ಮಹಿಳೆಯರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿತು. ನಿನ್ನೆ ಚಿನ್ನದ ಬೆಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗಿತ್ತು. ಆದರೆ ಇಂದು ಸ್ವಲ್ಪ ನಿರಾಳ ಆಗಬಹುದು. ಏಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ. ದು ಮಹಿಳೆಯರ ಪಾಲಿಗೆ ದೊಡ್ಡ ಗುಡ್‌ನ್ಯೂಸ್ ಎಂದರೂ ತಪ್ಪಾಗಲ್ಲ. ಚಿನ್ನದ ಬೆಲೆಯಲ್ಲಿ ಇಂದು ಪ್ರಮುಖ ಇಳಿಕೆ ಕಂಡುಬಂದಿದ್ದು, ತಯಾರಿಕದರ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆ ಬದಲಾವಣೆಯಿಂದ ಇದು ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಏರಿಳಿತ ಕಂಡುಬರುತ್ತಿದ್ದರೂ, ಇಂದಿನ ಇಳಿಕೆ ಗ್ರಾಹಕರಿಗೆ ಹಾಗೂ ಬಂಗಾರದ ಹೂಡಿಕೆದಾರರಿಗೆ ಉತ್ತಮ ಅವಕಾಶ ಒದಗಿಸಿದೆ.

ಮಹಿಳೆಯರಿಗೆ ಚಿನ್ನದ ಮೇಲಿನ ಪ್ರೀತಿ ಎಂದಿಗೂ ಕಡಿಮೆಯಾಗುವುದೂ ಇಲ್ಲ. ಏಕೆಂದರೆ ಚಿನ್ನ ಒಂದು ಅಮೂಲ್ಯವಾದ ಸಂಪತ್ತಿಗೆ ಸಮಾನ. ಮಹಿಳೆಯರಿಗೆ ಅತೀ ಇಷ್ಟವಾದ ಚಿನ್ನದ ಬೆಲೆ ಕಡಿಮೆಯಾದರೆ, ಅವರಿಗಾಗೋ ಸಂತಸ ಅಷ್ಟಿಷ್ಟಲ್ಲ. ನಾರಿಮಣಿಯರ ಅಲಂಕಾರಕ್ಕೆ ಇನ್ನಷ್ಟು ರೂಪ ಕೊಡುವ ಈ ಚಿನ್ನ ಎಲ್ಲಕ್ಕಿಂತ ಮಿಗಿಲು. ಹೀಗಾಗಿಯೇ ಮಹಿಳೆಯರು ಚಿನ್ನವನ್ನು ಅತಿಹೆಚ್ಚು ಇಷ್ಟ ಪಡುತ್ತಾರೆ. ಈ ಚಿನ್ನ ತನ್ನ ಬೆಲೆ ಎಷ್ಟೇ ಹೆಚ್ಚಿಸಿಕೊಂಡರೂ ಮಹಿಳೆಯರಿಗೆ ಇದರ ಮೇಲಿನ ಆಸಕ್ತಿ ಕೊಂಚವೂ ಕಡಿಮೆಯಾಗುವುದಿಲ್ಲ. ಬೆಳ್ಳಿಯ ದರದಲ್ಲೂ ಸಮಾನ ಪ್ರಮಾಣದ ಇಳಿಕೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ದರ ಹೇಗಿರಲಿದೆ ಎಂಬ ಕುತೂಹಲ ಶುರುವಾಗಿದೆ.
ಚಿನ್ನದ ಬೆಲೆಯಲ್ಲಿನ ಬದಲಾವಣೆಗಳಿಗೆ ಸಾಕಷ್ಟು ಕಾರಣಗಳಿವೆ..ಅಂದರೆ ಜಾಗತಿಕ ಚಿನ್ನದ ಬೆಲೆಗಳು ಪ್ರಮುಖವಾಗಿ ಡಾಲರ್‌ನ ಬಲ, ತೈಲದ ಬೆಲೆಗಳು, ಮತ್ತು ಜಿಯೋಪಾಲಿಟಿಕಲ್ ಘಟನೆಗಳ ಮೇಲೆ ಅವಲಂಬಿತವಾಗಿರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿದಿದ್ದರೆ, ಅದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲಿಯೂ ಕಾಣಬಹುದು.ಅಮೆರಿಕಾದ ಕೇಂದ್ರ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದರೆ, ಹೂಡಿಕೆದಾರರು ಚಿನ್ನದ ಬದಲು ಬಡ್ಡಿದರ ಹೊಂದಿರುವ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸುತ್ತಾರೆ, ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬೆಲೆ ಇಳಿಕೆಗೆ ಕಾರಣವಾಗುತ್ತದೆ.
