ಮೇ 24, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ನಿನ್ನೆ ಚಿನ್ನಪ್ರಿಯರಿಗೆ ಖುಷಿ ನೀಡಿದ್ದ ಚಿನ್ನದ ಬೆಲೆ ಇಂದು ಕಹಿ ನೀಡಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಭಾರಿ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನದಲ್ಲಿ ಇಂದು ದಿಢೀರ್ ₹5,500 ಏರಿಕೆಯಾಗಿದೆ. ಹತ್ತು ಲಕ್ಷದ ಸಮೀಪಕ್ಕೆ ಬಂದಿರುವ 100 ಗ್ರಾಂ ಚಿನ್ನದ ಬೆಲೆ ಹೂಡಿಕೆದಾರರ ಜೇಬಿಗೆ ಬಿಸಿ ಮುಟ್ಟಿಸುತ್ತಿದೆ. ಭಾರಿ ಬೆಲೆಯಲ್ಲಿ ಇಳಿಕೆಯಾಗಿದ್ದನ್ನು ಕಂಡ ಚಿನ್ನಪ್ರಿಯರು ನಿರಾಳವಾಗಿದ್ದರು. ಆದರೆ ಇಂದು ಅವರ ನಿರಾಳೆತೆಗೆ ನೀರೆರಚಿ ಎಬ್ಬಿಸಿದಂತಾಗಿದೆ. ಏಕೆಂದರೆ ನಿನ್ನೆ ದಾಖಲೆಯಷ್ಟು ಕುಸಿದಿದ್ದ ಚಿನ್ನದ ಬೆಲೆ, ಇಂದು ದಾಖಲೆಯಷ್ಟೇ ಏರಿಕೆಯಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ಕೊಂಚ ತಣ್ಣಗಾದ ಬೆನ್ನಲ್ಲೇ ಚಿನ್ನದ ಬೆಲೆಯು ಭಾರಿ ಪ್ರಮಾಣದಲ್ಲಿ ಏರಿಳಿತ ನೋಡುತ್ತಿದೆ. ಈ ಕುಸಿತವು ಮುಖ್ಯವಾಗಿ ಭಾರತ-ಪಾಕಿಸ್ತಾನ ಉದ್ವಿಗ್ನತೆ ಮತ್ತು ದುರ್ಬಲ ಜಾಗತಿಕ ಬೇಡಿಕೆಯಿಂದಾಗಿ ಸಂಭವಿಸಿದೆ. ಹೆಚ್ಚುವರಿಯಾಗಿ, ಯುಎಸ್ ಮತ್ತು ಚೀನಾ ಎರಡೂ ಸುಂಕ ಹೆಚ್ಚಳವನ್ನು 90 ದಿನಗಳವರೆಗೆ ವಿರಾಮಗೊಳಿಸಲು ಒಪ್ಪಿಕೊಂಡ ನಂತರ ಅಂತರರಾಷ್ಟ್ರೀಯ ಭಾವನೆ ಬದಲಾಯಿತು, ಇದು ಸುರಕ್ಷಿತ ಸ್ವತ್ತುಗಳ ತಕ್ಷಣದ ಆಕರ್ಷಣೆಯನ್ನು ಕಡಿಮೆ ಮಾಡಿತು.
ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,808 ಇದೆ. ಅಂದರೆ ನಿನ್ನೆ ₹9,753 ಆಗಿದ್ದು ಇಂದು ₹55 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 98 ಸಾವಿರದ 80 ರೂ. ಇದೆ. ಅಂದರೆ ನಿನ್ನೆ 97 ಸಾವಿರದ 530 ರೂ. ಆಗಿದ್ದು ಇಂದು ₹550 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 80 ಸಾವಿರದ 800 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 75 ಸಾವಿರದ 300 ರೂ. ಆಗಿದ್ದು ಇಂದು ₹5,500 ಹೆಚ್ಚಳವಾಗಿದೆ.
