Gold Rate: 'ಚಿನ್ನ' ನೀನಿನ್ನು ಬೇಡ! 1 ಲಕ್ಷ ಸಮೀಪಕ್ಕೆ ಬಂಗಾರ..ಬೆಳ್ಳಿ ದರ 1,03,990.. ಬೆಂಗಳೂರಲ್ಲಿ ಎಷ್ಟಿದೆ ?

Bengaluru Gold Rate Today: ಮಹಿಳೆಯರಿಗೆ ಬಂಗಾರದ ಸತತವಾಗಿ ನಾಲ್ಕು ದಿನಗಳಿಂದ ಶಾಕ್‌ ಮೇಲೆ ಶಾಕ್‌ ನೀಡುತ್ತಲೇ ಇದೆ. ಚಿನ್ನ ಖರೀದಿ ಮಾಡಬೇಕು ಎಂದು ಪ್ಲಾನ್‌ ಮಾಡಿಕೊಂಡವರ ಆಸೆಗೆ ಬೆಲೆ ಏರಿಕೆ ತಣ್ಣೀರು ಎರಚಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಗಳು ಕೂಡ ಏರಿಕೆ ಕಂಡಿವೆ. ಹೂಡಿಕೆದಾರಿಗೆ ಚಿನ್ನದ ಮೇಲೆ ವ್ಯಾಮೋಹ ಮಾತ್ರ ಕಡಿಮೆಯಾಗುತ್ತಿಲ್ಲ. ಚಿನ್ನ ಮತ್ತು ಭಾರತದ ವ್ಯಾಪಾರ ಯುದ್ದದ ನಡುವೆ ಚಿನ್ನದ ಬೆಲೆಗಳು ಏರಿಕೆ ಕಾಣುತ್ತಿದೆ. ಏರಿಕೆಯಾದ್ದರೂ ಕೂಡ ಚಿನ್ನ ಹೂಡಿಕೆಯತ್ತ ಹೂಡಿಕೆದಾರು ಮುಖ ಮಾಡಿದ್ದಾರೆ. ಆದರೆ ಬೆಲೆ ಏರಿಕೆಯಿಂದ ಗ್ರಾಹಕರು ಚಿನ್ನ ಖದೀದಿಗೆ ಹಿಂದೇಟು ಹಾಕುತ್ತಿದ್ಧಾರೆ. ಹಾಗಿದ್ರೆ ಜೂನ್‌. 5 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್‌ ಚಿನ್ನ91,300 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 99,600 ರೂ.ಇದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 1,100ರೂ,ಗಳಷ್ಟು ಏರಿಕೆಯಾಗಿದೆ.

Gold Rate: 'ಚಿನ್ನ' ನೀನಿನ್ನು ಬೇಡ! 1 ಲಕ್ಷ ಸಮೀಪಕ್ಕೆ ಬಂಗಾರ

ಜೂನ್ 5ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 9,130 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ91,300 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 400 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 4,000ರೂ.ಗಳಷ್ಟು ಏರಿಕೆಯಾಗಿ 9,13,000ರೂ.ಗಳು ತಲುಪಿದೆ.

24 ಕ್ಯಾರೆಟ್‌ ಗೋಲ್ಡ್ ರೇಟ್

ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,960 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 99,600 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 240 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ 9,96,000 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 4,300 ರೂ.ಗಳಷ್ಟು ಏರಿಕೆ ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನದ ಏರಿಕೆ ಕಂಡಿದೆ.1 ಗ್ರಾಂ 7,470 ರೂ.ಇದೆ.18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ 74,700 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 7,47,000 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಜೂನ್ 5ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,04,000
ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಎರಡು ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ104 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ1,040 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ10,400 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಗಳು ಭಾರೀ ಜಿಗಿತವನ್ನು ಕಂಡಿವೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮೇ ತಿಂಗಳಲ್ಲಿ ಏರಿಳಿತವನ್ನು ಕಂಡಿದೆ. ಜೂನ್‌ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ. 1,2,3,4ರಂದು ಚಿನ್ನದ ಬೆಲೆಗಳು ಏರಿಕೆ ಕಂಡಿವೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 9,130 ರೂ. ಮತ್ತು1 ಗ್ರಾಂ 24 ಕ್ಯಾರೆಟ್‌ ಚಿನ್ನ9,960 ರೂ.ಗಳ ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ

ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 ರೂ. ಇದೆ. 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 ರೂ.ಗಳು ಇದೆ. 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,470 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,130 24k ಪ್ರತಿ ಗ್ರಾಂ ಚಿನ್ನದ ಬೆಲೆ 9,960ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?

ರಾಯಿಟರ್ಸ್ ಇತ್ತೀಚಿನ ಚಿನ್ನದ ವರದಿಯ ಪ್ರಕಾರ 06:06 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ. 1.2 ಏರಿಕೆಯಾಗಿ 3,326.45 USD ಗಳಿಗೆ ತಲುಪಿದೆ. US ಚಿನ್ನದ ಭವಿಷ್ಯವು ಶೇ. 1.1ಏರಿಕೆಯಾಗಿ 3,351 USD ಗಳಿಗೆ ತಲುಪಿದೆ. ಸ್ಪಾಟ್ ಬೆಳ್ಳಿ ಶೇ. 0.6 ಏರಿಕೆಯಾಗಿ 33.16 USD ಗಳಿಗೆ ತಲುಪಿದೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

ಚಿನ್ನ ಬೆಲೆ ಏರಿಕೆಗೆ ಕಾರಣ

ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+