ಚಿನ್ನ ಕೊಳ್ಳುವರಿಗೆ ಸಿಹಿಸುದ್ದಿ...ಬಂಗಾರದ ಬೆಲೆ ಇಂದು ಇಳಿಕೆಯಾಗಿದೆ.ಹೌದು,ಬಂಗಾರ ಮಾರುಕಟ್ಟೆಯಲ್ಲಿ ಸತತವಾಗಿ ಏರಿಕೆ ಕಂಡಿದ್ದು, ಇಂದು ಇಳಿಕೆ ಕಂಡಿದೆ.ಬೆಳ್ಳಿಯ ಬೆಲೆ ಕೂಡ ಕೊಂಚ ಇಳಿಕೆಯಾಗಿದೆ. ಬಹುದಿನಗಳಿಂದ ಚಿನ್ನದ ಬೆಲೆ ಏರಿಕೆಯಿಂದ ನಿರಸೆಗೊಂಡಿದ್ದ ಜನರಿಗೆ ಶುಭ ಸುದ್ದಿ ಸಿಕ್ಕಿದೆ. ಇಂದು ಚಿನ್ನದ ಇಳಿಕೆಯಾಗಿರುವುದರಿಮದ ಚಿನ್ನದ ಖರೀದಿಗೆ ಇಂದೇ ಸೂಕ್ತ ದಿನವಾಗಿದೆ. ಯುಎಸ್ ಡಾಲರ್ ಬಲವರ್ಧನೆಯಿಂದಾಗಿ ಚಿನ್ನದ ಬೆಲೆ ಏರಿಕೆಯಾಗಿತ್ತು. ಇಂದು ಡಾಲರ್ ದರದಲ್ಲಿ ಏರಿಳಿತಗಳನ್ನ ಕಂಡ ನಂತರ ಇದು ಚಿನ್ನದ ದರದ ಮೇಲೂ ಕೂಡ ಪರಿನಾಮ ಬೀರಿದೆ. ಹಾಗಿದ್ರೆ ಭಾರತದಲ್ಲಿ ಬುಧುವಾರದಂದು ( ಜ.27) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಇಂದು ಚಿನ್ನದ ಮಾರುಕಟ್ಟೆ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 75,400 ಕ್ಕೆ ರೂಪಾಯಿಇದೆ. ಅಪರಂಜಿ 24 ಕ್ಯಾರಟ್ನ ಚಿನ್ನದ ಬೆಲೆ ರೂಪಾಯಿ 82,250 ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಎಷ್ಟಿದೆ?
ಭಾರತದಲ್ಲಿ ಚಿನ್ನದ ದರ ಇಂದು ಇಳಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,540 ರೂಪಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,225 ರೂಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 75,400 ರೂಗಳ ವಾಹಿವಾಟುವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 82,250 ರೂ.ಗಳ ವ್ಯಾಪಾರವಿದೆ.
ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,54,000 ರೂ ಇದೆ.ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,22,500 ರೂ.ಗಳ ವಹಿವಾಟುವಿದೆ.ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ರೆ ಅಪರಂಜಿ ಚಿನ್ನದಲ್ಲಿ1,700 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 61,690 ರೂ ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಯಲ್ಲಿ ಇಂದು ಸ್ಥಿರವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 96,500 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 96.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 965 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,650 ರೂ ಗಳು ವ್ಯಾಪಾರವಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
MCX ಚಿನ್ನದ ಬೆಲೆಗಳು ಮತ್ತು ಬೆಳ್ಳಿ ಬೆಲೆಗಳು ಇಳಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.26% ನಷ್ಟು ಇಳಿಕೆಯಾಗಿ 79,820 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 1.01% ನಷ್ಟು ಇಳಿಕೆಯಾಗಿ 90,678 ರೂಪಾಯಿ ವಹಿವಾಟು ನಡೆಸುತ್ತಿದೆ. ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಈ ತಿಂಗಳಿನಲ್ಲಿ ಏರಿಳಿತಗಳನ್ನ ಗಮನಿಸುವಂತಾಯಿತು. ಹಳದಿ ಲೋಹಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗ್ತಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಇಳಿಕೆಯಾಗಿವೆ. ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.54% ಇಳಿಕೆಯಾಗಿ 2,756.45 ಡಾಲರ್ ತಲುಪಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 1.05% ಇಳಿಕೆಯಾಗಿ 30.29 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.11% ಇಳಿಕೆಯಾಗಿ 946.75 ಡಾಲರ್ ತಲುಪಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 1.22% ಇಳಿಕೆಯಾಗಿ 973.00 ಡಾಲರ್ ತಲುಪಿದೆ. ರಾಯಿಟರ್ಸ್ ವರದಿ ಪ್ರಕಾರ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ನೀತಿಗಳು ಮತ್ತು ಯುಎಸ್ ಡಾಲರ್ ಅನಿಶ್ಚಿತತೆಗಳ ನಡುವೆ ಚಿನ್ನದ ದರಗಳು ನಿನ್ನೆ ಸಾಕಷ್ಟು ಎರಿಕೆಯನ್ನು ಕಂಡಿವೆ.
ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ
| ನಗರ | 22ಕ್ಯಾರೆಟ್ | 24K ಕ್ಯಾರೆಟ್ |
| ಬೆಂಗಳೂರು | 7,525 | 8,225 |
| ಚೆನ್ನೈ | 7,540 | 8,225 |
| ಮುಂಬೈ | 7,540 | 8,225 |
| ದೆಹಲಿ | 7,540 | 8,225 |
| ಕೋಲ್ಕತಾ | 7,540 | 8,225 |
| ಹೈದರಾಬಾದ್ | 7,540 | 8,225 |
| ಪುಣೆ | 7,540 | 8,225 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
| ಬೆಂಗಳೂರು | 9,650ರೂ |
| ಚೆನ್ನೈ | 10,400 ರೂ |
| ಮುಂಬೈ | 9,650ರೂ |
| ದೆಹಲಿ | 9,650ರೂ |
| ಕೋಲ್ಕತಾ | 9,650ರೂ |
| ಹೈದರಾಬಾದ್ | 10,400 ರೂ |
| ಪುಣೆ | 9,650ರೂ |
ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.


Click it and Unblock the Notifications