ಚಿನ್ನದ ಬೆಲೆ ದಿನೇದಿನೆ ಏರಿಕೆಯಾಗುತ್ತಿದ್ದು, ವಾರದ ಮೊದಲ ದಿನವೇ ಆಭರಣ ಖರೀದಿದಾರರಿಗೆ ಶಾಕ್ ನೀಡುತ್ತಿದೆ. ಚಿನ್ನದ ಮಾರುಕಟ್ಟೆಯಲ್ಲಿ ಗೋಲ್ಡ್ ರೇಟ್ ಗಗನಕೇರುತ್ತಿದೆ. ಅದರೆ ಬೆಳ್ಳಿಯ ದರ ಯಥಾಸ್ಥಿತಿಯಲ್ಲಿ ಇದೆ. ಡಾಲರ್ ಸೂಚ್ಯಂಕದ ಕುಸಿತ ಮತ್ತು ವ್ಯಾಪಾರ ಯುದ್ಧದ ನಂತರ, ಸುರಕ್ಷಿತ ತಾಣಗಳ ಬೇಡಿಕೆ ಹೆಚ್ಚಾಗಿದೆ.ಬಹು ದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ. ಹಾಗಿದ್ರೆ, ಭಾರತದಲ್ಲಿ ಸೋಮವಾರ ( ಫೆ.10) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೌದು,ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 79,800 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 87,060 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಹತ್ತು ಗ್ರಾಂ ಚಿನ್ನ ಬೆಲೆ 390 ರೂ.ಗಳ ಏರಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,980 ರೂಪಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,706 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ79,800 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 87,060 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
ಇನ್ನೂ100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,98,000 ರೂ.ಗಳು ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,70,600 ರೂಪಾಯಿ ಇದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 3,900 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 65,290 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದೆ.ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,500 ರೂಪಾಯಿಗಳು ವಾಹಿವಾಟುವಿದ್ದು, ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 99.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 995 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,950ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ದಿನದ ಮಧ್ಯಭಾಗದಲ್ಲಿ ಪ್ರಮುಖ 85000 ಮಟ್ಟವನ್ನು ತಲುಪಿತು. ಮತ್ತು ದೈನಂದಿನ ಚಾರ್ಟ್‌ನಲ್ಲಿ ಬುಲಿಶ್ ಕ್ಯಾಂಡಲ್ ಅನ್ನು ರೂಪಿಸಿತು.ಇತ್ತೀಚಿನ ಬೆಲೆ ಕ್ರಮವು ಬಲವಾದ ಖರೀದಿ ಆಸಕ್ತಿಯನ್ನು ಸ್ಪಷ್ಟವಾಗಿ ಚಿತ್ರಿಸುತ್ತದೆ ಏಕೆಂದರೆ ಸರಕು ನಿರಂತರವಾಗಿ ದೈನಂದಿನ ಚಾರ್ಟ್‌ನಲ್ಲಿ ಹೆಚ್ಚಿನ ಗರಿಷ್ಠ ಮತ್ತು ಹೆಚ್ಚಿನ ಕನಿಷ್ಠಗಳನ್ನು ರೂಪಿಸುತ್ತಿದೆ.
MCX ಗೋಲ್ಡ್ 85000 ಕ್ಕಿಂತ ಹೆಚ್ಚಾದರೆ, ಅದು 85500/85800 ಮಟ್ಟಗಳ ಕಡೆಗೆ ಮುನ್ನಡೆಯಬಹುದು. ಇದಕ್ಕೆ ವಿರುದ್ಧವಾಗಿ, ಬೆಂಬಲವು 84450/84000 ಮಟ್ಟಗಳಲ್ಲಿ ಕಂಡುಬರುತ್ತದೆ ಮತ್ತು 84000 ಕ್ಕಿಂತ ಕಡಿಮೆ ಕುಸಿತವು ಲಾಭದ ಬುಕಿಂಗ್ ಅನ್ನು ಪ್ರಚೋದಿಸಬಹುದು. ಇದು 83800/83500 ಮಟ್ಟಗಳ ಕಡೆಗೆ ಕುಸಿತಕ್ಕೆ ಕಾರಣವಾಗಬಹುದು. ಸೂಚ್ಯಂಕವು ಹೆಚ್ಚಿನ ಚಂಚಲತೆಗೆ ಸಾಕ್ಷಿಯಾಗಬಹುದಾದ ನಿರ್ಣಾಯಕ ವಲಯದಲ್ಲಿ ವಹಿವಾಟು ನಡೆಸುತ್ತಿರುವುದರಿಂದ ವ್ಯಾಪಾರಿಗಳು ಬಿಗಿಯಾದ ಸ್ಟಾಪ್ ನಷ್ಟಗಳನ್ನು ಕಾಯ್ದುಕೊಳ್ಳಲು ಸೂಚಿಸಲಾಗಿದೆ ಎಂದು ವೇ2ವೆಲ್ತ್ ಬ್ರೋಕರ್ಸ್ ಪ್ರೈ. ಲಿಮಿಟೆಡ್‌ನ ತಾಂತ್ರಿಕ ಸಂಶೋಧನೆ ಹೇಳಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಸ್ಪಾಟ್ ಚಿನ್ನವು ಶುಕ್ರವಾರ $2,886.62 ರ ಹೊಸ ಗರಿಷ್ಠ ಮಟ್ಟವನ್ನು ತಲುಪಿದ ನಂತರ,ಸೋಮವಾರ 0403 GMT ಯ ಹೊತ್ತಿಗೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ.0.5 ಏರಿಕೆಯಾಗಿ $2,875.79 ಕ್ಕೆ ತಲುಪಿತು, ಆದರೆ US ಚಿನ್ನದ ಭವಿಷ್ಯವು ಶೇ.0.5 ಏರಿಕೆಯಾಗಿ $2,902.40 ಕ್ಕೆ ತಲುಪಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಪ್ಲಾಟಿನಂ ಶೇ.0.1 ಏರಿಕೆಯಾಗಿ $977.60 ಕ್ಕೆ ತಲುಪಿದ್ದರೆ, ಸ್ಪಾಟ್ ಶೇ.ಬೆಳ್ಳಿ 0.6 ಏರಿಕೆಯಾಗಿ ಔನ್ಸ್‌ಗೆ $31.99 ಕ್ಕೆ ತಲುಪಿದೆ. ಪಲ್ಲಾಡಿಯಮ್ ಶೇ.0.1ಏರಿಕೆಯಾಗಿ $966.10 ಕ್ಕೆ ತಲುಪಿದೆ.
ವಿವಿಧ ನಗರಗಳಲ್ಲಿರುವ ಗೋಲ್ಡ್ ರೇಟ್ ವಿವರ
ನಗರ 22ಕ್ಯಾರೆಟ್ 24K ಕ್ಯಾರೆಟ್
ಬೆಂಗಳೂರು 7,980 8,706
ಚೆನ್ನೈ 7,980 8,706
ಮುಂಬೈ7,980 8,706
ದೆಹಲಿ 7,995 8,721
ಕೋಲ್ಕತಾ7,980 8,706
ಹೈದರಾಬಾದ್ 7,980 8,706
ಪುಣೆ7,980 8,706
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)
ಬೆಂಗಳೂರು: 9,950 ರೂ
ಚೆನ್ನೈ: 10,700 ರೂ
ಮುಂಬೈ: 9,950 ರೂ
ದೆಹಲಿ: 9,950 ರೂ
ಕೋಲ್ಕತಾ: 9,950 ರೂ
ಹೈದರಾಬಾದ್: 10,700 ರೂ
ಪುಣೆ : 9,950 ರೂ
ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಅದನ್ನು ಮೂರು ತಿಂಗಳು ಮುಂದೂಡುವುದು ಉತ್ತಮ. ಏಪ್ರಿಲ್‌ವರೆಗೆ ಕಾದರೆ, ಆ ನಂತರ ಚಿನ್ನದ ಬೆಲೆಗಳು ಕಡಿಮೆಯಾಗುತ್ತವೆ. ಏಕೆಂದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರವು ದರವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಇದರಿಂದಾಗಿ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ.
ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.


Click it and Unblock the Notifications