ಅಕ್ಷಯ ತೃತೀಯದಂದು(Akshaya Tritiya) ಬಂಗಾರ(Gold rate) ಖರೀದಿ ಮಾಡಬೇಕೆಂಬುವುದು ಕನಸಿನ ಮಾತು! ಹೌದು, ಚಿನ್ನದ ದರ ಮತ್ತೆ ಗಗನಕ್ಕೇರಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ಅಕ್ಷಯ ತೃತೀಯ ಎಫೆಕ್ಟ್‌ನಿಂದಾಗಿ ಬಂಗಾರ ತನ್ನ ದಾಖಲೆಯ ಓಟವನ್ನು ಮತ್ತೆ ಮುಂದುವರಿಸಿದೆ. ಚಿನ್ನ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಗಾಯದ ಮೇಲೆ ಬರೆ ಎಳೆದಿದೆ. ಇತ್ತ ಚಿನ್ನ ಮತ್ತೆ ದರದಲ್ಲಿ ದಾಖಲೆ ಬರೆಯಲು ಸಿದ್ದವಾದರೆ, ಮತ್ತೊಂದೆಡೆ ಬೆಳ್ಳಿ ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದೆ. ನೀವು ಅಕ್ಷಯ ತೃತೀಯ ಬೆಳ್ಳಿ ಕೊಳ್ಳಲು ಇದು ಬೆಸ್ಟ್ ಟೈಮ್. ಹಾಗಿದ್ರೆ ಏಪ್ರಿಲ್ 29 ರಂದು ಮಂಗಳವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ (Bengaluru gold rate) ಹೇಗಿದೆ? ಒಂದು ಕೆಜಿ ಬೆಳ್ಳಿ ಬೆಲೆ(silver rate) ಎಷ್ಟು? ಎಂಬ ಬಗ್ಗೆ ಇಲ್ಲಿದೆ ಫೂಲ್ ಡೀಟೈಲ್ಸ್
ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ 89,800 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 97,970 ರೂ.ಗಳು ಇದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 4,400 ರೂ,ಗಳಷ್ಟು ಜಿಗಿತ ಕಂಡಿದೆ.

ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,980 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ 89,800 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 400 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 4,000 ರೂ.ಗಳಷ್ಟು ಏರಿಕೆಯಾಗಿ 8,98,000 ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,797 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 97,970
ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 440 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,79,700 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 4,400 ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನದ ಏರಿಕೆ ಕಂಡಿದೆ.1ಗ್ರಾಂ7,348 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ73,480 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ7,34,800 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಏಪ್ರಿಲ್ 29 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಗಳು ಯಥಾಸ್ಥಿತಿಯಲ್ಲಿ ಇವೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,00,500 ರೂಪಾಯಿಗಳು ವಾಹಿವಾಟುವಿದೆ.ಒಂದು ಗ್ರಾಂಗೆ ಬೆಳ್ಳಿಗೆ 100.50 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,005 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,050 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಇಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಏರಿಕೆ ಕಂಡಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು. ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದು ಚಿನ್ನದ ಬೆಲೆ ಇಂದು ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡಿದೆ.10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,980 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ9,797 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,348ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,980 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,797 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,348ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,980 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,797 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,348ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,980 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,797 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,348ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,980 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,797 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,348ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,980 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,797 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್ ವರದಿಯ ಪ್ರಕಾರ ಏಪ್ರಿಲ್ 29ರಂದು ಸ್ಪಾಟ್ ಚಿನ್ನದ ಬೆಲೆಯು 0425 ವೇಳೆಗೆ ಶೇ. 0.8 ಕುಸಿತ ಕಂಡಿದ್ದು, ಪ್ರತಿ ಔನ್ಸ್‌ಗೆ $3,314.99ರಷ್ಟು ವಹಿವಾಟುವನ್ನು ತಲುಪಿದೆ.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಏರಿಕೆಯಾಗಲು ಕಾರಣವೇನು.?
ಅಕ್ಷಯ ತೃತೀಯದಲ್ಲಿ ಚಿನ್ನವನ್ನು ಖರೀದಿ ಮಾಡಿದ್ರೆ ಒಳಿತು ಆಗುತ್ತದೆ ಎಂಬ ನಂಬಿಕೆ ಇದೆ. ಆದರಿಂದ ಜನರು ಹೆಚ್ಚಾಗಿ ಈ ದಿನ ಚಿನ್ನವನ್ನು ಕೊಂಡುಕೊಳ್ಳಲುತ್ತಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.


Click it and Unblock the Notifications