Bengaluru Gold Rate: ನಾರಿಯರಿಗೆ ಸಿಹಿ ಸುದ್ದಿ ಇದು! ಭಾರೀ ಇಳಿಕೆಯಾಯ್ತು ಚಿನ್ನದ ದರ. ಹೌದು, ಸತತ ಒಂದು ವಾರದದಿಂದ ಗಗನಕ್ಕೇರಿದ ಚಿನ್ನದ ಬೆಲೆ(Gold Rate) ಇಂದು ಕುಸಿತ ಕಂಡಿದೆ. ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯತ್ತ ಮುಖ ಮಾಡಿದೆ. ದರ ಇಳಿಕೆಯಿಂದ ಆಭರಣ ಪ್ರಿಯರಿಗೆ ಕೊಂಚ ರಿಲೀಫ್ ಸಿಕ್ಕಿದೆ.ಚಿನ್ನದ ಜೊತೆಗೆ ಬೆಳ್ಳಿ(Silver) ಕೂಡ ಇಳಿಕೆಯಾಗಿದೆ.ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರು ಇಂದು ಚಿನ್ನ ಖರೀದಿ ಮಾಡುವುದು ಉತ್ತಮ. ಹಾಗಿದ್ರೆ ಮೇ. 23 ರಂದು ಶುಕ್ರವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ89,400 ರೂ.ಗಳು ಇದೆ.ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 97,530 ರೂ.ಇದೆ.ಅದರಲ್ಲೂ100 ಗ್ರಾಂ ಅಪರಂಜಿ ಚಿನ್ನ ಇಂದು 3,800 ರೂ,ಗಳಷ್ಟು ಇಳಿಕೆ ಕಂಡಿದೆ.

ಮೇ.23 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,940 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ89,400 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 100 ರೂ.ಗಳ ಇಳಿಕೆ ಕಂಡಿದೆ.100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 3,500 ರೂ.ಗಳಷ್ಟು ಇಳಿಕೆಯಾಗಿ 8,94,000 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,753 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 97,530 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 380 ರೂ.ಗಳಷ್ಟು ಇಳಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,75,300 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 3,800 ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನದ ಇಳಿಕೆ ಕಂಡಿದೆ.1ಗ್ರಾಂ7,315 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 73,150 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,31,500 ರೂ.ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ಮೇ. 23 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,00,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಸಾವಿರ ರೂಪಾಯಿಗಳ ಇಳಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 100 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,000 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,000 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಏಪಿಲ್ 21 ಹಾಗೂ 22 ಏರಿಕೆ. 23, 24,26, 28 ರಂದು ಭಾರೀ ಪ್ರಮಾಣದಲ್ಲಿ ಏರಿಕೆ. 25,27 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು.ಮೇ 1ರಿಂದ ಚಿನ್ನದ ಬೆಲೆ ಇಳಿಕೆಯಾಗಿದೆ. ಚಿನ್ನ ನಿನ್ನೆ ಹಾಗೂ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.ಇಂದು ಇಳಿಕೆಯನ್ನು ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,940 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,753 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,315 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,753 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,368 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,005 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,824 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,368 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,005 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,824 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,368 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,005 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,824 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,368 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,005 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,824 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇತ್ತೀಚಿನ ರಾಯಿಟರ್ಸ್ ವರದಿ ಪ್ರಕಾರ, ಯುಎಸ್ ಚಿನ್ನದ ಫ್ಯೂಚರ್ಸ್ 0408 GMT ಯಲ್ಲಿ ಶೇ.0.7 ಏರಿಕೆಯಾಗಿ $3,307.30 ಕ್ಕೆ ತಲುಪಿದೆ, ಆದರೆ ಸ್ಪಾಟ್ ಚಿನ್ನವು ಶೇ. 0.5 ಏರಿಕೆಯಾಗಿ $3,305.39 ಔನ್ಸ್‌ಗೆ ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು.
ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಇಳಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.
ಚಿನ್ನದ ಬೆಲೆಗಳು ಮುಂದಿನ ದಿಮಮಾನಗಳಲ್ಲಿ ಇಳಿಕೆಯಾಗುತ್ತಾ ಅಥವಾ ಇಲ್ಲವೇ ಎಂಬುವುದನ್ನು ಕಾದುನೋಡಬೇಕಿದೆ.


Click it and Unblock the Notifications