏರಿಕೆಯಾಗಿ 92,438 ರೂಪಾಯಿ ವಹಿವಾಟು ನಡೆಸುತ್ತಿದೆ.

ಸ್ಪಾಟ್‌ ಚಿನ್ನದ ಭವಿಷ್ಯ

ಸ್ಪಾಟ್‌ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಏರಿಕೆಯಾಗಿದೆ. ವರದಿ ಪ್ರಕಾರ ಸ್ಪಾಟ್‌ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.12% ಏರಿಕೆಯಾಗಿ 2,763.14 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.19% ಏರಿಕೆಯಾಗಿ 30.90 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್‌ ಬೆಲೆಯು ಪ್ರತಿ ಔನ್ಸ್‌ಗೆ 1.58% ಏರಿಕೆಯಾಗಿ 964.25 ಡಾಲರ್‌ ತಲುಪಿದೆ.

ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 0.93% ಏರಿಕೆಯಾಗಿ 974.50 ಡಾಲರ್‌ ತಲುಪಿದೆ. ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಈ ತಿಂಗಳಿನಲ್ಲಿ ಏರಿಳಿತಗಳನ್ನ ಗಮನಿಸುವಂತಾಯಿತು. ಹಳದಿ ಲೋಹಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗ್ತಿದೆ. ಈ ಹಿನ್ನೆಲೆ ಬೆಲೆಗಳು ಹೆಚ್ಚಾಗ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+