ನಿಮ್ಮ 'ಚಿನ್ನಿ'ಗೆ ಚಿನ್ನ ಕೊಡಿಸಬಹುದು! ಯುಗಾದಿ ಹಬ್ಬಕ್ಕೂ ಮುನ್ನವೇ ಸಿಹಿಸುದ್ದಿ.. ಚಿನ್ನದ ಬೆಲೆ ಕೇಳಿದ್ರೆ ಖುಷಿ ಗ್ಯಾರಂಟಿ

ನಾರಿಮಣಿಯರಿಗೆ ಸಿಹಿ ಸುದ್ದಿ.. ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಬೆಲೆ ಕಡಿಮೆಯಾಗಿದೆ. ವಾರದ ಮೊದಲ ದಿನದಿಂದ ಏರಿಕೆ ಕಂಡಿದ ಚಿನ್ನ ಇದು ತನ್ನ ಓಟವನ್ನು ನಿಲ್ಲಿಸಿದೆ. ಚಿನ್ನ ಖರೀದಿ ಮಾಡುವವರಿಗೆ ಕೊಂಚ ರಿಲೀಫ್‌ ತಂದಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಇಳಿಕೆಯಾಗಿರುವುದರಿಂದ ಬೆಂಗಳೂರಿನ ಚಿನ್ನ ಕೊಳ್ಳವವ ಖುಷಿ ಹೆಚ್ಚಾಗಿದೆ.ಹಾಗಿದ್ರೆ ಮಾರ್ಚ್ 21 ರಂದು ಶುಕ್ರವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆ ಎರಡು ಕೂಡ ಕುಸಿತ ಕಂಡಿದೆ.ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್‌ ಚಿನ್ನ 82,700 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 90,220 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 440 ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ 4,400 ಕುಸಿತ ಕಂಡಿದೆ.

ನಿಮ್ಮ ಹೆಂಡ್ತಿಗೆ 'ಚಿನ್ನ' ಕೊಡಿಸಬಹುದು! ಬಂಗಾರದ ಬೆಲೆ ಕುಸಿತ

ಮಾರ್ಚ್ 21 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 8,270 ರೂ ಏರಿಕೆ ಕಂಡಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ82,700 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಹತ್ತು ರೂ.ಗಳ ಏರಿಕೆ ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ ನಾಲ್ಕು ಸಾವಿರ ರೂಪಾಯಿಗಳ ಇಳಿಕೆಯಾಗಿ 8,27,000 ರೂ.ಗಳು ತಲುಪಿದೆ.

Take a Poll

24 ಕ್ಯಾರೆಟ್‌ ಗೋಲ್ಡ್ ರೇಟ್

ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,022 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 90,220 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 440 ಇಳಿಕೆ ಕಂಡಿದೆ. ಇದಲ್ಲದೆ, 100 ಗ್ರಾಂ 24 ಕ್ಯಾರೆಟ್‌ ಚಿನ್ನ 9,02,200 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 4,400 ರೂ.ಗಳ ಇಳಿಕೆಯನ್ನು ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನ ಸಹ ಇಂದು ಇಳಿಕೆ ಕಂಡಿದೆ.1ಗ್ರಾಂ 6,767 ರೂ. ಇದೆ. 18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 67,670 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 6,76,700 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಕುಸಿತ ಕಂಡಿದೆ.

ಮಾರ್ಚ್ 21 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,03,000 ರೂಪಾಯಿಗಳು ವಾಹಿವಾಟುವಿದೆ. 2,100 ರೂಪಾಯಿಯ ಇಳಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 103 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,030 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ10,300 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 8 ರಿಂದ 16 ರವರೆಗೆ ಏರಿಕೆ ಕಂಡಿದ್ದು, 15 ರಿಂದ 11ರಂದು ಮಾತ್ರ ಇಳಿಕೆ ಕಂಡಿತ್ತು.ವಾರದ ಮೊದಲ ದಿನದಿಂದ ಏರಿಕೆ ಕಂಡಿದ ಚಿನ್ನ ಇಂದು ಇಳಿಕೆ ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 8,270 ರೂ. ಮತ್ತು 1 ಗ್ರಾಂ 24 ಕ್ಯಾರೆಟ್‌ ಚಿನ್ನ 9,022 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,767ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,270ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,022 ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,767ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,270ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,022 ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,767ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,270ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,022 ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,767ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,270ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,022 ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,767ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,270ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,022 ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ಸ್ಪಾಟ್ ಗೋಲ್ಡ್ ಬೆಲೆಯು ಇಂದು (ಮಾರ್ಚ್ 21, 2025) ಪ್ರತಿ ಔನ್ಸ್‌ಗೆ $3,034.09 ವಹಿವಾಟು ನಡೆಸಿದೆ. ಹಿಂದಿನ ದಿನದೊಂದಿಗೆ ಹೋಲಿಸಿದರೆ 0.3% ಇಳಿಕೆಯನ್ನು ಸೂಚಿಸುತ್ತದೆ. ಇದು ಚಿನ್ನದ ದರವು ಹಿಂದಿನ ದಿನದ ದಾಖಲೆಯ ಗರಿಷ್ಠ ದರವಾದ $3,057.21 ರಿಂದ ಸ್ವಲ್ಪ ಇಳಿಕೆಯಾಗಿದೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ.

ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆಯಿದೆ.

ಈ ವಾರದ ಮೊದಲ ದಿನದಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇತ್ತು.ಇಂದು ಚಿನ್ನ,ಬೆಳ್ಳಿ ಎರಡು ಇಳಿಕೆಯಾಗಿರುವುದರಿಂದ ಯುಗಾದಿ ಹಬ್ಬಕ್ಕೆ ಚಿನ್ನ ಖರೀದಿಸಲು ಈ ದಿನವೇ ಸೂಕ್ತ ಎಂದೇ ಹೇಳಬಹುದು. ಯಾಕೆಂದರೆ ಯಾವಾಗ ಚಿನ್ನ ಏರಿಕೆಯಾಗುತ್ತದೆ ಎಮದು ಹೇಳವುದಕ್ಕೆ ಹಾಗುವುದಿಲ್ಲ. ಹಬ್ಬಕ್ಕೆ ಚಿನ್ನ ಇಲ್ಲದೇ ಇದ್ದರೆ ಹಬ್ಬಕ್ಕೆ ಕಳೆ ಇಲ್ಲದ ರೀತಿಯಾಗುತ್ತದೆ. ಮದುವೆ ಸೀಸನ್‌ಗಳು ಸಹ ಹತ್ತಿರವಿರುವುದರಿಮದ ಮುಂದಿನ ದಿನಮಾನಗಲಲ್ಲಿ ಚಿನ್ನ ಏರಿಕೆಯಗಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+