ನಾರಿಮಣಿಯರಿಗೆ ಸಿಹಿ ಸುದ್ದಿ.... ದಿಡೀರನೆ ಇಳಿಕೆಯಾದ ಚಿನ್ನ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಬಂಗಾರ ಬೆಲೆಗಳು ಇಳಿಮುಖಗೊಂಡಿದೆ. ಆಭರಣ ಪ್ರಿಯರಿಗೆ ರಿಲೀಫ್ ಕೊಟ್ಟಿದೆ. ಬೆಲೆ ಇಳಿಕೆ ಮಹಿಳೆಯರ ಸಂತಸವನ್ನು ದುಪ್ಪಟ್ಟು ಮಾಡಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ಕುಸಿತ ಕಂಡಿದೆ. ಹಾಗಿದ್ರೆ ಮೇ.29 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ88,950 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 97,040 ರೂ.ಗಳು ಇದ್ದು,ನಿನ್ನೆಗೆ ಹೋಲಿಕೆ ಮಾಡಿದ್ರೆ440 ರೂ. ಗಳ ಇಳಿಕೆ ಕಂಡಿದೆ.ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 4,400ರೂ,ಗಳ ಕುಸಿತವನ್ನು ಕಂಡಿದೆ.

ಮೇ. 29 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,895 ರೂ.ಗಳ ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ88,950 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 400 ರೂಪಾಯಿಗಳ ಇಳಿಕೆಯನ್ನು ಕಂಡಿದೆ.ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 4,000 ರೂ.ಗಳಷ್ಟ ಇಳಿಕೆಯಾಗಿ 8,89,500 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,704 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 97,040ರೂ. ಇದ್ದು, ನಿನ್ನೆಗೆ ಹೋಲಿಕೆ ಮಾಡಿದ್ದರೆ ರೂಪಾಯಿಗಳ 440 ರೂ.ಗಳ ಇಳಿಕೆ ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,70,400 ರೂ.ಗಳ ವಾಹಿವಾಟುವಿದೆ.ಇದೇ ಚಿನ್ನವನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 4,400ರೂ.ಗಳ ಇಳಿಕೆ
ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ ಸಹ ಇಂದು ಇಳಿಕೆ ಕಂಡಿದೆ. 1ಗ್ರಾಂ 7,278 ರೂ.ಇದೆ. 18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 72,780 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,27,800 ರೂ ಇದೆ.ಇಂದು ಚಿನ್ನದ ಬೆಲೆ ಇಳಿಕೆ ಕಂಡಿದೆ.
ಮೇ.29 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಇಂದು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,900 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ನೂರು ರೂಪಾಯಿಗಳ ಇಳಿಕೆಯನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 99.90 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 999 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ9,990 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಕೊಂಚ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ 17, 18, 26 ಯಥಾಸ್ಥಿತಿಯಲ್ಲಿ ಇದೆ. 19, 21,22,24,ರಂದು ಚಿನ್ನದ ಬೆಲೆ ಏರಿಕೆಯಾಗಿತ್ತು. ಇನ್ನೂ ಉಳಿದ ದಿನಗಳಲ್ಲಿ ಚಿನ್ನದ ದರಗಳು ಇಳಿಯತ್ತ ಮುಖ ಮಾಡಿದ್ದವು. ಇಂದು ಕೂಡ ಚಿನ್ನದ ಬೆಲೆ ಇಳಿಕೆಯನ್ನು ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,895 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,704 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,278 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,895 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,704 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,278 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,895 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,704 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,278 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,895 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,704 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,278 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,895 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,704 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,278 ರೂ, ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,895 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,704 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇತ್ತೀಚಿನ ರಾಯಿಟರ್ಸ್ ವರದಿಯ ಪ್ರಕಾರ, 0522 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ. 0.3ಇಳಿಕೆಯಾಗಿ $3,346.55 ಕ್ಕೆ ತಲುಪಿದೆ. US ಚಿನ್ನದ ಭವಿಷ್ಯವು ಶೇ. 0.6 ಇಳಿಕೆಯಾಗಿ $3,345.80 ಕ್ಕೆ ತಲುಪಿದೆ. ಸ್ಪಾಟ್ ಬೆಳ್ಳಿ ಶೇ. 0.1 ಏರಿಕೆಯಾಗಿ ಔನ್ಸ್‌ಗೆ $33.52 ಕ್ಕೆ ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ.
ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಇಳಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.


Click it and Unblock the Notifications