ಪ್ರೇಮಿಗಳಿಗೆ ಶಾಕ್! ಪ್ರೇಮಿಗಳ ದಿನದಂದು ಚಿನ್ನದ ಬೆಲೆ ಏರಿಕೆ ಕಂಡಿದೆ. ಮೊದಲ ವಾರದಿಂದ ಚಿನ್ನದ ಬೆಲೆ ಹಾವು ಏಣಿ ಆಟವನ್ನು ಆಡುತ್ತಿದೆ. ಚಿನ್ನ ಏರಿಕೆಯಾಗಿರುವುದರಿಂದ ಪ್ರೇಮಿಗಳಿಗೆ ನಿರಾಸೆಯಾಗಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ಕೂಡ ಏರಿಕೆ ಕಂಡಿದೆ.ಹಾಗಿದ್ರೆ, ಭಾರತದಲ್ಲಿ ಶುಕ್ರವಾರ ( ಫೆ.14) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೌದು,ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಏರಿಕೆ ಕಂಡಿದೆ. ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 79,900 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 87,160 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಹತ್ತು ಗ್ರಾಂ ಚಿನ್ನ ಬೆಲೆ 110 ರೂ.ಗಳ ಏರಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,990 ರೂಪಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,716 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 79,900 ರೂ.ಗಳು ಇದೆ. 10 ಗ್ರಾಂನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 87,160 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
ಇನ್ನೂ100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,99,000 ರೂ.ಗಳು ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,71,600ರೂಪಾಯಿ ಇದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 1,100 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 65,380 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆ ಏರಿಕೆ ಮಾಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಗಳು ಇಂದು ಸ್ಥಿರವಾಗಿದೆ.ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,00,500 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 100.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ1,005 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,050 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
MCX ಬಿಗಿಯಾದ ವ್ಯಾಪ್ತಿಯಲ್ಲಿ ವಹಿವಾಟು ನಡೆಸಿತು ಮತ್ತು ದೈನಂದಿನ ಚಾರ್ಟ್‌ನಲ್ಲಿ ಬುಲಿಶ್ ಕ್ಯಾಂಡಲ್ ರಚನೆಯೊಂದಿಗೆ ಮುಕ್ತಾಯವಾಯಿತು. ಬೆಲೆ ಕ್ರಮ ಮತ್ತು ಮಾದರಿಯು ಬಲವಾದ ಖರೀದಿ ಆಸಕ್ತಿಯನ್ನು ಸ್ಪಷ್ಟವಾಗಿ ಚಿತ್ರಿಸುತ್ತದೆ, ಸರಕು ನಿರಂತರವಾಗಿ ಹೆಚ್ಚಿನ ಗರಿಷ್ಠ ಮತ್ತು ಹೆಚ್ಚಿನ ಕನಿಷ್ಠಗಳನ್ನು ರೂಪಿಸುತ್ತದೆ.