ಹಾಗೆಯೇ ರೂಪಾಯಿ ಮೌಲ್ಯವು ಡಾಲರ್ ಎದುರು ಬಲವಾಗಿದ್ದರೆ, ಚಿನ್ನದ ಆಮದು ವೆಚ್ಚ ಕಡಿಮೆಯಾಗುತ್ತದೆ, ಇದು ಸ್ಥಳೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಗೆ ಕಾರಣವಾಗಬಹುದು. ವಿವಿಧ ಹಬ್ಬಗಳು, ವಿವಾಹ ಸೀಸನ್ ಮುಂತಾದ ಸಂದರ್ಭಗಳಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುತ್ತದೆ. ಆದರೆ, ಇಂತಹ ಸಂದರ್ಭಗಳಿಲ್ಲದಿದ್ದಾಗ ಅಥವಾ ಆರ್ಥಿಕ ಸ್ಥಿತಿಯಿಂದ ಬೇಡಿಕೆ ಕಡಿಮೆಯಾದಾಗ, ಬೆಲೆ ಇಳಿಯಬಹುದು.
ಭಾರತದಲ್ಲಿ ಚಿನ್ನದ ಬೆಲೆ
22 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,220 ಆಗಿದೆ. ನಿನ್ನೆ ಇದರ ಬೆಲೆ ₹8,230 ಆಗಿದ್ದು ನಿನ್ನೆಗಿಂತ ಇಂದು, ₹10 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹82,200 ಆಗಿದೆ. ನಿನ್ನೆಯ ಬೆಲೆ ₹82,300 ಆಗಿದ್ದು ನಿನ್ನೆಗಿಂತ ಇಂದಿಗೆ ₹100 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ 22 ಸಾವಿರ ರೂ. ಆಗಿದೆ. ನಿನ್ನೆಯ ಬೆಲೆ ₹8,23,000 ರೂ. ಆಗಿದ್ದು ನಿನ್ನೆಗಿಂತ ಇಂದು ₹1,000 ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,967 ಆಗಿದೆ. ನಿನ್ನೆ ಇದರ ಬೆಲೆ ₹8,978 ಆಗಿದ್ದು ನಿನ್ನೆಗಿಂತ ಇಂದು, ₹11 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹89,670 ಆಗಿದೆ. ನಿನ್ನೆಯ ಬೆಲೆ ₹89,780 ಆಗಿದ್ದು ನಿನ್ನೆಗಿಂತ ಇಂದಿಗೆ ₹110 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷ 96 ಸಾವಿರದ 700 ರೂ. ಆಗಿದೆ. ನಿನ್ನೆಯ ಬೆಲೆ 8 ಲಕ್ಷ 97 ಸಾವಿರದ 800 ರೂ. ಆಗಿದ್ದು ನಿನ್ನೆಗಿಂತ ಇಂದು ₹1,100 ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹6,726 ಆಗಿದೆ. ನಿನ್ನೆ ಇದರ ಬೆಲೆ ₹6,734 ಆಗಿದ್ದು ನಿನ್ನೆಗಿಂತ ಇಂದು, 8 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹67,260 ಆಗಿದೆ. ನಿನ್ನೆಯ ಬೆಲೆ ₹67,340 ಆಗಿದ್ದು ನಿನ್ನೆಗಿಂತ ಇಂದಿಗೆ 80 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 6 ಲಕ್ಷ 72 ಸಾವಿರದ 600 ರೂ. ಆಗಿದೆ. ನಿನ್ನೆಯ ಬೆಲೆ 6 ಲಕ್ಷ 73 ಸಾವಿರದ 400 ರೂ. ಆಗಿದ್ದು ನಿನ್ನೆಗಿಂತ ಇಂದು 800 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,220 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,967 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,780 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,220 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,967 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,726 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,235 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,982 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,738 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,220 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,967 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,726 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,220 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,967 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,726 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,220 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,967 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,726 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,220 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,967 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,726 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,972 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,730 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,225 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,972 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,730 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ದರ:
ಇನ್ನು ಇಂದು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ನಿನ್ನೆ ಎಷ್ಟಿತ್ತೋ ಅಷ್ಟೇ ದರ ಕಾಯ್ದಿರಿಸಿಕೊಂಡಿದೆ. ಅಂದರೆ ಒಂದು ಗ್ರಾಂ ಬೆಳ್ಳಿಗೆ ₹103, ಹತ್ತು ಗ್ರಾಂ ಬೆಳ್ಳಿಗೆ ₹1,030, ಹಾಗೆಯೇ ನೂರು ಗ್ರಾಂ ಬೆಳ್ಳಿಗೆ ₹10,300 ಎನ್ನಲಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ದರ ₹1,03,000 ಎನ್ನಲಾಗಿದ್ದು, ಈ ದರ ನಿನ್ನೆಯಷ್ಟೇ ಕಾಯ್ದಿರಿಸಿಕೊಂಡಿದೆ.
ಸ್ಪಾಟ್ ಗೋಲ್ಡ್ ಬೆಲೆ:
ಸ್ಪಾಟ್ ಗೋಲ್ಡ್ ಬೆಲೆ ಮಾರ್ಚ್ 14ರ 0330 GMT ವೇಳೆಗೆ $2,987.51 ಆಗಿತ್ತು. ಆದರೆ, ಈ ಹಿಂದೆ ಚಿನ್ನ $2,990.09 ದರವನ್ನು ತಲುಪಿತ್ತು, ಇದು ಇತಿಹಾಸದಲ್ಲೇ ಗರಿಷ್ಠ ಮಟ್ಟ ಎನ್ನಬಹುದಾಗಿದೆ. ಚಿನ್ನದ ದರವು $3,000 ಗಡಿ ಹತ್ತಿರ ಮುನ್ನಡೆಯುತ್ತಿದೆ, ಇದು ಹೂಡಿಕೆದಾರರಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ. ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು ಈ ವಾರದ ದರದಲ್ಲಿ 2.5% ಏರಿಕೆಯಾಗಿದೆ. ಅಮೇರಿಕಾದ ಚಿನ್ನದ ಭವಿಷ್ಯ ಉಳಿತಾಯ ದರ 0.3% ಏರಿಕೆ ಕಂಡು $3,000.20 ಆಗಿದೆ.
ಚಿನ್ನದ ಬೆಲೆ ಇಳಿಕೆಗೆ ಹಲವಾರು ಆಂತರಿಕ ಮತ್ತು ಬಾಹ್ಯ ಆರ್ಥಿಕ ಅಂಶಗಳು ಕಾರಣವಾಗಬಹುದು. ಮುಖ್ಯವಾಗಿ, ಡಾಲರ್ ಮೌಲ್ಯ ಹೆಚ್ಚಾದಾಗ, ಚಿನ್ನದ ಬೆಲೆ ಸಾಮಾನ್ಯವಾಗಿ ಇಳಿಕೆಯಾಗುತ್ತದೆ, ಏಕೆಂದರೆ ಚಿನ್ನವನ್ನು ಡಾಲರ್‌ನಲ್ಲಿ ವ್ಯಾಪಾರ ಮಾಡಲಾಗುತ್ತದೆ. ಆರ್ಥಿಕ ಬೆಳವಣಿಗೆ ಉತ್ತಮವಾಗಿರುವಾಗ, ಹೂಡಿಕೆದಾರರು ಷೇರುಪೇಟೆ ಮತ್ತು ಇತರ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಪ್ರಾಧಾನ್ಯ ನೀಡುತ್ತಾರೆ, ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುತ್ತದೆ. ಕೇಂದ್ರ ಬ್ಯಾಂಕುಗಳು ಬಡ್ಡಿದರಗಳನ್ನು ಹೆಚ್ಚಿಸಿದರೆ, ಬಡ್ಡಿ ಆದಾಯ ನೀಡದ ಚಿನ್ನದ ಮೇಲೆ ಹೂಡಿಕೆ ಮಾಡುವ ಆಸಕ್ತಿ ಕಡಿಮೆಯಾಗುತ್ತದೆ. ಚಿನ್ನದ ಗಣಿಗಾರಿಕೆ ಮತ್ತು ಪೂರೈಕೆ ಹೆಚ್ಚಾದರೆ, ಬೆಲೆ ಇಳಿಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಹೆಚ್ಚೇನು ಇಳಿದಿಲ್ಲ. ಹೀಗಾಗಿ ಮಹಿಳೆಯರು ಸ್ವಲ್ಪ ಮಾತ್ರ ನಿರಾಳವಾಗಬಹುದು.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications