ಚಿನ್ನದ ಬೆಲೆ ಇಂದು ದಿಡೀರ್ ಏರಿಕೆಯಾಗಿದೆ. ಆಭರಣ ಪ್ರಿಯರಿಗೆ ಬಿಗ್ ಶಾಕ್‌ನ್ನು ಚಿನ್ನದ ಮಾರುಕಟ್ಟೆ ನೀಡಿದೆ.ಚಿನ್ನ ತನ್ನ ದಾಖಲೆಯ ಓಟವನ್ನು ವಾರದ ಮೊದಲ ದಿನವೇ ಮುಂದುವರಿಸಿದೆ.ಚಿನ್ನದ ಜೊತೆಗೆ ಬೆಳ್ಳಿ ಕೂಡ ದುಬಾರಿಯಾಗಿದೆ.ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಜೇಬಿಗೆ ಕತ್ತರಿ ಬಿದ್ದಿದೆ. ಹೂಡಿಕೆದಾರರಿಗೆ ನಿರಾಸೆಯಾಗಿದೆ. ಹಾಗಿದ್ರೆ ಮೇ.19 ರಂದು ಸೋಮವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ 87,550 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 95,510 ರೂ.ಇದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 3,800 ರೂ,ಗಳಷ್ಟು ಇದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಮೇ.19 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,755 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ87,550 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 350 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 3,500 ರೂ.ಗಳಷ್ಟು ಏರಿಕೆಯಾಗಿ 8,75,500 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,551 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ10 ಗ್ರಾಂಗೆ 95,510 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 380 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,55,100 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 3,800 ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನದ ಏರಿಕೆ ಕಂಡಿದೆ.1ಗ್ರಾಂ 7,163 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ71,630 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ 7,16,300 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಮೇ.19 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 98,000 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 98 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 980 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,800 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಜಿಗಿತ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ.5,6,7,8 ರಂದು ಚಿನ್ನದ ಬೆಲೆ ಏರಿಕೆಯಾಗಿದೆ. ಇನ್ನೂ ಮೇ. 9,12,14ರಂದು ಇಳಿಕೆಯಾಗಿದೆ. ಮೇ.11ರಂದು ಸ್ಥಿರವಾಗಿದೆ.ಇಂದು ಚಿನ್ನದ ಬೆಲೆ ಕುಸಿತ ಕಂಡಿದೆ.ನಿನ್ನೆ ಇಳಿಕೆಯಾಗಿದ್ದ ಚಿನ್ನ ಇಂದು ದಿಢೀರ್ ಏರಿಕೆಯಾಗಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,755 ರೂ. ಮತ್ತು1 ಗ್ರಾಂ 24 ಕ್ಯಾರೆಟ್ ಚಿನ್ನ,9,551ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,163 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,163 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,163 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,163 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,163 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,755 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,551 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ (31.10 ಗ್ರಾಂ) $3,200ರೂ ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುವ ಅಮೂಲ್ಯ ವಸ್ತು ಎಂದರೆ ಚಿನ್ನ ಮಾತ್ರ. ಹಳದಿ ಲೋಹಕ್ಕೆ ಭಾರತಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ.
ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಭಾರತ-ಪಾಕ್ ಕದನ ವಿರಾಮ,ಟ್ರಂಪ್ ಶುಲ್ಕ ಹೆಚ್ಚಳ,ಹಬ್ಬದ ಸೀಸನ್‌ನಿಂದ ಚಿನ್ನದ ಬೆಲೆ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ.ಚಿನ್ನ ಕೊಳ್ಳಲು ಖರೀದಿದಾರು ಹಿಂದೇಟು ಆಗುತ್ತಿದ್ದಾರೆ.
ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಅಥವಾ ಸ್ಥಿರವಾಗಿ ಉಳಿದುಕೊಳ್ಳತ್ತಾ ಎಂದು ಎಂಬುವುದನ್ನು ಕಾದುನೋಡಬೇಕಿದೆ.


Click it and Unblock the Notifications