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,990 ಇದೆ.ಅಂದರೆ ನಿನ್ನೆ ₹8,940 ಆಗಿದ್ದು ಇಂದು ₹50 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದಬೆಲೆ 10 ಗ್ರಾಂಗೆ ₹89 ಸಾವಿರದ 900 ರೂ. ಇದೆ. ಅಂದರೆ ನಿನ್ನೆ ₹89 ಸಾವಿರದ 400 ರೂ. ಆಗಿದ್ದು ಇಂದು ₹500 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 99 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 94 ಸಾವಿರ ರೂ. ಆಗಿದ್ದು ಇಂದು ₹5,000 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,356 ಇದೆ. ಅಂದರೆ ನಿನ್ನೆಯ ಬೆಲೆ ₹7,315 ಆಗಿದ್ದು ಇಂದು ಪ್ರತಿ ಗ್ರಾಂಗೆ ₹41 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹73 ಸಾವಿರದ 560 ರೂ. ಇದೆ. ಅಂದರೆ ನಿನ್ನೆಯ ಬೆಲೆ ₹73 ಸಾವಿರದ 150 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹410 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 35 ಸಾವಿರದ 600 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 31 ಸಾವಿರದ 500 ರೂ. ಆಗಿದ್ದು ಇಂದು ₹4,100 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,808 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,410 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,808 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,356 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,823 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,005 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,808 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,356 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,808 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,356 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,808 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,356 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,808 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,356 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,808 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,990 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,356 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,813 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,995 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,360 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,813 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹8,995 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,360 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹99.90 ಆಗಿದೆ. ನಿನ್ನೆ ಈ ಬೆಲೆ ₹100 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹0.10 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹999 ಆಗಿದೆ. ನಿನ್ನೆ ಈ ಬೆಲೆ ₹1,000 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹9,990 ಆಗಿದೆ. ನಿನ್ನೆ ಈ ಬೆಲೆ ₹10,000 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹10 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹99,900 ಆಗಿದೆ. ನಿನ್ನೆ ಈ ಬೆಲೆ ₹1,00,000 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹100 ಇಳಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಮೇ 16ರಂದು, 4:29 GMT ವೇಳೆಗೆ ಸ್ಪಾಟ್ ಚಿನ್ನದ ಬೆಲೆ 0.8% ರಷ್ಟು ಇಳಿಕೆ ನೋಡಿದೆ. ಅಲ್ಲದೇ ಸ್ಪಾಟ್ ಚಿನ್ನದ ದರವು ಪ್ರತಿ ಔನ್ಸ್‌ಗೆ $3,213.56ರಷ್ಟು ವಹಿವಾಟು ನಡೆಸಿದೆ. 2025ರ ಮೇ ತಿಂಗಳಲ್ಲಿ ಬಂಗಾರದ ಮೌಲ್ಯ ತೀವ್ರ ಕುಸಿತಕ್ಕೊಳಗಾಗಿದ್ದು, ಡಾಲರ್ ಬಲ, ವ್ಯಾಪಾರ ಚಟುವಟಿಕೆಗಳು ಸ್ಥಿರವಾಗಿರುವುದು ಮತ್ತು ಗರಿಷ್ಠ ಬಡ್ಡಿದರ ನಿರೀಕ್ಷೆಗಳೇ ಇದರ ಹಿಂದೆ ಪ್ರಮುಖ ಕಾರಣಗಳಾಗಿವೆ.
ಸ್ಪಾಟ್ ಚಿನ್ನದ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ, ಮೇ 23 ರಂದು ಸ್ಪಾಟ್ ಚಿನ್ನದ ದರವು 0.80% ಹೆಚ್ಚಳವಾಗಿದೆ. ಅಂದರೆ ಇದು ಪ್ರತಿ ಔನ್ಸ್‌ಗೆ $3,32049 ವಹಿವಾಟು ನಡೆಸಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!



Click it and Unblock the Notifications