ಮಹಿಳೆಯರಿಗೆ ಸಿಹಿ ಸುದ್ದಿ.. ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಬೆಲೆ ಕುಸಿತ ಕಂಡಿದೆ. ವಾರದ ಮೊದಲ ದಿನವೇ ಚಿನ್ನ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು,ಚಿನ್ನ ಖರೀದಿ ಮಾಡುವವರಿಗೆ ಕೊಂಚ ರಿಲೀಫ್ ತಂದಿದೆ. ಬೆಲೆ ಇಳಿಕೆಯಿಂದಾಗಿ ಬೆಂಗಳೂರಿಗರು ನಿರಾಳರಾಗಿದ್ದಾರೆ. ತಿಂಗಳಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದ ಚಿನ್ನ ಇದು ತನ್ನ ಓಟವನ್ನು ನಿಲ್ಲಿಸಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ.ಯುಗಾದಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಕೊಳ್ಳವವರ ಖುಷಿ ಹೆಚ್ಚಾಗಿದೆ.ಹಾಗಿದ್ರೆ ಮಾರ್ಚ್ 24 ರಂದು ಸೋಮವಾರದಂದು ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ ಕುಸಿತ ಕಂಡಿದೆ.ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ82,150 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 89,620 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ 160 ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ1600 ಕುಸಿತ ಕಂಡಿದೆ.

ಮಾರ್ಚ್ 24 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,215 ರೂ ಇಳಿಕೆ ಕಂಡಿದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ82,150 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರ ಐವತ್ತು ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,500 ಇಳಿಕೆಯಾಗಿ 8,21,500 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 8,962 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 89,620 ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 160 ಇಳಿಕೆ ಕಂಡಿದೆ. ಇದಲ್ಲದೆ, 100 ಗ್ರಾಂ 24 ಕ್ಯಾರೆಟ್ ಚಿನ್ನ 8,96,200 ರೂ.ಗಳ ವಾಹಿವಾಟುವಿದೆ. ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 1,600 ರೂ.ಗಳ ಇಳಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಇಳಿಕೆ ಕಂಡಿದೆ.1ಗ್ರಾಂ 6,722 ರೂ. ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ67,220 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 6,72,200 ರೂ ಇದೆ. ಇಂದು ಚಿನ್ನದ ಬೆಲೆ ಇಂದು ಕುಸಿತ ಕಂಡಿದೆ.
ಮಾರ್ಚ್ 24 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,01,000ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂಗೆ ಬೆಳ್ಳಿಗೆ 101 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 1,010 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ10,100 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 8 ರಿಂದ 16 ರವರೆಗೆ ಏರಿಕೆ ಕಂಡಿದ್ದು, 15 ರಿಂದ 11ರಂದು ಮಾತ್ರ ಇಳಿಕೆ ಕಂಡಿತ್ತು.ವಾರದ ಮೊದಲ ದಿನದಿಂದ ಏರಿಕೆ ಕಂಡಿದ ಚಿನ್ನ ಸತತ ಮೂರು ದಿನಗಳಿಂದ ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,215 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ8,962 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,722 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,215 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,962 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,722 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,215 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,962 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,722 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,215 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,962 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,722 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,215 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,962 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 6,722 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,215 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 8,962 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿ ಪ್ರಕಾರ ಮಾರ್ಚ್ 24ರಂದು ಸ್ಪಾಟ್ ಚಿನ್ನ0302 GMT ವೇಳೆಗೆ ಪ್ರತಿ ಔನ್ಸ್‌ಗೆ $3,016.43 ಗೆ ಇಳಿದಿದೆ.ಇದು 0.2% ಕುಸಿತವಾಗಿದೆ. ಹಾಗೆಯೇ, ಯು.ಎಸ್. ಗೋಲ್ಡ್ ಫ್ಯೂಚರ್ಸ್ ದರ $3,020.80 ನಷ್ಟವಿಲ್ಲದ ಮಟ್ಟದಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಈ ಕುಸಿತದ ಪ್ರಮುಖ ಕಾರಣವೆಂದರೆ, ಹೂಡಿಕೆದಾರರು ಮುಂದಿನ ಆರ್ಥಿಕ ಬೆಳವಣಿಗೆಗಳ ನಿರೀಕ್ಷೆಯಲ್ಲಿ ತಯಾರಿ ನಡೆಸುತ್ತಿದ್ದಾರೆ ಮತ್ತು ಬಡ್ಡಿದರ ಬದಲಾವಣೆಯ ಕುರಿತು ಸ್ಪಷ್ಟತೆ ನಿರೀಕ್ಷಿಸುತ್ತಿದ್ದಾರೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ.
ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಇಳಿಕೆಗೆ ಕಾರಣ
ಹಬ್ಬದ ಸೀಸನ್ ಇರುವುದರಿಂದ ಭಾರತೀಯ ಚಿಲ್ಲರೆ ಮಾರುಕಟ್ಟೆಗಳು ಹೂಡಿಕೆಯಲ್ಲಿ ಹಿದೇಟು ಹಾಕುತ್ತಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಇಳಿಕೆಯಾಗಿರಬಹುದು.


Click it and Unblock the Notifications