ಬಜೆಟ್‌ಗೂ ಮೊದಲೇ ಶಾಕ್! ಚಿನ್ನದ ಬೆಲೆ ಸತತ ಏರಿಕೆ.. ಬೆಳ್ಳಿಯೂ ದುಬಾರಿ.. ನಾಳೆ ಕಡಿಮೆ ಆಗುತ್ತಾ?

ಬಜೆಟ್‌ಗೂ ಮೊದಲೇ ಶಾಕ್! ಚಿನ್ನದ ಬೆಲೆ ಸತತ ಏರಿಕೆ. ಹೌದು, ಚಿನ್ನ ಮಾರುಕಟ್ಟೆ ಮಹಿಳೆಯರಿಗೆ ಶಾಕ್ ಕೊಟ್ಟಿದೆ. ಬೆಳ್ಳಿಯ ಬೆಲೆ ಸಹ ತನ್ನ ಏರಿಕೆಯ ಓಟವನ್ನು ಮುಂದುವರಿಸಿದೆ. ಬಹುದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ಮತ್ತೆ ನಿರಾಸೆಯಾಗಿದೆ. ಬಜೆಟ್ ದಿನವಾದರೂ ಚಿನ್ನದ ಬೆಲೆ ಕಡಿಮೆಯಾಗುತ್ತಾ ಎಂಬುವುದನ್ನು ಕಾದು ನೋಡಬೇಕಿದೆ.ಹಾಗಿದ್ರೆ ಭಾರತದಲ್ಲಿ ಶುಕ್ರವಾರದಂದು( ಜ.31) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಹೌದು,ಬಂಗಾರದ ಮಾರುಕಟ್ಟೆಯಲ್ಲಿ ಇಂದು ಏರಿಕೆ ಕಂಡಿದೆ.ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 77,300 ರೂಪಾಯಿ ಇದೆ.ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ ರೂಪಾಯಿ 84,330 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಬಜೆಟ್ ಮುನ್ನ ಚಿನ್ನದ ಬೆಲೆ ಏರಿಕೆ ಎಷ್ಟು?

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?

ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,730 ರೂಪಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,433 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 77,300 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್‌ ಅಪರಂಜಿ ಚಿನ್ನದ ಬೆಲೆ 84,330 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.

ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,73,000 ಆಗಿದೆ. 12,000 ಏರಿಕೆ ಕಂಡಿದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,43,300 ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 13,100 ರೂ.ಗಳ ಏರಿಕೆ ಕಂಡಿದೆ.18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 63,250 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ.

ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?

ಬೆಳ್ಳಿಯ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,500 ರೂಪಾಯಿಗಳು ವಾಹಿವಾಟುವಿದೆ. ಇದೇ ಬೆಳ್ಳೆಯ ಬೆಲೆಯನ್ನು ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 99.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 995 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,950 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡಿದೆ.

MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?

MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆಗಳು ಇಂದು ಏರಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.27% ನಷ್ಟು ಏರಿಕೆಯಾಗಿ 80,500 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.62% ನಷ್ಟು ಏರಿಕೆಯಾಗಿ 92,438 ರೂಪಾಯಿ ವಹಿವಾಟು ನಡೆಸುತ್ತಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ?

ಸ್ಪಾಟ್‌ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಏರಿಕೆಯಾಗಿದೆ. ವರದಿ ಪ್ರಕಾರ ಸ್ಪಾಟ್‌ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.12% ಏರಿಕೆಯಾಗಿ 2,763.14 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.19% ಏರಿಕೆಯಾಗಿ 30.90 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್‌ ಬೆಲೆಯು ಪ್ರತಿ ಔನ್ಸ್‌ಗೆ 1.58% ಏರಿಕೆಯಾಗಿ 964.25 ಡಾಲರ್‌ ತಲುಪಿದೆ.

ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ

ನಗರ 22ಕ್ಯಾರೆಟ್24k ಕ್ಯಾರೆಟ್
ಬೆಂಗಳೂರು 7,730 8,433
ಚೆನ್ನೈ 7,730 8,433
ಮುಂಬೈ 7,730 8,433
ದೆಹಲಿ 7,745 8,448
ಕೋಲ್ಕತಾ 7,730 8,433
ಹೈದರಾಬಾದ್ 7,730 8,433
ಪುಣೆ 7,730 8,433

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಂ)

ಬೆಂಗಳೂರು9,950 ರೂ
ಚೆನ್ನೈ 10,700ರೂ
ಮುಂಬೈ 9,950 ರೂ
ದೆಹಲಿ 9,950 ರೂ
ಕೋಲ್ಕತಾ 9,950 ರೂ
ಹೈದರಾಬಾದ್ 10,700ರೂ
ಪುಣೆ 9,950 ರೂ

ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+