Gold Rate: ಭಾರವಾದ ಬಂಗಾರ..! ಚಿನ್ನದ ಬೆಲೆ ಸತತವಾಗಿ ಏರಿಕೆ...ಬೆಂಗಳೂರಿನಲ್ಲಿ ಇಂದಿನ ದರ ಎಷ್ಟಿದೆ ಎಂದು ಮೊದಲು ತಿಳಿದುಕೊಳ್ಳಿ

ನಾರಿಯರಿಗೇ ಶಾಕಿಂಗ್ ನ್ಯೂಸ್! ಸತತವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಹೌದು, ಚಿನ್ನ,ಬೆಳ್ಳಿ ಇಂದು ಗಗನಕ್ಕೇರಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್‌ನ್ನು ಚಿನ್ನದ ಮಾರುಕಟ್ಟೆ ನೀಡಿದೆ, ಬಂಗಾರ ಕೊಳ್ಳಲು ಪ್ಲಾನ್‌ ಮಾಡಡಿಕೊಂಡವರ ಆಸೆಗೆ ಬೆಲೆ ಏರಿಕೆ ತಣ್ಣೀರು ಎರಿಚಿದೆ. ಚಿನ್ನ ತನ್ನ ದಾಖಲೆಯ ಓಟವನ್ನು ಮತ್ತೆ ಮುಂದುವರಿಸಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಗಾಯದ ಮೇಲೆ ಬರೆ ಎಳೆದಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಏರಿಕೆಯತ್ತ ಸಾಗಿದೆ. ಹಾಗಿದ್ರೆ ಜೂನ್‌ 19 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಇಂದು ನೀವು ಚಿನ್ನದ ಮೇಲೆ ಹೂಡಿಕೆ ಮಾಡಲು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್‌ ಚಿನ್ನ 92,650 ರೂ.ಗಳು ಇದೆ.ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,01,080 ರೂ.ಇದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 1,700 ರೂ,ಗಳಷ್ಟು ಏರಿಕೆ ಕಂಡಿದೆ.

Gold Rate: ಭಾರವಾದ ಬಂಗಾರ..! ಚಿನ್ನದ ಬೆಲೆ ಸತತವಾಗಿ ಏರಿಕೆ

ಜೂನ್‌ 19 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 9,265 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ92,650 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 150 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 1,500 ರೂ.ಗಳಷ್ಟು ಏರಿಕೆಯಾಗಿ 9,26,500 ತಲುಪಿದೆ.

24 ಕ್ಯಾರೆಟ್‌ ಗೋಲ್ಡ್ ರೇಟ್

ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 10,108 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,01,080 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 170 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ10,10,800 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 1,700 ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನದ ಏರಿಕೆ ಕಂಡಿದೆ.1ಗ್ರಾಂ7,581 ರೂ.ಇದೆ.18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 75,810 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 7,58,100 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಜೂನ್‌ 19 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,12,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 112 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,120 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,200 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ ತಿಂಗಳಲ್ಲಿ ಏರಿಳಿತವನ್ನು ಕಂಡಿದೆ. ಜೂನ್‌ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ. 1,2,3,4ರಂದು ಚಿನ್ನದ ಬೆಲೆಗಳು ಏರಿಕೆ ಕಂಡಿವೆ. ತಿಂಗಳ ಮೊದಲ ಶನಿವಾರ ಭಾನುವಾರ ಯಥಾಸ್ಥಿತಿಯಲ್ಲಿ ಚಿನ್ನ ಇತ್ತು. ಜೂನ್‌ ತಿಂಗಳ 2ನೇ ವಾರದ ಮೊದಲು ದಿನ ಇರಿಳಿತ ಕಂಡ ಚಿನ್ನ ಇಂದು ಏರಿಕೆಯಾಗಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 9,265 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ10,108 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,581 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,265 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,108 ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,581 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,265 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,108 ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,581 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,265 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,108 ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,581 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,265 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,108 ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,581 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,265 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 10,108 ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ಜಾಗತಿಕ ಮಟ್ಟದಲ್ಲಿ ಸ್ಪಾಟ್ ಚಿನ್ನದ ಬೆಲೆಯು ಇಂದು ಪ್ರತಿ ಔನ್ಸ್‌ಗೆ $3,388.04 ರಷ್ಟಕ್ಕೆ ಏರಿಕೆಯಾಗಿದೆ. ಅಮೆರಿಕಾದ ಫ್ಯೂಚರ್ ಪ್ರತಿ ಔನ್ಸ್‌ಗೆ ಸುಮಾರು $3,406.50 ದರವನ್ನು ತಲುಪಿದೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+