ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ಹೌದು,ಚಿನ್ನ ಮಾರುಕಟ್ಟೆ ಮಹಿಳೆಯರಿಗೆ ಶಾಕ್ ಕೊಟ್ಟಿದೆ. ಬೆಳ್ಳಿಯ ಬೆಲೆ ಸಹ ಇಂದು ಏರಿಕೆ ಕಂಡಿದೆ. ಮತ್ತೆ ಚಿನ್ನ ತನ್ನ ಓಟವನ್ನ ಮುಂದುವರೆಸಿದೆ. ಬಹುದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ಮತ್ತೆ ನಿರಾಸೆಯಾಗಿದೆ. ಹಾಗಿದ್ರೆ ಭಾರತದಲ್ಲಿ ಗುರುವಾರದಂದು ( ಜ.30) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬಂಗಾರದ ಮಾರುಕಟ್ಟೆಯಲ್ಲಿ ಇಂದು ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 76,100 ರೂಪಾಯಿ ಇದೆ. ಅಪರಂಜಿ 24 ಕ್ಯಾರಟ್ನ ಚಿನ್ನದ ಬೆಲೆ ರೂಪಾಯಿ 83,020 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,610 ರೂಪಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,302 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 76,100 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 83,020 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ ನಿನ್ನೆ 7,59,500 ಇದ್ದದ್ದು 7,61,000 ರೂ.ಗಳು ಆಗಿದ್ದು, 1,500 ರೂ.ಗಳ ಏರಿಕೆ ಕಂಡಿದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ ನಿನ್ನೆ 8,28,500 ರೂ. ಇದ್ದದ್ದು 8,30,200 ರೂ.ಗಳು ಆಗಿದ್ದು, 1,300ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 62,270 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಯಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 98,500 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 98.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 985 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,850ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ನಿನ್ನೆ ಯಾವುದೇ ಬದಲಾಣೆ ಕಂಡಿರಲ್ಲಿಲ್ಲ ಅಂದ್ರೆ ಇಂದು ಏರಿಕೆ ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.27% ನಷ್ಟು ಏರಿಕೆಯಾಗಿ 80,500 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.62% ನಷ್ಟು ಏರಿಕೆಯಾಗಿ 92,438 ರೂಪಾಯಿ ವಹಿವಾಟು ನಡೆಸುತ್ತಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಏರಿಕೆಯಾಗಿದೆ. ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.12% ಏರಿಕೆಯಾಗಿ 2,763.14 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.19% ಏರಿಕೆಯಾಗಿ 30.90 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 1.58% ಏರಿಕೆಯಾಗಿ 964.25 ಡಾಲರ್ ತಲುಪಿದೆ.
ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ
| ನಗರ | 22ಕ್ಯಾರೆಟ್ | 24K ಕ್ಯಾರೆಟ್ |
| ಬೆಂಗಳೂರು | 7,610 | 8,302 |
| ಚೆನ್ನೈ | 7,610 | 8,302 |
| ಮುಂಬೈ | 7,595 | 8,285 |
| ದೆಹಲಿ | 7,625 | 8,317 |
| ಕೋಲ್ಕತಾ | 7,610 | 8,302 |
| ಹೈದರಾಬಾದ್ | 7,610 | 8,302 |
| ಪುಣೆ | 7,610 | 8,302 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
| ಬೆಂಗಳೂರು | 9,850 ರೂ |
| ಚೆನ್ನೈ | 10,600ರೂ |
| ಮುಂಬೈ | 9,850 ರೂ |
| ದೆಹಲಿ | 9,850 ರೂ |
| ಕೋಲ್ಕತಾ | 9,850 ರೂ |
| ಹೈದರಾಬಾದ್ | 10,600ರೂ |
| ಪುಣೆ | 9,850 ರೂ |
ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.


Click it and Unblock the Notifications