MCX ಚಿನ್ನ 85800 ಕ್ಕಿಂತ ಹೆಚ್ಚಾದರೆ, ಅದು 86200/86500 ಮಟ್ಟಗಳ ಕಡೆಗೆ ಮುನ್ನಡೆಯಬಹುದು. ಇದಕ್ಕೆ ವಿರುದ್ಧವಾಗಿ, 85500/85250 ಮಟ್ಟಗಳಲ್ಲಿ ಬೆಂಬಲ ಕಂಡುಬರುತ್ತದೆ. ಸರಕು ಹೆಚ್ಚಿನ ಚಂಚಲತೆಗೆ ಸಾಕ್ಷಿಯಾಗಬಹುದಾದ ನಿರ್ಣಾಯಕ ವಲಯದಲ್ಲಿ ವಹಿವಾಟು ನಡೆಸುತ್ತಿರುವುದರಿಂದ ವ್ಯಾಪಾರಿಗಳು ಬಿಗಿಯಾದ ಸ್ಟಾಪ್ ನಷ್ಟಗಳನ್ನು ಕಾಯ್ದುಕೊಳ್ಳಲು ಸೂಚಿಸಲಾಗಿದೆ ಎಂದು ವೇ2ವೆಲ್ತ್ ಬ್ರೋಕರ್ಸ್ ಪ್ರೈ. ಲಿಮಿಟೆಡ್‌ನ ಸಂಶೋಧನಾ ಸಹಾಯಕ ಜೆಬರಿಸ್ ನಾಡರ್ ಅಭಿಪ್ರಾಯಪಟ್ಟಿದ್ದಾರೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಶುಕ್ರವಾರ ಚಿನ್ನದ ಬೆಲೆಗಳು ಸ್ಥಿರವಾಗಿದ್ದವು, ಯುಎಸ್ ಚಿನ್ನದ ಭವಿಷ್ಯವು ಶೇ.0.4 ಏರಿಕೆಯಾಗಿ $2,957.40 ಕ್ಕೆ ತಲುಪಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.ಆದರೆ ಮಂಗಳವಾರ ಬುಲಿಯನ್ $2,942.70 ರ ಹೊಸ ಗರಿಷ್ಠ ಮಟ್ಟವನ್ನು ತಲುಪಿದ ನಂತರ 0303 GMT ರ ಹೊತ್ತಿಗೆ ಸ್ಪಾಟ್ ಚಿನ್ನವು ಔನ್ಸ್‌ಗೆ $2,929.05 ರಷ್ಟು ಸ್ಥಿರವಾಗಿತ್ತು. ಸ್ಪಾಟ್ ಬೆಳ್ಳಿಯ ಬೆಲೆ 0.4% ಏರಿಕೆಯಾಗಿ ಔನ್ಸ್‌ಗೆ $32.50 ಕ್ಕೆ ತಲುಪಿದೆ. ಪಲ್ಲಾಡಿಯಮ್ ಶೇ.0.6 ಏರಿಕೆಯಾಗಿ $999.77 ಕ್ಕೆ ತಲುಪಿದೆ ಮತ್ತು ಪ್ಲಾಟಿನಂ ಶೇ.0.3 ಏರಿಕೆಯಾಗಿ $997.65 ಕ್ಕೆ ತಲುಪಿದೆ.
ವಿವಿಧ ನಗರಗಳಲ್ಲಿರುವ ಗೋಲ್ಡ್ ರೇಟ್ ವಿವರ
ನಗರ 22ಕ್ಯಾರೆಟ್ 24K ಕ್ಯಾರೆಟ್
ಬೆಂಗಳೂರು 7,990 8,716
ಚೆನ್ನೈ 7,990 8,716
ಮುಂಬೈ 7,990 8,716
ದೆಹಲಿ 8,005 8,731
ಕೋಲ್ಕತಾ 7,990 8,716
ಹೈದರಾಬಾದ್ 7,990 8,716
ಪುಣೆ 7,990 8,716
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)
ಬೆಂಗಳೂರು: 1,005ರೂ
ಚೆನ್ನೈ: 10,800 ರೂ
ಮುಂಬೈ:1,005ರೂ
ದೆಹಲಿ: 1,005ರೂ
ಕೋಲ್ಕತಾ: 1,005 ರೂ
ಹೈದರಾಬಾದ್: 10,800 ರೂ
ಪುಣೆ : 1,005 ರೂ
ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಅದನ್ನು ಮೂರು ತಿಂಗಳು ಮುಂದೂಡುವುದು ಉತ್ತಮ. ಏಪ್ರಿಲ್‌ವರೆಗೆ ಕಾದರೆ, ಆ ನಂತರ ಚಿನ್ನದ ಬೆಲೆಗಳು ಕಡಿಮೆಯಾಗುತ್ತವೆ. ಏಕೆಂದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರವು ದರವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಇದರಿಂದಾಗಿ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ.
ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications